ಕಲಬುರಗಿ | ಬಸವಣ್ಣನವರ ಕುರಿತು ಅವಹೇಳನ : ಶಾಸಕ ಯತ್ನಾಳ್ ಕ್ಷಮೆಗೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹ

Date:

Advertisements

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡಲೇ ಕ್ಷಮೆಯಾಚಿಸಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾ ಜೇವರ್ಗಿ ತಾಲ್ಲೂಕು ಘಟಕದ ಅಧ್ಯಕ್ಷ ನೀಲಕಂಠ ಅವಂಟಿ ಆಗ್ರಹಿಸಿದ್ದಾರೆ.

ಕಲಬುರಗಿ ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಇತ್ತೀಚೆಗೆ ಬಿಜೆಪಿಯಿಂದ ಬೀದರ್‌ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಬಸವಣ್ಣನವರು ಹೊಳೆಗೆ ಹಾರಿ ಪ್ರಾಣ ಬಿಟ್ಟರು ಎಂಬ ಆಧಾರ ರಹಿತ ಸುಳ್ಳನ್ನು ತಮ್ಮ ಭಾಷಣದಲ್ಲಿ ಹೇಳಿಕೆ ನೀಡಿರುವುದು ಖಂಡನಾರ್ಹವಾಗಿದೆ’ ಎಂದರು.

ಬಸವಣ್ಣನವರ ಬಗ್ಗೆ ಶಾಸಕ ಯತ್ನಾಳ್ ಬಹಳ ಹಗುರವಾಗಿ ಮಾತನಾಡಿ ಅಕ್ಷಮ್ಯ ಅಪರಾಧ ಎಸಗಿದ್ದಾರೆ. ಕೂಡಲೇ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಅವರ ವಿರುದ್ಧ ಕಾನೂನು ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

Advertisements

ಲಿಂಗಾಯತ ಧರ್ಮ ಸಂಸ್ಥಾಪಕ ವಿಶ್ವಗುರು ಬಸವಣ್ಣನವರನ್ನು ಅಪಮಾನಿಸಿದ ಯತ್ನಾಳ್ ಅವರಿಗೆ ಇನ್ಮುಂದೆ ಪಕ್ಷ ಹಾಗೂ ಸರ್ಕಾರದ ವತಿಯಿಂದ ಲಿಂಗಾಯತ ಮೀಸಲಾತಿ ಕೋಟಾದಲ್ಲಿ ಯಾವುದೇ ಸೌಲಭ್ಯ ನೀಡಬಾರದು ಎಂದು ವಿಧಾನಸಭೆ ಸಭಾಪತಿಗಳಿಗೆ ಪತ್ರ ಬರೆಯಲಾಗುವುದು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹಾಸ್ಟೆಲ್‌ನಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಪತ್ರಿಕಾಗೋಷ್ಠಿಯಲ್ಲಿ ಮಹಾಸಭಾದ ಪ್ರಮುಖರಾದ ಶರಣಬಸಪ್ಪ ಕಲ್ಲಾ, ನಾಗನಗೌಡ ಮಾಲಿಪಾಟೀಲ್, ಮಹಾಂತ ಸಾಹು ಹರವಾಳ, ಹಣಮಂತರಾಯ ಕಲಶೆಟ್ಟಿ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X