ಕುಮಟಾ | ಅಪಘಾತ ಸಂತ್ರಸ್ತರಿಗೆ ಮೊದಲ 7 ದಿನ ₹2.5 ಲಕ್ಷ ರೂಪಾಯಿ ಉಚಿತ ಚಿಕಿತ್ಸೆ: ಯು.ಟಿ. ಖಾದರ್

Date:

ಕುಮಟಾ: ಕರ್ನಾಟಕದಲ್ಲಿ ಅಪಘಾತಕ್ಕೊಳಗಾಗುವ ಯಾವುದೇ ವ್ಯಕ್ತಿಗೆ ಆಸ್ಪತ್ರೆಯಲ್ಲಿ ದಾಖಲಾದ ಮೊದಲ ಏಳು ದಿನಗಳವರೆಗೆ ₹2.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸೆ ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

- Advertisement -

ಕುಮಟಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯ ಸಿಎಸ್‌ಆರ್ ನಿಧಿಯಿಂದ ನಿರ್ಮಿಸಲಾದ ಟ್ರಾಮಾ ಕೇರ್ ಸೆಂಟರ್ ಮತ್ತು ತುರ್ತು ಚಿಕಿತ್ಸಾ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಚಿವ ಖಾದರ್ ಅವರು. ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲು ಸಾರ್ವಜನಿಕರು ಚಿಕಿತ್ಸಾ ವೆಚ್ಚದ ಆತಂಕದಿಂದ ಹಿಂದೆ ಸರಿಯಬಾರದು ಎಂಬ ಉದ್ದೇಶದಿಂದ ಈ ಯೋಜನೆ ರೂಪಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಈ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಯೋಜನೆ ಜಾರಿಯಾದರೆ ಆಸ್ಪತ್ರೆಯಲ್ಲಿ ದಾಖಲಾದ ಮೊದಲ ಏಳ ದಿನಗಳವರೆಗೆ ₹2.5 ಲಕ್ಷದ ಮಿತಿಯೊಳಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಸಚಿವರು ತಿಳಿಸಿದರು. ರಾಜ್ಯದಲ್ಲಿ ತುರ್ತು ಕರೆ ಬಂದ ನಂತರ 15 ನಿಮಿಷಗಳೊಳಗೆ ಆಂಬುಲೆನ್ಸ್ ಸ್ಥಳಕ್ಕೆ ತಲುಪುವ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ನಿಗದಿತ ಸಮಯದಲ್ಲಿ ಆಂಬುಲೆನ್ಸ್ ತಲುಪದಿದ್ದರೆ ಸಂಬಂಧಿತ ಸಂಸ್ಥೆಗೆ ₹3,000ರಿಂದ ₹5,000ರವರೆಗೆ ದಂಡ ವಿಧಿಸುವ ಕಾನೂನು ತರಲು ಸರ್ಕಾರ ಮುಂದಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಜೊಯಿಡಾ | ಎಸ್‌ಐಆರ್-2026ರ ಅಂಗವಾಗಿ ಯಶಸ್ವಿ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರ

ಶಾಲಾ ಮಕ್ಕಳ ಆರೋಗ್ಯ ಕಾಪಾಡುವ ಉದ್ದೇಶದಿಂದ ಜಂಕ್ ಫುಡ್ ಮಾರಾಟಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುವುದು. ಆಹಾರದ ಗುಣಮಟ್ಟ ಪರೀಕ್ಷಿಸಲು ಹೈಟೆಕ್ ಪ್ರಯೋಗಾಲಯಗಳನ್ನು ಸ್ಥಾಪಿಸಿ, ಕಲಬೆರಕೆ ಹಾಗೂ ಕಳಪೆ ಆಹಾರ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿನ ವೈದ್ಯರು, ನರ್ಸ್‌ಗಳು, ಫಾರ್ಮಾಸಿಸ್ಟ್‌ಗಳು ಹಾಗೂ ಲ್ಯಾಬ್ ಟೆಕ್ನಿಷಿಯನ್‌ಗಳ ಖಾಲಿ ಹುದ್ದೆಗಳನ್ನು ಖಾಯಂ ಮತ್ತು ಗುತ್ತಿಗೆ ಆಧಾರದ ಮೇಲೆ ಶೀಘ್ರ ಭರ್ತಿ ಮಾಡಲು ಸೂಚನೆ ನೀಡಲಾಗಿದೆ ಎಂದರು.

ಕುಮಟಾದಲ್ಲಿ ಆರಂಭಗೊಂಡಿರುವ ಟ್ರಾಮಾ ಕೇರ್ ಸೆಂಟರ್ ರಾಜ್ಯದ ಆರೋಗ್ಯ ಇಲಾಖೆಯ ಮೂರನೇ ಟ್ರಾಮಾ ಕೇರ್ ಕೇಂದ್ರವಾಗಿದ್ದು, ಹೆದ್ದಾರಿ ಅಪಘಾತಗಳಲ್ಲಿ ಗಾಯಾಳುಗಳ ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಆಸ್ಪತ್ರೆಗೆ ಅಗತ್ಯವಿರುವ ಹೆಚ್ಚುವರಿ ವೈದ್ಯಕೀಯ ಉಪಕರಣಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಶೀಘ್ರದಲ್ಲೇ ಅನುದಾನ ಬಿಡುಗಡೆ ಮಾಡುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ದಿನಕರ ಶೆಟ್ಟಿ, ಸುಮಾರು ₹2.73 ಕೋಟಿ ವೆಚ್ಚದ ಟ್ರಾಮಾ ಕೇರ್ ಸೆಂಟರ್ ನಿರ್ಮಾಣಕ್ಕೆ BEL ಸಂಸ್ಥೆಯು ಸಿಎಸ್‌ಆರ್ ನಿಧಿಯಿಂದ ಸಂಪೂರ್ಣ ಅನುದಾನ ನೀಡಿರುವುದನ್ನು ಶ್ಲಾಘಿಸಿದರು. ಸ್ಥಳೀಯ ರೋಟರಿ ಕ್ಲಬ್ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಆಸ್ಪತ್ರೆಯ ಅಭಿವೃದ್ಧಿಗೆ ಕೊಡುಗೆ ನೀಡಿದ್ದು, ಇನ್ನಷ್ಟು ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ, ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಪಿ. ನಾಯ್ಕ, ಮಾಜಿ ಶಾಸಕಿ ಶಾರದಾ ಶೆಟ್ಟಿ, ಡಿಎಚ್‌ಒ ಡಾ. ಸಂಜಯ್ ದೊಡ್ಡಮನಿ, BEL ಸಂಸ್ಥೆಯ ನಿರ್ದೇಶಕ ರಜನೀಶ್ ಶರ್ಮಾ, ಜನರಲ್ ಮ್ಯಾನೇಜರ್‌ಗಳಾದ ಸಂಜಯ್ ಅಗರ್ವಾಲ್, ಟಿ.ಎನ್. ಸಿಂಗ್, ಡಾ. ಶಶಿಭೂಷಣ್, ರೋಟರಿ ಕ್ಲಬ್ ಅಧ್ಯಕ್ಷ ಡಾ. ವಿನಾಯಕ್ ಎಸ್. ಹೆಗಡೆ, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಗಣೇಶ್ ಹೆಚ್. ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...