ಕುಷ್ಠರೋಗ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ: ಎಡಿಸಿ ಸೈಯಿದಾ ಆಯಿಷಾ.

Date:

ದೊಡ್ಡಬಳ್ಳಾಪುರ: ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಕುಷ್ಠರೋಗ ಪತ್ತೆ ಹಚ್ಚುವ ಅಭಿಯಾನವನ್ನು ನವೆಂಬರ್ 03 ರಿಂದ 11 ವರೆಗೆ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಅಭಿಯಾನ ಯಶಸ್ವಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಸೂಚಿಸಿದರು.

- Advertisement -

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ 2025-26 ನೇ ಸಾಲಿನ ಕುಷ್ಠ ರೋಗ ಪತ್ತೆ ಹಚ್ಚುವ ಅಭಿಯಾನದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಮನುಷ್ಯನ ಆರೋಗ್ಯಕ್ಕೆ ಸಂಬಂಧಿಸಿದಂತೆ ಕುಷ್ಠರೋಗವು ಒಂದು ಬಾಧಿತ ರೋಗವಾಗಿದ್ದು, ಕುಷ್ಠರೋಗ ಮುಕ್ತ ಸಮಾಜ ನಿರ್ಮಿಸಲು ಅಧಿಕಾರಿಗಳು ನಿರಂತರ ಕಾರ್ಯ ಪ್ರವೃತ್ತರಾಗಿರಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಆರೋಗ್ಯ ಇಲಾಖೆ ಜೊತೆಗೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಾ ಸಂಸ್ಥೆಗಳು ಸಾರ್ವಜನಿಕರಿಗೆ ಅರಿವು ಮೂಡಿಸಿ. ಎಲ್ಲಾ ಇಲಾಖೆಗಳ ಸಹಕಾರ ಮತ್ತು ಸಮನ್ವಯತೆಯಿಂದ ಕುಷ್ಠರೋಗ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿ 20 ಸಕ್ರಿಯ ಪ್ರಕರಣಗಳು ಕುಷ್ಠರೋಗ ಹೊಂದಿರುವ ಮತ್ತು ಕುಷ್ಠರೋಗದಿಂದ ಅಂಗವಿಕಲತೆಗೆ ಬಾಧಿತರಾದವರು ಸೇರಿದಂತೆ ಒಟ್ಟು 20 ಸಕ್ರಿಯಪ್ರಕರಣಗಳು ದಾಖಲಾಗಿವೆ.

ಕುಷ್ಠರೋಗವು ಮೈಕೊಬ್ಯಾಕ್ಟಿರಿಯಂ ಲೆಪ್ರೆ ಎಂಬ ರೋಗಾಣುವಿನಿಂದ ಉಂಟಾಗುವ ಸಾಂಕ್ರಾಮಿಕ ರೋಗವಾಗಿದ್ದು, ಇದು ಮುಂದೆ ನರಗಳ ಹಾಗೂ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಆರಂಭದಲ್ಲಿ ಚರ್ಮದ ಮೇಲೆ ಮಚ್ಚೆಗಳು ಉಲ್ಬಣವಾಗುವುದು, ಚರ್ಮದ ಬಣ್ಣ ತಿಳಿ ಬಿಳಿ ಅಥವಾ ತಾಮ್ರ ಬಣ್ಣಕ್ಕೆ ತಿರುಗುವುದು ಇತ್ಯಾದಿ.

ಇದನ್ನು ಓದಿದ್ದೀರಾ..? ವಡಗೂರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲಕ್ಷ್ಮಮ್ಮ ನಾಗರಾಜ್ ಅವಿರೋಧ ಆಯ್ಕೆ

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣಾರೆಡ್ಡಿ, ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ನಾಗರಾಜು ಎಂ.ಜಿ, ಜಿಲ್ಲಾ ಸಾಂಕ್ರಾಮಿಕ ರೋಗಶಾಸ್ತ್ರಜ್ಞರು ಡಾ. ಶಾಲಿನಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಗೋವಿಂದ್ ರಾಜು, ನಾಲ್ಕು ತಾಲ್ಲೂಕಿನ ಹಿರಿಯ ನಿರೀಕ್ಷಣ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....