ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

Date:

Advertisements

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ ಕೆ.ಸಿ ವ್ಯಾಲಿ ನೀರು ಹರಿಯಲು ಸಮರ್ಪಕವಾಗಿ ಕಾಲುವೆ ನಿರ್ಮಾಣ ಮಾಡದೆ ಇರುವದರಿಂದ ರೈತರ ಜಮೀನುಗಳಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಿವಿಧ ಬೆಳೆಗಳು ನಷ್ಟವಾಗಿವೆ ಎಂದು ರೈತ ಗೂಳಿಗಾನಹಳ್ಳಿ ರಾಮು ಅಳಲು ತೋಡಿಕೊಂಡಿದ್ದಾರೆ

ಕೋಲಾರ ತಾಲೂಕಿನ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ಗೂಳಿಗಾನಹಳ್ಳಿ( ಜಂಬಾಪುರ) ಗ್ರಾಮದ ರೈತ ರಾಮು ಸೇರಿದಂತೆ ಅನೇಕ ರೈತರು ಬೆಳೆದಿರುವ ಕೋಸ್, ರಾಗಿ, ಅವರೆಕಾಯಿ, ವಿವಿಧ ಬೆಳೆಗಳ ತೋಟಗಳಿಗೆ ಕೆ.ಸಿ ವ್ಯಾಲಿ ನೀರು ನುಗ್ಗಿರುವುದರಿಂದ 10 ಲಕ್ಷಕ್ಕೂ ಹೆಚ್ಚು ಬೆಳೆಗಳು ನೀರಿನಲ್ಲಿ ಕೊಂಚಿಹೋಗಿದ್ದು ರೈತರು ಆತಂಕ ವ್ಯಕ್ತಪಡಿಸಿದ್ದರು

ಕೆಸಿ ವ್ಯಾಲಿ ನೀರು ಕಾಲುವೆಗಳ ಮೂಲಕ ಸರಾಗವಾಗಿ ಹರಿಯುವಂತೆ ಮಾಡದೆ ಇರುವುದರಿಂದ ಬೆಳೆಗಳಿಗೆ ನೀರು ನುಗ್ಗುತ್ತಿವೆ ಈ ಬಗ್ಗೆ ರಾಜಕಾರಣಗಳು ಮತ್ತು ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಲಿಲ್ಲ ರೈತರನ್ನು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದರು

Advertisements

ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಚಿನಪನಹಳ್ಳಿ ಕೆರೆಯಿಂದ ಮಣಿಘಟ್ಟ ಕೆರೆಗೆ ನೀರು ಬಿಟ್ಟಿದ್ದಾರೆ ಆದರೆ ನೀರು ಹರಿಯಲು ಕಾಲುವೆಗಳನ್ನು ನಿರ್ಮಾಣ ಮಾಡದೆ ಇರುವುದರಿಂದ ರೈತ ಜಮೀನಿಗೆ ನುಗ್ಗಿ ಅಪಾರ ಪ್ರಮಾಣದ ನಷ್ಟ ಆಗಿದೆ ರೈತರು ಸಾಲ ಮಾಡಿ ಇವತ್ತು ಬೆಳೆ ಬೆಳೆದರು ರೈತರ ಕೈಗೆ ಸಿಗುತ್ತಿಲ್ಲ ಕೆಸಿ ವ್ಯಾಲಿ ಯೋಜನೆ ಯಶಸ್ವಿ ಮಾಡಿದ್ದೇವೆ ಎಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಬಾಯಿಬಡಿದು ಕೊಳ್ಳತ್ತಾ ಇದ್ದರೆ ಆದರೆ ರೈತರ ಕಷ್ಟಗಳನ್ನು ಪಾಲಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದಾರೆ.

ಇದನ್ನು ಓದಿದ್ದೀರಾ..? ಜನಸ್ಪಂಧನ ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಕೆಸಿ ವ್ಯಾಲಿ ನೀರಿನಿಂದ ನಷ್ಟ ಉಂಟಾಗಿರುವುದರಿಂದ ರೈತರ ತೋಟಗಳಿಗೆ ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕು ಇಲ್ಲವಾದಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ನಷ್ಟವಾದ ಬೆಳೆಗಳ ಸಮೇತ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಗೂಳಿಗಾನಹಳ್ಳಿ ರಾಮು ಎಚ್ಚರಿಕೆ ನೀಡಿದ್ದಾರೆ

WhatsApp Image 2025 06 24 at 16.24.21 6207fd1d
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

ರಾಜ್ಯದಲ್ಲಿ ಬೆಳೆ ಹಾನಿ | ಪ್ರತಿ ಹೆಕ್ಟೇರ್‌ಗೆ ಹೆಚ್ಚುವರಿ ₹8,500 ಪರಿಹಾರ : ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಸೇರಿ ರಾಜ್ಯಾದ್ಯಂತ ಪ್ರಾಥಮಿಕ ಅಂದಾಜಿನ ಪ್ರಕಾರ ಇದುವರೆಗೆ ಸುಮಾರು...

Download Eedina App Android / iOS

X