ಕೋಮುಲ್ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತಿನ ಚಕಮಕಿ

Date:

ಕೋಲಾರ: ಆಡಳಿತಾಧಿಕಾರಿ ಡಾ.ಮೈತ್ರಿ ಅವಧಿಯಲ್ಲಿ ಕೈಗೊಂಡ ನಿರ್ಧಾರಗಳಿಗೆ‌ ಅನುಮೋದನೆ ಪಡೆಯುವ ವಿಚಾರದಲ್ಲಿ ಕೋಮುಲ್ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಪರ ವಿರೋಧ ಚರ್ಚೆ ನಡೆಯಿತು.

- Advertisement -

ನಗರದ ಹೊರವಲಯದ ನಂದಿನಿ ಕಲ್ಯಾಣ ಮಂಟಪದಲ್ಲಿ ಒಕ್ಕೂಟದ ಅಧ್ಯಕ್ಷ ಹಾಗೂ ಶಾಸಕ ಕೆ.ವೈ.ನಂಜೇಗೌಡ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಹಲವು ವಿಚಾರಗಳಿಗೆ ನಿರ್ದೇಶಕರೂ ಆಗಿರುವ ಶಾಸಕ ಎಸ್‌.ಎನ್.ನಾರಾಯಣಸ್ವಾಮಿ ಆರಂಭದಿಂದಲೂ ಆಕ್ಷೇಪ ವ್ಯಕ್ತಪಡಿಸಿದರು.
ಸಭೆಯ ಆರಂಭದಿಂದಲೇ ವೇದಿಕೆ ಮೇಲೆ ಇವರಿಬ್ಬರು ಪರಸ್ಪರ ಅಂತರ ಕಾಯ್ದುಕೊಂಡು ದೂರ ದೂರ ಕುಳಿತುಕೊಂಡರು. ದೀಪ ಬೆಳಗುವ ವೇಳೆ ನಂಜೇಗೌಡರು ಕರೆದರೂ ನಾರಾಯಣಸ್ವಾಮಿ ಪಕ್ಕಕ್ಕೆ ಬರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆಡಳಿತಾಧಿಕಾರಿ ಅವಧಿಯಲ್ಲಿನ ಹಣಕಾಸು ವಿಚಾರಗಳಿಗೆ ನಂಜೇಗೌಡರು ಅನುಮೋದನೆ ‌ಪಡೆಯಲು ಮುಂದಾದಾಗ ನಾರಾಯಣಸ್ವಾಮಿ ವಿರೋಧಿಸಿದರು. ಅನುಮೋದನೆ ಸಿಕ್ಕರೆ ಆ ವಿಚಾರದ ಕಥೆ‌ ಮುಗಿಯುತ್ತದೆ. ಅನುಮೋದನೆ ನೀಡಲೇಬಾರದು ಎಂದು ಹಟ ಹಿಡಿದರು.

ವಡಗೂರು ಹರೀಶ್ ಕೂಡ ಡಿಸೆಂಟ್ ನೋಟು ನೀಡಿರುವುದಾಗಿ ಹೇಳಿದರು. ಈ ಲೆಕ್ಕಾಚಾರಗಳಿಗೆ ಅನುಮೋದನೆ ನೀಡಬಾರದೆಂದು ನಿರ್ದೇಶಕರಾದ ಕಾಡೇನಹಳ್ಳಿ ನಾಗರಾಜ್‌ ಹಾಗೂ ಶಾಮೇಗೌಡ ಪಟ್ಟು ಹಿಡಿದರು.

ಆಗ ಅಧ್ಯಕ್ಷರು, ಈ ಹಿಂದೆ ಆಡಳಿತ ಮಂಡಳಿಯಲ್ಲಿ ಈ ವಿಚಾರ ಪ್ರಸ್ತಾಪವಾದಾಗ ಸಮಿತಿ ನೇಮಿಸಲಾಗಿದೆ. ಅಲ್ಲದೇ, ನಾರಾಯಣಸ್ವಾಮಿ ಅವರು ಮುಖ್ಯಮಂತ್ರಿಗೆ ಪತ್ರ ಕೂಡ ಬರೆದಿದ್ದಾರೆ. ಸಮಿತಿ ವರದಿ ಹಾಗೂ ಸರ್ಕಾರದ ವರದಿ ಬಂದ ಮೇಲೆ ಕ್ರಮ ವಹಿಸಲಾಗುವುದು ಎಂದರು.

ಆಗ ನಾರಾಯಣಸ್ವಾಮಿ, ಆಡಳಿತಾಧಿಕಾರಿ ಮಾಡಿದ ತಪ್ಪಿನಲ್ಲಿ ನೀವು ಪಾಲುದಾರರಲ್ಲ. ಇದು ರೈತರು ಹಾಗೂ ಮಹಿಳೆಯರ ಶ್ರಮದ ವಿಚಾರ. ನೀವು ಏಕೆ ಆಡಳಿತಾಧಿಕಾರಿ ಪರ ವಕಾಲತ್ತು ವಹಿಸುತ್ತೀರಿ ಎಂದು ಪ್ರಶ್ನಿಸಿದರು.

ನಂಜೇಗೌಡ ಪ್ರತಿಕ್ರಿಯಿಸಿ, ಆಡಳಿತ ಮಂಡಳಿಯಲ್ಲಿ ಕೈಗೊಂಡ ನಿರ್ಧಾರಗಳನ್ನು ಆಡಳಿತಾಧಿಕಾರಿ ಅನುಷ್ಠಾನಗೊಳಿಸಿರುತ್ತಾರೆ. ಏನಾದರೂ ವ್ಯತ್ಯಾಸಗಳಿದ್ದರೆ ತನಿಖಾ ವರದಿಯಲ್ಲಿ ಗೊತ್ತಾಗುತ್ತದೆ. ಆ ಸಮಿತಿಯಲ್ಲಿ ತಾವೂ ಸದಸ್ಯರಾಗಿದ್ದೀರಿ. ವರದಿ ಬಂದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪುನರುಚ್ಚರಿಸಿದರು.

ಎಸ್‌.ಎನ್‌.ನಾರಾಯಣಸ್ವಾಮಿ ಮಾತನಾಡಿ, ಹಿಂದಿನ ಆಡಳಿತ ಮಂಡಳಿ ಕೈಗೊಂಡ ತೀರ್ಮಾನಗಳಿಗೆ ನಮ್ಮ ಅಭ್ಯಂತರ ಇಲ್ಲ. ಆದರೆ, ಒಕ್ಕೂಟಕ್ಕೆ ಆಗಿರುವ ನಷ್ಟ ಹಾಗೂ ಕಾನೂನುಬಾಹಿರ ಚಟುವಟಿಕೆಗಳಿಗೆ ನಮ್ಮ ವಿರೋಧವಿದೆ ಎಂದರು.

ಸೌರಘಟಕ ಕಾನೂನು ಪ್ರಕಾರ ಮಾಡಿದ್ದೀರಾ.‌ ಕಾನೂನು ಬಾಹಿರವಾಗಿ ನಡೆದಿಲ್ಲ ಎಂದರೆ ಹೇಳಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಕೃಷ್ಣಬೈರೇಗೌಡ ಕೂಡ‌ ಕಾನೂನು ಬಾಹಿರ ಎಂದು ಸದನದಲ್ಲಿ ಹೇಳಿದ್ದಾರೆ ಎಂಬುದನ್ನು ತಿಳಿಸಿದರು.
ಆಗ ನಂಜೇಗೌಡರು, ಜಿಲ್ಲಾಧಿಕಾರಿ ವಿವಿಧ ಉದ್ದೇಶಕ್ಕೆ ನೀಡಿದ ಜಾಗವಿದು. ಅಲ್ಲಿ ಬೇರೆ ಉದ್ದೇಶಗಳಿಗೂ ಜಾಗ ನೀಡಿದ್ದಾರೆ. ರೈತರ ಹಿತದೃಷ್ಟಿಯಿಂದ ಸೌರಘಟಕ ಅಲ್ಲದೇ, ಹುಲ್ಲು ಕೂಡ ಬೆಳೆಯಲಾಗುವುದು ಎಂದು ಸಮಜಾಯಿಷಿ ನೀಡಿದರು.

ಆಗ ವಿವಿಧ ಸಹಕಾರ ಸಂಘಗಳ ಅಧ್ಯಕ್ಷರು ಎದ್ದು ನಿಂತು, ಈ ಚರ್ಚೆಗೆ ಆಕ್ಷೇಪ ವ್ಯಕ್ತಪಡಿಸಿ, ಆಡಳಿತ ಮಂಡಳಿಯಲ್ಲಿ ಚರ್ಚೆ ಆಗಬೇಕಾದ ವಿಚಾರವನ್ನು ಇಲ್ಲೇಕೆ ತಂದಿರಿ ಎಂದು ಪ್ರಶ್ನಿಸಿದರು.

ಇದಾಗುತ್ತಿದ್ದಂತೆ ಜಾತಿ ವಿಚಾರ ಪ್ರಸ್ತಾಪವಾಯಿತು. ಎಸ್‌.ಎನ್‌.ನಾರಾಯಣಸ್ವಾಮಿ ಮಾತನಾಡಿ, ನಾನೊಬ್ಬ ದಲಿತ‌ ಸಮುದಾಯದ ನಿರ್ದೇಶಕ. ಇದೇ ಮೊದಲ ಬಾರಿ ಒಕ್ಕೂಟಕ್ಕೆ ದಲಿತರೊಬ್ಬರು ನಿರ್ದೇಕರಾಗಿ ಬಂದಿದ್ದಾರೆ ಎಂದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನಂಜೇಗೌಡರು, ತಮ್ಮದು ಬರೀ ಇದೇ ಆಯಿತು ಎಂದು ಹೇಳಿದರು. ಈ ಹಂತದಲ್ಲಿ ಸಂಘಗಳ ಅಧ್ಯಕ್ಷರು ಎದ್ದು ನಿಂತು ಆಕ್ಷೇಪ ವ್ಯಕ್ತಪಡಿಸಿದಾಗ ಗೊಂದಲದ ವಾತಾವರಣ ನಿರ್ಮಾಣವಾಯಿತು. ಮಾತಿನ ಚಕಮಕಿ ನಡೆದು ಪೊಲೀಸರು ಮಧ್ಯ ಪ್ರವೇಶಿಸಿದರು.

ಸಭೆಯಲ್ಲಿ ಸಣ್ಣಪುಟ್ಟ ಗಲಾಟೆ ನಡೆದಾಗಲೂ ಪೊಲೀಸರು ಬಂದರು. ಪೊಲೀಸರು ಬಂದಿದ್ದಕ್ಕೆ ವಿವಿಧ ಡೇರಿಗಳ ಅಧ್ಯಕ್ಷರ ಆಕ್ಷೇಪ ವ್ಯಕ್ತಪಡಿಸಿದರು. ನಾವು ಕಳ್ಳರಲ್ಲ, ಅಡ್ಡ ಹಾಕಬೇಡಿ ಎಂದರು. ಇದನ್ನು ತಪ್ಪಾಗಿ ಅರ್ಥೈಸಿಕೊಂಡ ನಂಜೇಗೌಡ, ‘ನನನ್ನು ಕಳ್ಳ ‌ಅಂತಾರೆ. ನಾನು ‌ಒಕ್ಕೂಟದಲ್ಲಿ ಎಷ್ಟೊಂದು ಅಭಿವೃದ್ಧಿ ಮಾಡಿದ್ದೇನೆ’ ಎಂದರು.

ನಾರಾಯಣಸ್ವಾಮಿ ಮಾತನಾಡಿ, ಸಂಘಗಳ ಅಧ್ಯಕ್ಷರು ಸಮಾಧಾನದಿಂದ ಪ್ರಶ್ನೆ ಕೇಳಿ. ಕೋಮುಲ್‌ ಅಧ್ಯಕ್ಷರು ಸಮರ್ಥರಿದ್ದು‌, ಎಲ್ಲದಕ್ಕೂ ಉತ್ತರ ಕೊಡುತ್ತಾರೆ ಎಂದು ನುಡಿದರು.

ಇನ್ನು ಹಲವಾರು ವಿಚಾರಗಳು ಸಭೆಯಲ್ಲಿ ಚರ್ಚೆಯಾದವು. ತುರಾಂಡಹಳ್ಳಿ ವೆಂಕಟೇಶ್‌ ಮಾತನಾಡಿ ಮದುವೆ, ಶುಭ ಸಮಾರಂಭಗಳಲ್ಕಿ ಡೇರಿ ಉತ್ಪನ್ನ ಪ್ರಚಾರ‌ ಮಾಡಿ, ಆಗ ಮಾರುಕಟ್ಟೆ ಮತ್ತಷ್ಟು ವಿಸ್ತರಿಸುತ್ತದೆ ಎಂದು ಸಲಹೆ ನೀಡಿದರು.

ಇದನ್ನು ಓದಿದ್ದೀರಾ..? ಕೋಲಾರದಲ್ಲಿ ಸಮೀಕ್ಷಾ ಕಾರ್ಯ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ

ಸಭೆಯಲ್ಲಿ ನಿರ್ದೇಶಕರಾದ ಜೈಸಿಂಹ ಕೃಷ್ಣಪ್ಪ, ಕಾಡೇನಹಳ್ಳಿ ನಾಗರಾಜ್‌, ಹನುಮೇಶ್‌, ವಡಗೂರು ಹರೀಶ್‌, ಕಾಂತಮ್ಮ, ಚಂಜಿಮಲೆ ಜೆ.ರಮೇಶ್‌, ಚೆಲುವನಹಳ್ಳಿ ನಾಗರಾಜಪ್ಪ, ಶ್ರೀನಿವಾಸ್‌, ಕೆ.ಕೆ.ಮಂಜುನಾಥ್‌, ಶಾಮೇಗೌಡ, ಮಹಾಲಕ್ಷ್ಮಿ, ನಾಮಿನಿ ನಿರ್ದೇಶಕ ಶಂಷೀರ್‌, ವ್ಯವಸ್ಥಾಪಕ ನಿರ್ದೇಶಕ ಕೆ.ಎನ್‌.ಗೋಪಾಲಮೂರ್ತಿ, ಆಡ್ಮಿನ್‌ ನಾಗೇಶ್‌, ವಿವಿಧ ಸಹಕಾರ ಸಂಘಗಳ ಅಧ್ಯಕ್ಷರು, ಸಿಬ್ಬಂದಿ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...