ಕೋಲಾರ |ಕೊಂಡರಾಜಹಳ್ಳಿ ಪಿಡಿಒ ರಾಮಕೃಷ್ಣಪ್ಪ ವರ್ಗಾವಣೆ ಮಾಡಿ ಪಂಚಾಯತಿ ಉಳಿಸಲು ಗ್ರಾಮಸ್ಥರ ಒತ್ತಾಯ

Date:

ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಎಂ. ರಾಮಕೃಷ್ಣಪ್ಪ ರವರ ವಿರುದ್ಧದ ಅಕ್ರಮಗಳ ತನಿಖೆ, ಶಿಸ್ತು ಕ್ರಮ ಜರುಗಿಸಿ ಕೂಡಲೇ ವರ್ಗಾವಣೆ ಮಾಡುವಂತೆ ಒತ್ತಾಯಿಸಿ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಬಿ.ಬಾಗೇವಾಡಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

- Advertisement -

ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಖಾದ್ರಿಪುರ ನಿರಂಜನ್ ಮಾತನಾಡಿ ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿಗೆ ಪಿಡಿಒ ಆಗಿ ರಾಮಕೃಷ್ಣಪ್ಪ ಬಂದಾಗಿನಿಂದ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಇದರ ಬಗ್ಗೆ ಸಾಕಷ್ಟು ಬಾರಿ ದೂರು ನೀಡಿದರು ಯಾವುದೇ ಕ್ರಮ ಕೈಗೊಂಡಿಲ್ಲ ಪ್ರಶ್ನೆ ಮಾಡಿದರೆ ನಾನು ದಲಿತ ನಿಮ್ಮ ವಿರುದ್ದ ದೂರು ದಾಖಲಿಸುತ್ತೇನೆ ಎಂದು ಬೆದರಿಕೆ ಹಾಕುತ್ತಾನೆ ಸರ್ಕಾರಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ ಪಂಚಾಯತಿಯಲ್ಲಿ ಬ್ರೋಕರ್ ಗಳಿಗೆ ಹೆಚ್ಚಿನ ಆದ್ಯತೆ ನೀಡಿ ಗ್ರಾಮ ಪಂಚಾಯತಿ ಸದಸ್ಯರು ಸಾಮಾನ್ಯ ವರ್ಗದ ಜನರನ್ನು ನಿರ್ಲಕ್ಷ್ಯ ಮಾಡುತ್ತಿದ್ದು ಕೂಡಲೇ ಇವರನ್ನು ಬೇರೆಡೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ದಲಿತ ಸಿಂಹ ಸೇನೆ ರಾಜ್ಯ ಅಧ್ಯಕ್ಷ ಹೂಹಳ್ಳಿ ಪ್ರಕಾಶ್ ಮಾತನಾಡಿ ಪಂಚಾಯತಿ ವ್ಯಾಪ್ತಿಯಲ್ಲಿ ಸರ್ಕಾರಿ ಗೋಮಾಳದ ಜಮೀನುಗಳಿಗೆ ಇಸ್ವತ್ತು ಮಾಡಿಕೊಟ್ಟಿದ್ದಾರೆ ಪಂಚಾಯತಿಯಲ್ಲಿ ಅರ್ಜಿ ಹಾಕಿಸಿ ನಂತರ ಏನು ಗೊತ್ತಿಲ್ಲದ ರೀತಿಯಲ್ಲಿ ತಕರಾರು ಅರ್ಜಿ ಸಲ್ಲಿಸಿ ಇಬ್ಬರ ಮಧ್ಯೆ ರಾಜಿ ಮಾಡಿಸಿ ಸರ್ಕಾರಕ್ಕೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದಾನೆ ಕೂಡಲೇ ಪಿಡಿಒ ವಿರುದ್ದ ಕ್ರಮಕೈಗೊಂಡು ವರ್ಗಾವಣೆ ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಜಿಪಂ ಮುಂದೆ ಗ್ರಾಮಸ್ಥರೊಂದಿಗೆ ಧರಣಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮಂಜುನಾಥ್ ಮಾತನಾಡಿ ಕೊಂಡರಾಜನಹಳ್ಳಿ ಪಂಚಾಯಿತಿಯು ನಗರ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ, ಭೂಮಾಫಿಯಾದವರೊಂದಿಗೆ ಶಾಮೀಲಾಗಿ ರಾಜಕೀಯ ಪ್ರಭಾವದಿಂದ ಹಲವಾರು ಅಕ್ರಮ ಇಸ್ವತ್ತುಗಳನ್ನು ಸೃಷ್ಟಿಸಿದ್ದಾರೆ. ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸುಮಾರು ೩೦ಕ್ಕೂ ಹೆಚ್ಚು ಅಕ್ರಮ ಇ-ಸ್ವತ್ತುಗಳನ್ನು ಮಾಡಿಕೊಟ್ಟಿರುವುದು ದಾಖಲೆಗಳಿವೆ ಜೊತೆಗೆ ೧೫ನೇ ಹಣಕಾಸು ಯೋಜನೆ ಹಾಗೂ ಎಸ್‌ಸಿ,ಎಸ್‌ಟಿ ಕಲ್ಯಾಣಕ್ಕಾಗಿ ಮೀಸಲಿಟ್ಟ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ ಇತನ ವಿರುದ್ದ ಸುಮಾರು 10 ಬಾರಿ ದೂರು ನೀಡಿದ್ದರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ಇದನ್ನು ಓದಿದ್ದೀರಾ..? ಕೋಲಾರ |ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಗೋವಿಂದಪ್ಪ, ಸಂಗೊಂಡಹಳ್ಳಿ ಕುಮಾರ್, ಮುನಿಯಪ್ಪ, ವಿಜಯನಗರ ಮಂಜುನಾಥ್, ಕೊಂಡರಾಜನಹಳ್ಳಿ, ಅಮ್ಮೇರಹಳ್ಳಿ, ವಿಜಯನಗರ, ಖಾದ್ರಿಪುರ ಸಂಗೊಂಡಹಳ್ಳಿ, ತೇರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...