ಕೋಲಾರ | ದಲಿತ ಚಳುವಳಿಯ ಹೆಜ್ಜೆ ಗುರುತುಗಳೇ ಯುವಕರಿಗೆ ಸ್ಪೂರ್ತಿಯಾಗಬೇಕು: ಎಂಎಲ್ಸಿ ಅನಿಲ್ ಕುಮಾರ್

Date:

ದಲಿತ ಸಮುದಾಯದ ಏಳಿಗೆಗಾಗಿ ಹಿರಿಯ ದಲಿತ ಮುಖಂಡರ ಚಳುವಳಿಯ ಹೆಜ್ಜೆಗುರುತುಗಳನ್ನು ಇಂದಿನ ಯುವ ಸಮುದಾಯಕ್ಕೆ ಮಾದರಿಯಾಗಿ ಅವರು ನಡೆದು ಬಂದ ದಾರಿಯಲ್ಲಿ ನಾವು ಎಲ್ಲರೂ ನಡೆಯಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ತಿಳಿಸಿದರು

- Advertisement -

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಬುಧವಾರ ದಲಿತ ಸಂಘಟನೆಗಳ ಸಂಯುಕ್ತ ರಂಗದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ಹಾಗೂ ಹಿರಿಯ ದಲಿತ ಮುಖಂಡ ಡಾ ಎಂ ಚಂದ್ರಶೇಖರ್ ರವರ ಸಾಧನೆಯ 25 ನೇ ವರ್ಷದ ಬೆಳ್ಳಿ ಸಂಭ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ದಲಿತ ಸಮುದಾಯದ ವಿರುದ್ದ ನಡೆದ ದೌರ್ಜನ್ಯ ದಬ್ಬಾಳಿಕೆಗಳು ಸೇರಿದಂತೆ ತುಳಿತಕ್ಕೆ ಒಳಗಾಗಿರುವ ಸಮುದಾಯದ ಧ್ವನಿಯಾಗಿ ರಾಜ್ಯಾದ್ಯಂತ ಸುತ್ತಿ ಸಂಘಟನೆಯನ್ನು ಕಟ್ಟಿದ್ದಾರೆ ಅವರ ಆಶಯಗಳನ್ನು ಯುವಕರು ಹಾಗೂ ಇವತ್ತಿನ ದಲಿತ ಸಂಘಟನೆಗಳ ನಾಯಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಜಿಲ್ಲೆಯಲ್ಲಿ ಸುಮಾರು 90ರ ದಶಕದಲ್ಲಿ ಒಡೆದು ಹೋಗಿದ್ದ ದಲಿತ ಸಂಘಟನೆಗಳನ್ನು ಒಂದೇ ವೇದಿಕಗೆ ತರುವ ನಿಟ್ಟಿನಲ್ಲಿ 1995 ರಲ್ಲಿ ದಲಿತ ಸಂಘಟನೆಗಳ ಸಂಯುಕ್ತ ರಂಗವನ್ನು ಸ್ಥಾಪಿಸಲಾಯಿತು ಅದರ ಮೂಲಕ ಹಕ್ಕುಗಳಿಗಾಗಿ ಹೋರಾಟ ರೂಪಿಸಲಾಗಿದೆ ಎಂ ಚಂದ್ರಶೇಖರ್ ಸಹ ಸಮುದ್ರದ ಅಲೆಗಳ ವಿರುದ್ದ ದಿಕ್ಕಿನಲ್ಲಿ ಚಲಿಸುವಂತೆ ಸಮಾಜದಲ್ಲಿನ ವಿರೋಧದ ನಡುವೆಯೂ ವಿರುದ್ದ ದಿಕ್ಕಿನಲ್ಲಿ ಸಂಘಟನೆಯನ್ನು ಕಟ್ಟಿದ್ದಾರೆ ಹೋರಾಟ ಜೊತೆಗೆ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಅದರ ಮೂಲಕವೂ ಕಾಂತ್ರಿಯನ್ನು ಸೃಷ್ಟಿಸಿದ್ದಾರೆ ಎಂದರು‌‌

ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಮಾತನಾಡಿ ಸಮಾಜದಲ್ಲಿ ದಲಿತರ ನೋವುಗಳ ಚಿತ್ರಣ ಜಾಸ್ತಿಯಾಗಿದೆ ನಲುವುಗಳ ಬಗ್ಗೆ ಹೆಚ್ಚು ತೋರಿಸಬೇಕಾಗಿದೆ ಪ್ರತಿ ಹೋರಾಟದಲ್ಲಿ ಬದ್ದತೆ ಇದ್ದರೆ ಅಷ್ಟೇ ಭವಿಷ್ಯವನ್ನು ಕಾಣಬಹುದಾಗಿದೆ ಸಮಾಜದ ಬಗ್ಗೆ ಯೋಚನೆ ಮಾಡಿ ಹತ್ತು ಜನರ ಕಣ್ಣೀರು ಒರೆಸುವ ಕೆಲಸವಾಗಬೇಕು ತಮ್ಮೊಳಗಿನ ಸಣ್ಣತನವನ್ನು ಮುಕ್ತಗೊಳಿಸಿ ಸಮಾಜದಲ್ಲಿ ಬದಲಾವಣೆ ತರಬೇಕಾಗಿದೆ ಘನತೆಯುಕ್ತ ಬದುಕು ನಮ್ಮದಾಗಬೇಕು ಅವಕಾಶಗಳಿವೆ ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಭಿನ್ನಾಭಿಪ್ರಾಯ, ತಾರತಮ್ಯವನ್ನು ಬಿಟ್ಟು ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಐಎಎಸ್ ಅಧಿಕಾರಿ ಡಿ.ತಂಗರಾಜ್ ವಹಿಸಿದ್ದು ಡಯಟ್ ಪ್ರಾಂಶುಪಾಲ ನಾರಾಯಣಸ್ವಾಮಿ ಪ್ರಾಸ್ತವಿಕವಾಗಿ ಮಾತನಾಡಿದರು, ಕಾರ್ಯಕ್ರಮಕ್ಕೂ ಮುನ್ನಾ ಬಂಗಾರಪೇಟೆ ವೃತ್ತದಿಂದ ರಂಗಮಂದಿರದ ವರೆಗೂ ಎಂ ಚಂದ್ರಶೇಖರ್ ಅವರನ್ನು ಬೆಳ್ಳಿ ರಥದಲ್ಲಿ ಮೆರವಣಿಗೆ ಮೂಲಕ ಕರೆತರಲಾಯಿತು.

ಇದನ್ನು ಓದಿದ್ದೀರಾ..?ಕೋಲಾರ | ಪ್ರೀತಿವಿಶ್ವಾಸದಿಂದ ಮನಸ್ಸು ಗೆಲ್ಲುವ ದಾರಿಯನ್ನು ಹುಡುಕಬೇಕು : ವಕ್ಕಲೇರಿ ರಾಜಪ್ಪ – ಈ ದಿನ.ಕಾಮ್

ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ಸಿ.ಎಸ್ ವೆಂಕಟೇಶ್, ಮಾಜಿ ಸದಸ್ಯ ಅರುಣ್ ಪ್ರಸಾದ್, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮೀ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ದಲಿತ ಸಂಘಟನೆಗಳ ಮುಖಂಡರಾದ ಡಿಪಿಎಸ್ ಮುನಿರಾಜು, ಮೇಡಿಹಾಳ ಮುನಿಅಂಜಿನಪ್ಪ, ಸಾಹುಕಾರ್ ಶಂಕರಪ್ಪ, ಖಾದ್ರಿಪುರ ಬಾಬು, ವೆಂಕಟಾಚಲಪತಿ, ಜಮ್ಮನಹಳ್ಳಿ ಕೃಷ್ಣ, ಕೆಇಬಿ ಚಂದ್ರು, ಯುವರಾಜ್, ಮೋಚಿಪಾಳ್ಳ ನಾಗೇಶ್, ಮತ್ತಿಕುಂಟೆ ಕೃಷ್ಣ, ಗಂಗಮ್ಮನಪಾಳ್ಯ ಚಂದ್ರು, ಮುಂತಾದ ದಲಿತ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | 50 ಲಕ್ಷ ಲಂಚ ಪಡೆಯುವಾಗ ಲೋಕಾ ಬಲೆಗೆ ರೆಡ್ ಹ್ಯಾಂಡ್ ಸಿಕ್ಕ ತಹಶೀಲ್ದಾರ

ಭೂಮಿ ಅ ಖರಾಬ್ ತೆಗೆಯಲು ಒಂದು‌ ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...