ಗದಗ | ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ಇಲ್ಲದ ₹24 ಲಕ್ಷ ವಶ

Date:

  • ಮುಳಗುಂದ ಚೆಕ್ ಪೊಸ್ಟ್‌ನಲ್ಲಿ ಪರಿಶೀಲನೆ ವೇಳೆ ಹಣ ಪತ್ತೆ
  • ವಾಹನ, ಆಸ್ತಿ ಖರೀದಿಗೆ ಹಣ ಎಂದ ಪ್ರಯಾಣಿಕರು

ಸೂಕ್ತ ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ₹24 ಲಕ್ಷ ಹಣವನ್ನು ಗದಗ ಜಿಲ್ಲೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೋಮವಾರ ತಡರಾತ್ರಿ ಕಾರಿನಲ್ಲಿ ಹಣ ಸಾಗಿಸಲಾಗುತ್ತಿತ್ತು. ಮುಳಗುಂದ ಚೆಕ್‌ಪೊಸ್ಟ್‌ನಲ್ಲಿ ಪರಿಶೀಲನೆ ಮಾಡುವಾಗ ಕಾರಿನಲ್ಲಿ ಹಣ ಇರುವುದು ಪತ್ತೆಯಾಗಿದೆ. ದಾವಣಗೆರೆಯಿಂದ ಗದಗ ಕಡೆಗೆ ಕಾರಿನಲ್ಲಿ ಸೂಕ್ತ ದಾಖಲೆ ಇಲ್ಲದೆ ₹24 ಲಕ್ಷ ಹಣ ಸಾಗಿಸಲಾಗುತ್ತಿತ್ತು. ಆ ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

“ಸದ್ಯಕ್ಕೆ ಈ ಹಣ ಯಾರದ್ದು ಮತ್ತು ಯಾವ ಕಾರಣಕ್ಕೆ ಬಳಸಿಕೊಳ್ಳಲು ಯೋಚಿಸಿದ್ದರು ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ವಾಹನ ಮತ್ತು ಆಸ್ತಿ ಖರೀದಿಗೆ ಹಣ ತಗೆದುಕೊಂಡು ಹೊರಟ್ಟಿದ್ದೇವೆ ಎಂದು ಕಾರಿನಲ್ಲಿದ್ದವರು ಹೇಳುತ್ತಿದ್ದಾರೆ. ಆದರೆ, ದಾಖಲಾತಿಗಳು ಲಭ್ಯವಾಗದ ಕಾರಣ, ಅನುಮಾನದ ಹಿನ್ನೆಲೆ ಹಣವನ್ನು ವಶಕ್ಕೆ ಪಡೆದಿದ್ದೇವೆ” ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್ ನೇಮಗೌಡ ಮಾಹಿತಿ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್‌ | ಬ್ಲಾಕ್‌ಮೇಲ್‌ಗಾಗಿ ವಿಡಿಯೋ ಮಾಡಿಕೊಂಡಿದ್ರಾ?; ನ್ಯಾಯಾಂಗ ತನಿಖೆಗೆ ಆಗ್ರಹ

ಹಾಸನ ಪೆನ್‌ಡ್ರೈವ್ ವಿಚಾರದಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡು, ನ್ಯಾಯಾಂಗ ತನಿಖೆ ನಡೆಸಬೇಕು....

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ,...

ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ...

ಚಾಮರಾಜನಗರ | ದೇಶದ ಪ್ರಜಾಪ್ರಭುತ್ವ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್‌ ಬೆಂಬಲಿಸಿ: ಮಾನವ ಬಂಧುತ್ವ ವೇದಿಕೆ

ದೇಶದ ಪ್ರಜಾಪ್ರಭುತ್ವ, ಸಂವಿಧಾನದ ರಕ್ಷಣೆಗಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು...