ಚಿಂತಾಮಣಿ | ನಕಲಿ’ಫಿನೋಲೆಕ್ಸ್’ಕೇಬಲ್ ಜಾಲ ಪತ್ತೆ: ಪ್ರಖ್ಯಾತ ಕಂಪನಿ ಮ್ಯಾನೇಜರ್‌ನಿಂದಲೇ ದೂರು

Date:

ಚಿಂತಾಮಣಿ ನಗರದ ಬಸ್ ನಿಲ್ದಾಣದ ಬಳಿ ಖ್ಯಾತ ವಿದ್ಯುತ್ ಉಪಕರಣಗಳ ತಯಾರಿಕಾ ಸಂಸ್ಥೆಯಾದ ‘ಫಿನೋಲೆಕ್ಸ್'(Finolex)ಕಂಪನಿಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ವಿದ್ಯುತ್ ಕೇಬಲ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮೇಲೆ ಚಿಂತಾಮಣಿ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ ಕಾನೂನು ಕ್ರಮ ಜರುಗಿಸಲಾಗಿದೆ.

- Advertisement -

ಫಿನೋಲೆಕ್ಸ್ ಕೇಬಲ್ಸ್ ಲಿಮಿಟೆಡ್ ಕಂಪನಿಯ ಬೌದ್ಧಿಕ ಆಸ್ತಿ ಹಕ್ಕುಗಳ(IPR)ವ್ಯವಸ್ಥಾಪಕರಾದ ಕಟಾರಂ ದುಬ್ಬರಾಜು ಅವರು ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಚಿಂತಾಮಣಿ ನಗರದಲ್ಲಿ ನಡೆಸಿದ ಮಾರುಕಟ್ಟೆ ಸಮೀಕ್ಷೆಯ ವೇಳೆ ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮೀಪವಿರುವ ‘ಭರತ್ ಇಂಜಿನಿಯರಿಂಗ್ ವರ್ಕ್ಸ್ ಎಂಬ ಮಳಿಗೆಯಲ್ಲಿ ಫಿನೋಲೆಕ್ಸ್ ಬ್ರ್ಯಾಂಡ್ ಹೆಸರಿನ ನಕಲಿ ಸಬ್‌ಮರ್ಸಿಬಲ್ ಎಲೆಕ್ಟ್ರಿಕಲ್ ಕೇಬಲ್‌ಗಳನ್ನು ಉದ್ದೇಶಪೂರ್ವಕವಾಗಿ ಮಾರಾಟ ಮತ್ತು ವಿತರಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಫಿನೋಲೆಕ್ಸ್ ಕಂಪನಿಯು ತನ್ನ ಗುಣಮಟ್ಟದ ಉತ್ಪನ್ನಗಳಿಂದಾಗಿ ದೇಶ-ವಿದೇಶಗಳಲ್ಲಿ ಉತ್ತಮ ಹೆಸರು ಗಳಿಸಿದೆ.ಕಂಪನಿಯ ಪ್ಯಾಕೇಜಿಂಗ್, ಬಣ್ಣದ ವಿನ್ಯಾಸ ಮತ್ತು ಟ್ರೇಡ್ ಮಾರ್ಕ್ ಬಳಕೆಗೆ ಸಂಬಂಧಿಸಿದಂತೆ 1957ರ ಹಕ್ಕುಸ್ವಾಮ್ಯ ಕಾಯ್ದೆ (Copyright Act)ಅಡಿಯಲ್ಲಿ ಕಂಪನಿಯು ವಿಶೇಷ ಹಕ್ಕುಗಳನ್ನು ಹೊಂದಿದೆ.ಆದರೆ,ಸದರಿ ಅಂಗಡಿಯು ನಕಲಿ ಕೇಬಲ್ ಮಾರಾಟ ಮಾಡುವ ಮೂಲಕ ಸಾರ್ವಜನಿಕರಿಗೆ ವಂಚಿಸುತ್ತಿರುವುದಲ್ಲದೆ,ಕಂಪನಿಯ ಬೌದ್ಧಿಕ ಆಸ್ತಿಯನ್ನು ಕಾನೂನುಬಾಹಿರವಾಗಿ ಬಳಸಿಕೊಂಡು ವಂಚನೆ ಎಸಗಿದೆ ಎಂದು ದೂರುದಾರರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ..? ಕೋಲಾರ | ಶಾಸಕ ಕೊತ್ತೂರು ಮಂಜುನಾಥ್ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಈ ನಕಲಿ ದಂಧೆಯಿಂದಾಗಿ ಸಾರ್ವಜನಿಕರಿಗೆ ಹಾಗೂ ಕಂಪನಿಗೆ ಭಾರಿ ಆರ್ಥಿಕ ನಷ್ಟ ಉಂಟಾಗುತ್ತಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಸದ್ಯ ಈ ಬಗ್ಗೆ ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...