ಚಿಕ್ಕಬಳ್ಳಾಪುರ: ರಾಜ್ಯ ಸರಕಾರ ರಾಜ್ಯ ನಿಗಮಮಂಡಳಿಗಳ ನೇಮಕ ಮಾಡಿದ್ದು, ರಾಜ್ಯ ಸರಕಾರದ ಶಿಫಾರಸಿನಂತೆ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ ಭಾಗ್ಯ ಸಿಕ್ಕಿದೆ.ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಿಂದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ನಂದಿ ಆಂಜಿನಪ್ಪ ಅವರನ್ನು ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.
ಇದನ್ನು ಓದಿದ್ದೀರಾ..? ಕೋಲಾರದ https://eedina.com/karnataka/ಕೋಲಾರದ-ಎಸ್-ಎನ್-ಆರ್-ಜಿಲ್ಲಾ/2025-09-25/ಎಸ್ ಎನ್ ಆರ್ ಜಿಲ್ಲಾಸ್ಪತ್ರೆ ವೈದ್ಯರು ಲಂಚ ಕೇಳಿ ಚಿಕಿತ್ಸೆ ವಿಳಂಬದ ಮಾಡಿದ ಆರೋಪ
ವಿಧಾನಸಭೆ ಚುನಾವಣೆಗಳಲ್ಲೂ ಸ್ಪರ್ಧಿಸಿದ್ದ ಆಂಜಿನಪ್ಪ ಕಾಂಗ್ರೆಸ್ ಪಕ್ಷದ ಕಟ್ಟಾಳು ಆಗಿ ಗುರುತಿಸಿಕೊಂಡಿದ್ದು,ಕೊನೆಗೂ ಅವರಿಗೆ ರಾಜ್ಯ ಸರಕಾರ ಮಣೆ ಹಾಕಿದೆ. ಮತ್ತೊಂದೆಡೆ ಬಾಗೇಪಲ್ಲಿವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಎನ್.ಸಂಪಂಗಿ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷಸ್ಥಾನಕ್ಕೆ ನೇಮಕ ಮಾಡಲಾಗಿದೆ. ಬಾಗೇಪಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿರುವ ಇವರು, ಹಲವು ಏಳುಬೀಳುಗಳ ನಡುವೆಯೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದು ಪಕ್ಷಕ್ಕೆ ನಿಷ್ಠೆ ಪ್ರದರ್ಶಿಸಿದ್ದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: