ಚಿಕ್ಕಬಳ್ಳಾಪುರ ನಗರದಲ್ಲಿ ನಾಳೆ ಜ.ಚ.ನಿ ಸಂಸ್ಮರಣೆಯ ಅದ್ದೂರಿ ಕಾರ್ಯಕ್ರಮ: ಆಡಳಿತಾಧಿಕಾರಿ ಡಾ. ಶಿವಜ್ಯೋತಿ

Date:

ಚಿಕ್ಕಬಳ್ಳಾಪುರ: ಶ್ರೀ ಜಗದ್ಗುರು ಚಿನ್ನಮಲ್ಲ ನಿಡುಮಾಮಿಡಿ ಗುರುಗಳ ಸ್ಮರಣಾರ್ಥ 105ನೇ ಸಂಸ್ಮರಣ ಕಾರ್ಯಕ್ರಮವನ್ನು ನಗರದ ಶ್ರೀ ಜಚನಿ ಪ್ರಥಮ ದರ್ಜೆ ಕಾಲೇಜಿನ ಸಿದ್ದರಾಮಯ್ಯ ಸಭಾಂಗಣದಲ್ಲಿ ನವೆಂಬರ್ 5 ರಂದು ಅರ್ಥಪೂರ್ಣವಾಗಿ ಹಾಗೂ ಸಂಭ್ರಮ ಸಡಗರದಿಂದ ಆಚರಿಸಲಾಗುವುದು ಎಂದು ಜ.ಚ.ನಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಹಾಗೂ ಆಡಳಿತಾಧಿಕಾರಿಗಳಾದ ಡಾ. ಶಿವಜ್ಯೋತಿ ಅವರು ತಿಳಿಸಿದರು.

- Advertisement -

ಅವರು ನಗರದ ಶ್ರೀ ಸಿದ್ದರಾಮಯ್ಯ ಕಾನೂನು ಮಹಾವಿದ್ಯಾಲಯದ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ, ಜಚನಿ ಅವರ ಜಯಂತಿ ಕಾರ್ಯಕ್ರಮದ ದಿವ್ಯಸಾನ್ವಿಧ್ಯವನ್ನು ಶ್ರೀ ವೀರಭದ್ರ ಚಿನ್ನಮಲ್ಲ ದೇಶಿ ಕೇಂದ್ರ ಮಹಾಸ್ವಾಮಿಗಳು ವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಗಳಾದ ನಿರಂಜನ ವಾನಳ್ಳಿ ರವರು ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ.ಎಂ.ಜೆ. ನಾಗರಾಜ, ಶಿವರಾಂ ಎಂ.ಕೆ. ವಕೀಲರು ಹಾಗೂ ಅಧ್ಯಕ್ಷರು ಆಡಳಿತ ಮಂಡಳಿ ಶ್ರೀ ಸಿದ್ದರಾಮಯ್ಯ ಕಾನೂನು ಮಹಾವಿದ್ಯಾಲಯ ಇವರುಗಳು ಭಾಗವಹಿಸಲಿದ್ದಾರೆ. ಜಚನಿಯವರ ಸಾಮಾಜಿಕ ಕೊಡುಗೆ ಕುರಿತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೊ.ಕೋಡಿರಂಗಪ್ಪ ರವರು ತಿಳಿಸಿಕೊಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ 1 ಸಾವಿರಕ್ಕೂ ಹೆಚ್ಚು ಜಚನಿ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ವೇದಿಕೆ ಕಾರ್ಯಕ್ರಮದಲ್ಲಿ ಶ್ರೀ ಜಚನಿ ಅವರು ರಚಿಸಿದ ಗೀತೆಗಳ ಬಜನೆ, ಗಾಯನವನ್ನು ಜ.ಚ.ನಿ ಅವರು ಸ್ಥಾಪಿಸಿದ ಅಕ್ಕನ ಬಳಗದ ತಂಡದವರು ನಡೆಸಿಕೊಳ್ಳಲಿದ್ದಾರೆ. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಅಲ್ಲದೆ ಕನ್ನಡ ಸಾಹಿತ್ಯ, ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿ ಜಚನಿ ಎಂದೇ ಪ್ರಖ್ಯಾತರಾದ ಚನ್ನಬಸವರಾಜ ದೇಶಿಕೇಂದ್ರ ಶಿವಾಚಾರ್ಯರು ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಅಗಾಧವಾದುದು, ಶ್ರೀಯುತರು ಅಕ್ಟೋಬರ್ 30, 1909 ರಂದು ಜನಿಸಿ ಬಾಗೇಪಲ್ಲಿ ತಾಲ್ಲೂಕಿನ ಗೂಳೂರಿನ
ಶ್ರೀ ನಿಡುಮಾಮಿಡಿ ಮಠದ ಪೀಠಾಧಿಪತಿಯಾಗಿ ಸಾಹಿತ್ಯ ಸೇವೆ, ಮಾನವಧರ್ಮ ಪೀಠದ ಧೈರ್ಯಗಳನ್ನು ಕಾಪಾಡಿಕೊಂಡು ಸಮಾಜಕ್ಕೆ ತಮ್ಮದೇ ಆದ ವೈಶಿಷ್ಟ್ಯ ಕೊಡುಗೆಯನ್ನು ನೀಡಿರುತ್ತಾರೆ. ಇವರ ಆಚಾರ ವಿಚಾರಗಳನ್ನು ಹಾಗೂ ವೈಚಾರಿಕ ಆದರ್ಶಗಳನ್ನು ಇಂದಿನ ಹಾಗೂ ಮುಂದಿನ ಪೀಳಿಗೆಗೆ ತಲುಪಿಸುವ ಹಿನ್ನೆಲೆಯಲ್ಲಿ ಈ ವರ್ಷ ಸ್ಮರಣಾರ್ಥ ಕಾರ್ಯಕ್ರಮವನ್ನು ಚಿಕ್ಕಬಳ್ಳಾಪುರ ನಗರದಲ್ಲಿ ಆಯೋಜಿಸಲಾಗಿರುತ್ತದೆ. ಅಂದು ಅವರು ರಚಿಸಿದ ಎಲ್ಲಾ ಪುಸ್ತಕಗಳನ್ನು ಕಾಲೇಜಿನಲ್ಲಿ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಶ್ರೀಯುತರು ನವೆಂಬರ್ 5, 1996 ರಂದು ಇಹಲೋಕ ತ್ಯಜಿಸಿದ್ದರಿಂದ ಪ್ರತಿ ವರ್ಷ ನವೆಂಬರ್ 5 ರಂದು ಜಚನಿಯವರ ಸಂಸ್ಮರಣೆ ದಿನಾಚರಣೆ ಮಾಡಲಾಗುತ್ತದೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಜಿಲ್ಲೆಯ ಸಮಸ್ತ ನಾಗರಿಕರು ಜಚನಿ ಅವರ ಅಭಿಮಾನಿಗಳು ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಸರ್ಕಾರಿ ಆಡಳಿತ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.

ಇದನ್ನು ಓದಿದ್ದೀರಾ..? ಇಂಜಿನಿಯರಿಂಗ್ ಕಾಲೇಜ್ ಕಾಮಗಾರಿ ಕೆಲಸ ನೋಡಿ ಮಾಜಿ ಶಾಸಕರಿಗೆ ಹೊಟ್ಟೆ ಉರಿಯುತ್ತದೆ

ಪತ್ರಿಕಾಗೋಷ್ಠಿಯಲ್ಲಿ ಶ್ರೀ ಸಿದ್ದರಾಮಯ್ಯ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎ.ಎಸ್. ರಮ್ಯ, ಶ್ರೀ ಜಚನಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪವನ್ ಕುಮಾರ್, ಜಚನಿ ಕಾಲೇಜು ಆಡಳಿತ ಮಂಡಳಿಯ ಸದಸ್ಯರಾದ ಜೆಸಿಬಿ ಮಂಜು, ಶ್ರೀನಿವಾಸ್, ಕಾಲೇಜಿನ ಅಧೀಕ್ಷಕಿ ಸುಮಲತಾ ಹಾಗೂ ಬೋಧಕ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...