ಪಕ್ಷದ ಶಿಸ್ತು ಮತ್ತು ಹೈಕಮಾಂಡ್‌ನ ಆದೇಶಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಪಕ್ಷದ ಹೈಕಮಾಂಡ್ ತೆಗೆದುಕೊಂಡಿರುವ ಇತ್ತೀಚಿನ ರಾಜಕೀಯ ನಿರ್ಧಾರಗಳ ಕುರಿತು ಚಿಂತಾಮಣಿಯಲ್ಲಿ ಪ್ರತಿಕ್ರಿಯಿಸಿದರು.
ನಸೀರ್ ಅಹಮದ್ ಅವರು ನಮಗೆ ಅತ್ಯಂತ ಆಪ್ತರು. ಮುರುಗಮಲ್ಲ ದರ್ಗಾ ವಿಚಾರ ಸೇರಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳಲ್ಲಿ ಅವರ ಕೊಡುಗೆ ಅಪಾರ.ಅವರ ಜೊತೆಗೆ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದೇವೆ ಎಂದು ನಸೀರ್ ಅಹಮದ್ ಅವರೊಂದಿಗಿನ ತಮ್ಮ ಸುದೀರ್ಘ ಸಂಬಂಧವನ್ನು ಸರಿಸಿದರು.
ಹೈಕಮಾಂಡ್ ಯಾವ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಂಡಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಮಾಹಿತಿಯಿಲ್ಲದೆ ಮಾತನಾಡುವುದು ಸರಿಯಲ್ಲ. ಆದರೂ ಪಕ್ಷದ ಶಿಸ್ತಿಗೆ ಗೌರವ ನೀಡುವ ಜೊತೆಗೆ, ಉಂಟಾಗಿರುವ ಗೊಂದಲಗಳನ್ನು ಸರಿಪಡಿಸಿಕೊಳ್ಳುವ ಬಗ್ಗೆ ಹಿರಿಯರೊಂದಿಗೆ ಚರ್ಚಿಸುತ್ತೇವೆ ಎಂದರು.
ಇದನ್ನು ಓದಿದ್ದೀರಾ..? ಕೋಲಾರ | ‘ನಸೀರ್ ಅಹ್ಮದ್‌ರನ್ನು ಮತ್ತೆ ಸಿಎಂ ರಾಜಕೀಯ ಕಾರ್ಯದರ್ಶಿಯನ್ನಾಗಿಸಿ’ – ಮುಸ್ಲಿಂ ಮುಖಂಡರ ಪ್ರತಿಭಟನೆ
ನಸೀರ್ ಅಹಮದ್ ಅವರ ಮನೆಗೆ ಭೇಟಿ ನೀಡಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ ಸಚಿವರು,ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಮುಂದಿನ ಹೆಜ್ಜೆಗಳನ್ನು ಇಡುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ |ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧ: ಸಚಿವ ಎಂ.ಸಿ.ಸುಧಾಕರ್
ಪೋಸ್ಟ್ ಹಂಚಿಕೊಳ್ಳಿ:





