ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಇಂದಿರಾಗಾಂಧಿ ಪುಣ್ಯಸ್ಮರಣೆ

Date:

ಕೋಲಾರ: ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ಬಡವರು, ದಲಿತರು, ಅಲ್ಪಸಂಖ್ಯಾತರ ಬಗ್ಗೆ ಬಹಳ ಕಾಳಜಿಯನ್ನು ಹೊಂದಿದ್ದರು. ಅವರು ತಮ್ಮ ಆಡಳಿತಾವಧಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಾಗೂ ದೇಶಕ್ಕೆ ಅನೇಕ ಕೊಡುಗೆ ನೀಡಿದ್ದಾರೆ ಎಂದು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಹೇಳಿದರು.

- Advertisement -

ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಶುಕ್ರವಾರ ಪಕ್ಷದಿಂದ ಹಮ್ಮಿಕೊಳ್ಳಲಾದ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿಯವರ ಪುಣ್ಯ ತಿಥಿ ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷದ ಮೂಲೆ ಮೂಲೆಯಲ್ಲಿ ಸಂಘಟನೆಗೊಳ್ಳಲು ಇಂದಿರಾಗಾಂಧಿಯವರೇ ಕಾರಣವಾಗಿದ್ದಾರೆ ದೇಶಕ್ಕೆ ಸಮರ್ಥ ನಾಯಕತ್ವ ಕೊಟ್ಟಿದ್ದರು. ಇಂದಿರಾಗಾಂಧಿ ಅವರು ಕೊನೆಯ ಉಸಿರಿನವರೆಗೂ ಪಕ್ಷಕ್ಕಾಗಿ, ರಾಷ್ಟ್ರಕ್ಕಾಗಿ ತಮ್ಮನ್ನು ಸಮರ್ಪಿಸಿಕೊಂಡು ದೇಶಕ್ಕೆ ಪ್ರಾಣವನ್ನೆ ಬಲಿಕೊಟ್ಟು ಮಹಾತ್ಮರಾಗಿದ್ದಾರೆ. ವಿಧವಾ ವೇತನ, ಬ್ಯಾಂಕ್ ರಾಷ್ಟ್ರೀಕರಣಗಳಂತಹ ಮುಖ್ಯವಾದ ನಿರ್ಧಾರಗಳನ್ನು ಕೈಗೊಂಡ ಮಹಾನ್ ನಾಯಕಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ರಮೇಶ್ ಮಾತನಾಡಿ ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಜಾರಿಗೆ ತಂದಿರುವ ಗರೀಬಿ ಹಠಾವೋ, ವೃದ್ಯಾಪ್ಯ ವೇತನ, ಬಡವರಿಗಾಗಿ ಸೂರು, ರಾಜಧನ ರದ್ದು, ಜೀತ ವಿಮುಕ್ತಿ ಕಾನೂನು ಜಾರಿ, 20 ಅಂಶಗಳ ಕಾರ್ಯಕ್ರಮ, ಇನ್ನಿತರ ಯೋಜನೆಗಳು ಇಂದಿಗೂ ಜನ-ಮನದಲ್ಲಿ ಉಳಿದು ಪ್ರಚಲಿತದಲ್ಲಿದ್ದು, ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ…? ಹೊನ್ನೇನಹಳ್ಳಿ ಪಿಡಿಒ ಹರೀಶ್ ವಿರುದ್ದ ಕ್ರಮಕ್ಕೆ ಒತ್ತಾಯಿಸಿ ಕೆ.ಆರ್.ಎಸ್ ಸಂಘಟನೆಯಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವೆಂಕಟಪತಿಯಪ್ಪ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ಸರ್, ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀಕೃಷ್ಣ, ಬೆಳಗಾನಹಳ್ಳಿ ಮುನಿವೆಂಕಟಪ್ಪ,, ಕುಡಾ ಸದಸ್ಯ ಬಿ.ಟಿ ಚಂದ್ರಶೇಖರ್, ಮುಖಂಡರಾದ ಉಮಾಶಂಕರ್, ವೀರೇಂದ್ರ ಪಾಟೀಲ್, ದಿಂಬಚಾಮನಹಳ್ಳಿ ನಾರಾಯಣಸ್ವಾಮಿ, ಚಿನ್ನಾಪುರ ನಾರಾಯಣಸ್ವಾಮಿ, ಜಗನ್, ನವೀನ್, ಸೋಮಣ್ಣ, ಮುದುವತ್ತಿ ಮುನಿವೆಂಕಟಪ್ಪ, ಮುರಳಿ, ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ...

ರಾಯಚೂರು | ಮಾದಕ ವ್ಯಸನದಿಂದ ಅಪರಾಧಗಳ ಹೆಚ್ಚಳ: ಜಿಲ್ಲಾಡಳಿತ ವಿಫಲ, ಜನಪ್ರತಿನಿಧಿಗಳಿಂದ ಆರೋಪಿಗಳ ರಕ್ಷಣೆ — ಎಂ. ವಿರೂಪಾಕ್ಷಿ ಆರೋಪ

ಜಿಲ್ಲೆಯಲ್ಲಿ ಮಾದಕ ವ್ಯಸನದಿಂದ ಕೊಲೆಗಳು, ದೌರ್ಜನ್ಯ, ಹಲ್ಲೆಗಳು ಹೆಚ್ಚಳವಾಗುತ್ತಿದ್ದು ಜಿಲ್ಲಾಡಳಿತ ನಿಯಂತ್ರಿಸುವಲ್ಲಿ...

ಕಲಬುರಗಿ | ಮನೆಯ ಛಾವಣಿಯಲ್ಲಿ ಬೆಂಕಿ ಅವಘಡ

ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜು ರಸ್ತೆಯಲ್ಲಿರುವ ಎ.ಕೆ. ಇಂಫ್ರಾ ಸಂಸ್ಥೆಗೆ ಸೇರಿದ...