ಜೆ.ಎಚ್‌.ಪಟೇಲ್ ರಾಜಕಾರಣಿಯಾಗಿ, ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಕೊಡುಗೆ ಅಪಾರವಾದದ್ದು: ಕೆ.ಆರ್ ರಮೇಶ್ ಕುಮಾರ್ ಬಣ್ಣನೆ

Date:

ಕೋಲಾರ: ಜೆ.ಎಚ್‌.ಪಟೇಲ್ ರಾಜಕಾರಣಿಯಾಗಿ, ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಕೊಡುಗೆ ಅಪಾರವಾದದ್ದು ಅವರ ತತ್ವ ಸಿದ್ದಾಂತಗಳ ಹಾದಿಯಲ್ಲಿ ಇವತ್ತಿನ ಯುವ ರಾಜಕಾರಣಿಗಳು ನಡೆಯಬೇಕಾಗಿದೆ ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಆರ್.ರಮೇಶ್‍ ಕುಮಾರ್ ಬಣ್ಣಿಸಿದರು.

- Advertisement -

ನಗರದ ಕನ್ನಡ ಭವನದಲ್ಲಿ ಜೆ.ಎಚ್.ಪಟೇಲ್ ಪ್ರತಿಷ್ಠಾನದಿಂದ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಅವರ 25ನೇ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದ ಅವರು ಹಲವಾರು ಒಳ್ಳೆಯ ಕೆಲಸ ಮಾಡಿದ್ದಾರೆ. ಅವುಗಳು ಹೆಚ್ಚಾಗಿ ಪ್ರಚಾರ ಮಾಡಲಿಲ್ಲ. ಆದರೆ, ಮದ್ಯ ಹಾಗೂ ‌ಹೆಣ್ಣಿನ ವಿಚಾರಗಳು ಮುಂಚೂಣಿಗೆ ಬಂದವು. ವ್ಯಕ್ತಿಯನ್ನು ಕೊಲ್ಲಲು ಬಾಂಬ್‌ ಹಾಕುವುದು, ಶೂಟ್ ಮಾಡುವುದಕ್ಕಿಂತ ಚಾರಿತ್ರ್ಯವಧೆ ಮಾಡಿದರೆ ಬೇಗನೇ ‌ಸಾಯಿಸಬಹುದು ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಈಗಿನ ಪರಿಸ್ಥಿತಿಯಲ್ಲಿ ವೋಟ್ ಹಾಕುವವರು, ವೋಟ್ ಹಾಕಿಸಿ ಕೊಳ್ಳುವವರು ಸೇರಿದಂತೆ ಯಾರಿಗೂ ನಿಷ್ಠೆ ಇಲ್ಲವಾಗಿದೆ. ಆದರೆ, ಜವಾಬ್ದಾರಿ ಇಲ್ಲದವರು ಗೆಲ್ಲುವುದು ಅಚ್ಚರಿಯಾಗಿ ಉಳಿದಿದೆ ಎಂದು ಬೇಸರ ವ್ಯಕ್ತಪಡಿಸಿದರು.

ವಿಧಾನಸೌಧದಲ್ಲಿ ಅಧಿವೇಶನ ನಡೆಯುವಾಗ ಮಾತ್ರ ಕೆಲ ಮಹಿಳೆಯರು ಕಸ ಗುಡಿಸುವ, ಸ್ವಚ್ಛತೆಗೊಳಿಸುವ ಕೆಲಸ ಮಾಡುತ್ತಿದ್ದರು. ಅಧಿವೇಶನ ಮುಗಿದರೆ ಅವರಿಗೆ ಕೆಲಸ ಇರುತ್ತಿರಲಿಲ್ಲ. ಹೀಗಾಗಿ, ಅವರನ್ನು ಕಾಯಂಗೊಳಿಸುವ ಸಂಬಂಧ ನಾನು ಅಧಿಕಾರಿಗಳ ಜೊತೆ ಚರ್ಚಿಸಿ ಜೆ.ಎಚ್‌.ಪಟೇಲ್ ಗಮನಕ್ಕೆ ತಂದೆ. ಅದಕ್ಕೆ ಹಸಿರು ನಿಶಾನೆ ನೀಡಿದರು. 37 ಮಹಿಳೆಯರಿಗೆ‌ ಕೆಲಸ‌ ಸಿಕ್ಕಿತ್ತು. ಇಂಥ ಹತ್ತಾರು ಉತ್ತಮ ಕೆಲಸಕ್ಕೆ ಅವರು ಕಾರಣರಾಗಿದ್ದಾರೆ ಎಂದು ನೆನಪಿಸಿಕೊಂಡರು.
ರಾಜಕಾರಣಿಗಳಿಗೆ ಹೃದಯ ತಲೆಯಲ್ಲಿ ಇರಬೇಕು, ಜನಪರವಾಗಿರಬೇಕು‌ ಎಂದು ಪಟೇಲ್ ಹೇಳುತ್ತಿದ್ದರು ಎಂದು ಸ್ಮರಿಸಿದರು.

ಆಗಿನ ಘಟಾನುಘಟಿ ಹಲವು ನಾಯಕರು ತಮ್ಮನ್ನು ಮುಖ್ಯಮಂತ್ರಿ ಮಾಡಿ ಎಂದು ಯಾರನ್ನೂ ಗೋಗರೆಯಲಿಲ್ಲ. ಅಧಿಕಾರ ವ್ಯಾಮೋಹ ಇರಲಿಲ್ಲ. ಆದರೆ, ಅಧಿಕಾರ ಪಡೆದುಕೊಳ್ಳಲು ಈಗ ಪಲ್ಟಿ ಹೊಡೆಯುತ್ತಾರೆ ಎಂದು ಸೂಕ್ಷ್ಮವಾಗಿ ಹೇಳಿದರು.
ಅಕ್ಷರಸ್ಥರಲ್ಲಿ ಇರುವಷ್ಟು ಭ್ರಷ್ಟಾಚಾರ, ಅನ್ಯಾಯ ಬೇರೆಲ್ಲೂ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ.ಗೋಪಾಲಗೌಡ ಮಾತನಾಡಿ, ಜೆ.ಎಚ್.ಪಟೇಲ್‌ ರಾಜಕೀಯ ಮುತ್ಸದ್ಧಿ. ಸಮಾಜವಾದದ ಪಥದಲ್ಲಿ ಆಡಳಿತ ನಡೆಸಲು ಪ್ರಾಮಾಣಿಕ ಪ್ರಯತ್ನ ‌ಮಾಡಿದರು. ಅವರ ಚಿಂತನೆ ಪ್ರಸ್ತುತ ಕಾಲಕ್ಕೆ ಅಗತ್ಯವಾಗಿದೆ. ಅಂಥ ನಾಯಕರನ್ನು ಸೃಷ್ಟಿಸಬೇಕಿದೆ. ಅವರೊಬ್ಬ ‌ಮಾದರಿ‌ ನಾಯಕ’ ಎಂದು ಬಣ್ಣಿಸಿದರು.

ಸದ್ಯ ಸಂಸದೀಯ ಪ್ರಜಾಪ್ರಭುತ್ವ ವಿಫಲವಾಗಿದೆ. ಇದರಿಂದ ಸಮಾಜದಲ್ಲಿ ಅವ್ಯವಸ್ಥೆ ನಿರ್ಮಾಣವಾಗಿದೆ. ರಾಜಕೀಯ ಅಪರಾಧೀಕರಣವಾಗಿದೆ ಎಂದು ವೇದಿಕೆಯಲ್ಲಿದ್ದ ಗಣ್ಯರು ಹೇಳಿದ್ದನ್ನು ಅವರು ಅನುಮೋದಿಸಿದರು.

ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಯೊಬ್ಬರು ಖುಲಾಸೆಗೊಂಡರು. ಆದರೆ, ರಾಜ್ಯ ಸರ್ಕಾರ ಮೇಲ್ಮನವಿ ‌ಸಲ್ಲಿಸಲಿಲ್ಲ. ಬದಲಾಗಿ ಸಂತ್ರಸ್ತ ಬಾಲಕಿಯರು ಮೇಲ್ಮನವಿ ಸಲ್ಲಿಸಿದ್ದಾರೆ. ಶ್ರೀಮಂತರಿಗೆ ಒಂದು ನ್ಯಾಯ, ಬಡವರಿಗೆ ಒಂದು ನ್ಯಾಯ, ಧರ್ಮದರ್ಶಿಗಳಿಗೆ ಒಂದು ನ್ಯಾಯ. ಇದೆಂಥಾ ಆಡಳಿತ ವ್ಯವಸ್ಥೆ, ಇದೆಂಥಾ ಸಮಾಜ ಎಂದು ಪ್ರಶ್ನಿಸಿದರು.

ದೇಶದಲ್ಲಿ ಶೇ 50ರಷ್ಟು ಅವಿದ್ಯಾವಂತರಿದ್ದಾರೆ. ಅವರಿಂದಲೇ ಈ ದೇಶ ಇನ್ನೂ ಉಳಿದಿದೆ. ರಾಜಕಾರಣಿಗಳು ಹಾಗೂ ಅಧಿಕಾರಿಗಳಿಂದಲೇ ಹೆಚ್ಚು ಅವ್ಯವಸ್ಥೆ ಉಂಟಾಗಿದೆ ಎಂದು ಟೀಕಿಸಿದರು.
ನಾಗಲಾಪುರ ಮಠದ ತೇಜೇಶಲಿಂಗ ಸ್ವಾಮೀಜಿ ಮಾತನಾಡಿ, ‘ಬಸವಣ್ಣನವರ ಮಾತಿನಂತೆ‌ ನುಡಿದು, ನಡೆದುಕೊಂಡವರು ಜೆ.ಎಚ್‌.ಪಟೇಲ್‌. ಅವರೊಬ್ಬ ಉತ್ತಮ ಆಡಳಿತಗಾರ. ಅವರ ನಾಯಕರು ಅಗತ್ಯವಿದೆ. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಬೇಕಿದೆ’ ಎಂದು‌ ಸಲಹೆ ನೀಡಿದರು.

ಪ್ರತಿಷ್ಠಾನದ ವ್ಯವಸ್ಥಾಪಕ ಧರ್ಮದರ್ಶಿ ಮಹಿಮ ಪಟೇಲ್ ಮಾತನಾಡಿ, ‘ಶಿಕ್ಷಣ ಕ್ಷೇತ್ರ ಮಾರಾಟದ ವಸ್ತುವಾಗಿದ್ದು, ದಾರಿ ತಪ್ಪಿದೆ. ಆರೋಗ್ಯ ಕ್ಷೇತ್ರ ಎಂಬುದು ಹಣದ ಹಿಂದೆ ಬಿದ್ದಿದೆ.‌ ಲಾಭ ಹಾಗೂ ಹಣಕಾಸಿನದ್ದು ಮಾತ್ರ ಸಂಬಂಧ‌ ಎಂಬತಾಗಿದೆ. ಪರಿಸರ ಹಾಗೂ ರೈತರ ಸಮಸ್ಯೆಗಳನ್ನು ಆಲಿಸುವವರೇ ಇಲ್ಲ. ಪ್ರಸ್ತುತ ರೈತ‌ ಸಂಘಗಳ ಪರಿಸ್ಥಿತಿ ಏನು ಎಂಬುದು ಎಲ್ಲರಿಗೂ ಗೊತ್ತಿದೆ’ ಎಂದರು.

ಇದನ್ನು ಓದಿದ್ದೀರಾ..? ಲೈಕೊ ಕಂಪನಿಯಿಂದ ಬಾಲಕರ ಕಾಲೇಜಿಗೆ ವಾಟರ್ ಫಿಲ್ಟರ್ ವಿತರಣೆ

ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌ ಹಾಗೂ ವಕೀಲ ಸಿ.ಎಸ್.ದ್ವಾರಕನಾಥ್ ಹಾಗೂ ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ಮಾತನಾಡಿದರು. ಜೆಡಿಯು ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ.ಕೆ.ನಾಗರಾಜ್ ಪ್ರತಿಷ್ಠಾನದ ಅಧ್ಯಕ್ಷ ತ್ರಿಶೂಲಪಾಣಿ ಪಟೇಲ್, ಧರ್ಮದರ್ಶಿ ಟಿ.ಪ್ರಭಾಕರ್, ತೇಜಸ್ವಿ ಪಟೇಲ್ ಹಾಗೂ ಜೆ.ಎಚ್‌.ಪಟೇಲ್‌ ಅಭಿಮಾನಿಗಳು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...