ಜೋಯಿಡಾದಲ್ಲಿ ವೀರಯೋಧ ಈಶ್ವರ ನಾಯ್ಕರಿಗೆ ಭಾವಪೂರ್ಣ ಅಂತಿಮ ನಮನ

Date:

ಜೋಯಿಡಾ: ದೇಶಸೇವೆಯಲ್ಲಿ ತೊಡಗಿದ್ದ ಭಾರತೀಯ ಸೇನೆಯ ಯೋಧ ಈಶ್ವರ ವಸಂತ ನಾಯ್ಕ ಅವರ ಪಾರ್ಥಿವ ಶರೀರ ಮಂಗಳವಾರ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಪಟ್ಟಣಕ್ಕೆ ಆಗಮಿಸಿತು. ಈ ಸಂದರ್ಭದಲ್ಲಿ ಸಾರ್ವಜನಿಕರು, ಮಾಜಿ ಸೈನಿಕರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪುಷ್ಪನಮನ ಸಲ್ಲಿಸಿ ವೀರಯೋಧರಿಗೆ ಅಂತಿಮ ಗೌರವ ಅರ್ಪಿಸಿದರು.

- Advertisement -

ಜೋಯಿಡಾ ತಾಲೂಕಿನ ಗಾಂಗೋಡಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇರಂಗೋಳ-ಮಾಲಾಂಗಿಣಿ ಗ್ರಾಮದ ನಿವಾಸಿಯಾಗಿದ್ದ ಈಶ್ವರ ವಸಂತ ನಾಯ್ಕ ಅವರ ಪಾರ್ಥಿವ ಶರೀರ ಶಿವಾಜಿ ವೃತ್ತಕ್ಕೆ ತಲುಪುತ್ತಿದ್ದಂತೆ ಶೋಕದ ವಾತಾವರಣ ನಿರ್ಮಾಣವಾಯಿತು. ನೂರಾರು ಜನರು ಸಾಲಿನಲ್ಲಿ ನಿಂತು ಅಂತಿಮ ದರ್ಶನ ಪಡೆದು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಈ ಸುದ್ದಿ ಓದಿದ್ದೀರಾ? ಜೊಯಿಡಾ | ಎಸ್‌ಐಆರ್-2026ರ ಅಂಗವಾಗಿ ಯಶಸ್ವಿ ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಶಿಬಿರ

ಬಳಿಕ ಪಾರ್ಥಿವ ಶರೀರವನ್ನು ಅವರ ಸ್ವಗ್ರಾಮ ಇರಂಗೋಳ-ಮಾಲಾಂಗಿಣಿಗೆ ಕೊಂಡೊಯ್ಯಲಾಯಿತು. ಅಲ್ಲಿ ಕುಟುಂಬದವರು, ಬಂಧು-ಬಳಗ, ಗ್ರಾಮಸ್ಥರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸಂತೋಷ ಸಾವಂತ, “ಯೋಧ ಈಶ್ವರ ವಸಂತ ನಾಯ್ಕ ಅವರು ದೇಶದ ರಕ್ಷಣೆಗೆ ಅತ್ಯಂತ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದರು. ಅವರ ಅಗಲಿಕೆ ಜೋಯಿಡಾ ತಾಲೂಕಿಗೆ ಅಪಾರ ನಷ್ಟವಾಗಿದೆ. ಅವರ ಸೇವೆ ಮತ್ತು ತ್ಯಾಗ ಸದಾ ಸ್ಮರಣೀಯವಾಗಿರಲಿದೆ,” ಎಂದು ಸಂತಾಪ ವ್ಯಕ್ತಪಡಿಸಿದರು.

ಯೋಧರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಜೋಯಿಡಾ ತಾಲೂಕಿನ ಹಲವು ಭಾಗಗಳಲ್ಲಿ ಶೋಕ ವ್ಯಕ್ತವಾಗಿದ್ದು, ಅಂತಿಮ ದರ್ಶನಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಗೌರವ ಸಲ್ಲಿಸಿದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ಈಶ್ವರ ವಸಂತ ನಾಯ್ಕ ಅವರ ಸೇವೆ ಮತ್ತು ತ್ಯಾಗವನ್ನು ಜನರು ಕೃತಜ್ಞತೆಯಿಂದ ಸ್ಮರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ಉತ್ತರ ಕನ್ನಡ: ಹಾಲಕ್ಕಿಗಳ ಹಾಡು-ಪಾಡು ಮತ್ತು ಮರೀಚಿಕೆಯಾದ ಮೀಸಲಾತಿ

ಹಾಲಕ್ಕಿಗಳಿಗೆ ಪರಿಶಿಷ್ಟ ಪಂಗಡ ಮೀಸಲಾತಿ ಮರೀಚಿಕೆ ಆಗುತ್ತಿದೆ. ಮೀಲಾತಿ ಕೊಡಿಸುವ ಬಣ್ಣ-ಬಣ್ಣದ...