ಡಿಸೆಂಬರ್ 12 ರಿಂದ ಹೆಲ್ಮೆಟ್ ಕಡ್ಡಾಯ

Date:

ಬಾಗೇಪಲ್ಲಿ:-ವಾಹನ ಸವಾರರ ಸುರಕ್ಷತೆ ಮತ್ತು ರಸ್ತೆ ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡಿ. 12 ರಿಂದ ಹೆಲ್ಮೆಟ್ ಕಡ್ಡಾಯ ಮಾಡಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸ್ ಆದೇಶದ ಮೇರೆಗೆ ಹಿನ್ನೆಲೆಯಲ್ಲಿ ಬಾಗೇಪಲ್ಲಿ ತಾಲ್ಲೂಕು ಕಛೇರಿಯ ಮುಂದೆ ಮೊದಲ ದಿನ ಹೆಲ್ಮೆಟ್ ಧರಿಸಿದೇ ಬಂದ ದ್ವಿಚಕ್ರ ವಾಹನ ಸವಾರಿಗೆ
ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ ಬಿಸಿ ಮುಟ್ಟಿಸಿದರು.

- Advertisement -

ತದನಂತರ ಮಾತನಾಡಿಡಿಸೆಂಬರ್ 12 ರಿಂದ ತಾಲ್ಲೂಕಿನಾದ್ಯಂತ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವಂತೆ ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ ಹೇಳಿದರು.

ಮುಖ್ಯ ರಸ್ತೆಯ ಪೊಲೀಸ್ ಠಾಣೆ ಮುಂಭಾಗದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಅವರ ನೇತೃತ್ವದಲ್ಲಿ ದ್ವಿಚಕ್ರವಾಹನಗಳನ್ನು ತಡೆದು ಹೆಲ್ಮೆಟ್ ಧರಿಸದೆ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಸವಾರರು ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ತಮ್ಮ ಪ್ರಾಣ ಹಾನಿ ತಪ್ಪಿಸುವ ಸಲುವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನವನ್ನು ಚಾಲನೆ ಮಾಡಬೇಕು ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ತಂದು ತೋರಿಸಿ ತಮ್ಮ ವಾಹನದ ದಾಖಲಾತಿಗಳನ್ನು ತೋರಿಸುವ ಮೂಲಕ ತಮ್ಮ ದ್ವಿಚಕ್ರ ವಾಹನಗಳನ್ನು ತೆಗೆದುಕೊಂಡು ಹೋಗಬಹುದಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿ ಹತ್ಯೆಯನ್ನು ಸಮರ್ಥಿಸುವ ದುರುಳರಿಗೆ ಸರ್ದಾರ್ ಪಟೇಲರ ಪತ್ರಗಳೇ...

ಗಾಂಧಿ ಹತ್ಯೆಯ ಕುರಿತು ಅಡ್ಡಂಡ ಕಾರ್ಯಪ್ಪ ರಚಿಸಿರುವ ನಾಟಕ ಬೆಂಗಳೂರಿನಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ನಾಟಕದಲ್ಲಿ ಗಾಂಧೀಜಿಯನ್ನು ದೇಶವಿರೋಧಿಯಂತೆ ಬಿಂಬಿಸಿ, ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಸಮರ್ಥಿಸುವ ಪ್ರಯತ್ನ ನಡೆದಿದೆ. ಗಾಂಧಿ ಹತ್ಯೆಯ...

ʼಈ ದಿನʼ ಸುದ್ದಿ ವಿಶ್ಲೇಷಣೆ | ಇಂದಿರಾ ಅವರನ್ನು...

ಗುಜರಾತ್ ವಿದ್ಯಾರ್ಥಿಗಳು ಹೊತ್ತಿಸಿದ ಹೋರಾಟದ ಕಿಡಿ, ಬಿಹಾರದ ‘ಸಂಪೂರ್ಣ ಕ್ರಾಂತಿ’ ಮೂಲಕ ರಾಷ್ಟ್ರ ರಾಜಕಾರಣವನ್ನೇ ವ್ಯಾಪಿಸಿತು. ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ವಿದ್ಯಾರ್ಥಿ ಶಕ್ತಿಯ ಸಾಮರ್ಥ್ಯ ಮತ್ತು ಜನಾಂದೋಲನಗಳ ಸಂಕೀರ್ಣತೆಯನ್ನು ನೆನಪಿಸುವ ಬೆಳಕಿನ ಅಧ್ಯಾಯ ದೆಹಲಿಯಲ್ಲಿ...

ಮೋದಿಗೆ ರಾಹುಲ್‌ ಬಹಿರಂಗ ಸವಾಲು; ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಟ...

ಭಾರತೀಯ ರಾಜಕಾರಣದಲ್ಲಿ ಕಳೆದ ಒಂದು ದಶಕದಿಂದ ನಿರಂತರವಾಗಿ ಚರ್ಚೆಯಾಗುತ್ತಿರುವ ಪ್ರಮುಖ ಕೇಂದ್ರಬಿಂದು ರಾಹುಲ್ ಗಾಂಧಿ. ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಧಿಕಾರಾವಧಿಯಲ್ಲಿ ಪ್ರತಿಪಕ್ಷಗಳನ್ನು ದಮನ ಮಾಡಲು, ಹತ್ತಿಕ್ಕಲು ಮತ್ತು ನಾಯಕರ ವ್ಯಕ್ತಿತ್ವವನ್ನು ಹನನ...

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಹೆಲ್ಮೆಟ್ ಧರಿಸುವುದರಿಂದ ನಿಮ್ಮ ಅಮೂಲ್ಯ ಜೀವ ಉಳಿಯುತ್ತದೆ,ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಇರುವುದರಿಂದ ಸಾಕಷ್ಟು ಅವಘಡಗಳು ಸಂಭವಿಸುತ್ತಿದೆ. ನಿಮ್ಮನ್ನು ನಂಬಿ ನಿಮ್ಮ ಕುಟುಂಬ ಇರುತ್ತದೆ. ಅಪಘಾತವಾದರೆ ಮೊದಲು ತಲೆಗೆ ಏಟು ಬೀಳುತ್ತದೆ. ತಲೆಯನ್ನು ರಕ್ಷಣೆ ಮಾಡಿಕೊಳ್ಳಲು ಗುಣಮಟ್ಟದ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದರು.

ಅಪಘಾತಗಳನ್ನು ತಡೆಗಟ್ಟಲು ಮತ್ತು ಸಾರ್ವಜನಿಕರ ಪ್ರಾಣ ರಕ್ಷಣೆಗಾಗಿ ಪೊಲೀಸ್ ಇಲಾಖೆ ಮಹತ್ವದ ಮತ್ತು ಕಠಿಣ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದರು.

ಮೊದಲ ದಿನವಾದ ಕಾರಣ ಯಾವುದೇ ಸವಾರರಿಗೆ ದಂಡ ವಿಧಿಸಲಿಲ್ಲ. ಬದಲಾಗಿ ದಂಡ ಪಾವತಿ ಮಾಡಬೇಕಿದ್ದ ಹಣದಲ್ಲೇ ಹೆಲ್ಮೆಟ್‌ ಖರೀದಿಸಿ ತರಬೇಕೆಂಬುದು ಕಡ್ಡಾಯವಾಗಿತ್ತು. ಆಮೇಲೆಷ್ಟೇ ವಾಹನ ಬಿಟ್ಟು ಕಳಿಸುತ್ತಿದ್ದರು.

ಇದನ್ನು ಓದಿದ್ದೀರಾ..? ಅನ್ಯ ಭಾಷಿಕರ ಹಾವಳಿ, ಕನ್ನಡ ಮೊದಲ ಆಧ್ಯತೆಯಾಗಲಿ: ಕೊತ್ತೂರು ಮಂಜುನಾಥ್

ಈ ಸಂದರ್ಭದಲ್ಲಿ ಎ.ಎಸ್.ಐ.ಆನಂದ್,ಶ್ರೀನಿವಾಸ್, ಪೋಲಿಸ್ ಮಧುಸೂದನ್, ಹೋಂ ಗಾರ್ಡ್ ಕೃಷ್ಣಪ್ಪ ಮತ್ತಿತರರು ಇದ್ದರು.

WhatsApp Image 2025 06 24 at 16.24.21 6207fd1d
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನ.12ರಂದು ಜಿಲ್ಲಾಮಟ್ಟದ ಯುವಜನೋತ್ಸವ

ಯುವಜನರಲ್ಲಿ ಅಡಗಿರುವ ಸೃಜನಶೀಲ ಪ್ರತಿಭೆ ಹಾಗೂ ಕಲಾತ್ಮಕ ಅಭಿವ್ಯಕ್ತಿಯನ್ನು ಗುರುತಿಸಿ ಪ್ರೋತ್ಸಾಹಿಸುವ...

ಚಿಕ್ಕಮಗಳೂರು | SIR ಪ್ರಕ್ರಿಯೆ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡಿದಂತೆ; ಸೈಯದ್ ಹನೀಫ್

ಕೇಂದ್ರದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ SIR ಪ್ರಕ್ರಿಯೆ ಆರಂಭಿಸಿದ ನಂತರ...

ವಿಜಯಪುರ | ಜನಗಣತಿ-2027 ನಿಖರವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆ

ಮುಂದಿನ ಹತ್ತು ವರ್ಷಗಳ ಅಭಿವೃದ್ಧಿ ಯೋಜನೆ, ಬಜೆಟ್ ಹಂಚಿಕೆ, ಎಸ್‌ಸಿಪಿ-ಟಿಎಸ್‌ಪಿ ಅನುದಾನ...