ತೀವ್ರ ಹಣಾಹಣಿ ಕಂಡ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು

Date:

Advertisements

ಕರ್ನಾಟಕದ 224 ಕ್ಷೇತ್ರಗಳ ಪೈಕಿ ಭಾರೀ ಕುತೂಹಲಕ್ಕೆ ಕಾರಣವಾದ ಕ್ಷೇತ್ರಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರ ಕೂಡಾ ಒಂದು. ಕ್ಷೇತ್ರದಲ್ಲಿ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸ್ಪರ್ಧೆಯಿಂದಾಗಿ ಭಾರಿ ಪ್ರಬಲ ತ್ರಿಕೋನ ಸ್ಪರ್ಧೆಯಿಂದ ಕುತೂಹಲ ಮೂಡಿಸಿದ್ದ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಸುಮಾರು ಮೂರು ಸಾವಿರ ಮತಗಳ ಅಂತರದಲ್ಲಿ ಗೆದ್ದಿದ್ದಾರೆ. ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಸೋತಿದ್ದಾರೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಆಶಾ ಗೌಡ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ.

ಪುತ್ತೂರು ಕ್ಷೇತ್ರದಲ್ಲಿ ಒಟ್ಟು ಶೇ. 79.91 ಮತದಾನವಾಗಿತ್ತು. ಮೂಲ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರಾದ ಅರುಣ್ ಕುಮಾರ್ ಪುತ್ತಿಲ ಅವರು ಕಮಲದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಟಿಕೆಟ್ ಸಿಗದ ಹಿನ್ನಲೆಯಲ್ಲಿ ಬಂಡಾಯ ಎದ್ದು ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಅರುಣ್ ಕುಮಾರ್ ಪುತ್ತಿಲ ಮತ್ತು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಡುವಿನ ತೀವ್ರ ಹಣಾಹಣಿಯಲ್ಲಿ ಕಾಂಗ್ರೆಸ್ ಜಯ ಸಾಧಿಸಿದೆ.

ಪುತ್ತೂರು ಕ್ಷೇತ್ರವನ್ನು ಬಿಜೆಪಿ ಕಳೆದುಕೊಳ್ಳಲು ಸ್ವಯಂಕೃತಾಪರಾಧವೇ ಕಾರಣ ಎನ್ನಬಹುದು. ಆರಂಭದಲ್ಲಿ ಅಭ್ಯರ್ಥಿ ಆಯ್ಕೆಯಲ್ಲೇ ಮುಗ್ಗರಿಸಿತ್ತು. ಅಭ್ಯರ್ಥಿ ಆಯ್ಕೆಯ ನಂತರ ಪಕ್ಷದ ಕಾರ್ಯಕರ್ತರು ಮತ್ತು ಇತರ ಮುಖಂಡರ ನಡುವಿನ ಬಂಡಾಯ ಹತ್ತಿಕ್ಕುವಲ್ಲಿ ವಿಫಲವಾಯಿತು. ಆದರೆ ಅಶೋಕ್ ರೈ ಕಾಂಗ್ರೆಸ್ ಅಭ್ಯರ್ಥಿಯಾಗುತ್ತಲೇ, ಇತರ ಆಕಾಂಕ್ಷಿಗಳನ್ನು ಸಂಪರ್ಕಿಸಿ ತಮ್ಮ ವಿರೋಧಿಗಳ ಮನವೊಲಿಸಿ ಒಗ್ಗಟ್ಟಿನ ಹೋರಾಟ ಮುಂದಿಡುವಲ್ಲಿ ಯಶಸ್ವಿಯಾಗಿದ್ದರು. ಟಿಕೆಟ್ ಆಕಾಂಕ್ಷಿಗಳಾಗಿದ್ದ ಶಕುಂತಲಾ ಶೆಟ್ಟಿ ಮತ್ತಿತರ ಮನವೊಲಿಸುವುದು ಸುಲಭವಾಗಿರಲಿಲ್ಲ. ಆದರೆ, ಅಶೋಕ್ ರೈ ತಮ್ಮ ಕುಶಲ ರಾಜಕೀಯ ತಂತ್ರಗಾರಿಕೆಯನ್ನು ಬಳಸಿಕೊಂಡಿದ್ದರು.

Advertisements

ಬಿಜೆಪಿ ಅಭ್ಯರ್ಥಿ ಆಶಾ ಗೌಡ ಮತ್ತು ಅವರ ಬೆಂಬಲಿಗರಿಂದ ಅಂತಹ ಪ್ರಯತ್ನವಾಗಲಿಲ್ಲ. ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಯ ಮನವೊಲಿಕೆಗೆ ಬಾಗಲಿಲ್ಲ. ಬಿಜೆಪಿ ಕಾರ್ಯಕರ್ತರೊಬ್ಬರು ಹೇಳುವಂತೆ, ಸ್ವತಃ ಅಮಿತ್ ಶಾ ಅವರೇ ಪುತ್ತಿಲ ಅವರಿಗೆ ಕರೆ ಮಾಡಿ ಬಂಡಾಯ ಶಮನಕ್ಕೆ ಯತ್ನಿಸಿದರೂ ಪ್ರಯತ್ನ ಕೈಗೂಡಿರಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X