ದಕ್ಷಿಣ ಕನ್ನಡ | ಕಾರ್ಪೊರೇಟ್ ಹಿಂದುತ್ವದ ಕೂಟವನ್ನು ಸೋಲಿಸದಿದ್ದರೆ ಭಾರತಕ್ಕೆ ಭವಿಷ್ಯವಿಲ್ಲ: ಸುನಿಲ್ ಕುಮಾರ್ ಬಜಾಲ್

Date:

ಕಳೆದ ಹತ್ತು ವರ್ಷಗಳಲ್ಲಿ ದೇಶದ ಜನರಿಗೆ ಮಂಕುಬೂದಿ ಎರಚಿ, ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರ ನಡೆಸಿದ  ಮೋದಿ ನೇತೃತ್ವದ ಸರ್ಕಾರ  ಜನತೆಗೆ ಮೋಸ ಮಾಡಿ ಲಕ್ಷಾಂತರ ಕೋಟಿ ರೂಪಾಯಿ ಹಣವನ್ನು ಚುನಾವಣಾ ಬಾಂಡ್ ಹೆಸರಿನಲ್ಲಿ ಲಪಟಾಯಿಸಿ, ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಂತಹ ಕಾರ್ಪೊರೇಟ್ ಹಿಂದುತ್ವದ ದುಷ್ಟಕೂಟವನ್ನು ದೇಶದ ಜನತೆ ಒಂದಾಗಿ ಸೋಲಿಸದಿದ್ದರೆ ಬಾರತಕ್ಕೆ ಭವಿಷ್ಯವಿಲ್ಲ ಎಂದು ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ ಕುಮಾರ್ ಬಜಾಲ್ ಆತಂಕ ವ್ಯಕ್ತಪಡಿಸಿದರು.

ಅವರು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕು ಮಟ್ಟದ ಸಿಪಿಎಂ ಸ್ಥಳೀಯ ಶಾಖಾ ಕಾರ್ಯದರ್ಶಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ಮೂರನೇ ಬಾರಿಗೆ ಮತ್ತೆ ಅಧಿಕಾರದ ಗದ್ದುಗೆಯನ್ನು ಏರುವುದಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿರುವ ಬಿಜೆಪಿ, ಇಡಿ ಐಟಿ ಧಾಳಿಗಳ ಮೂಲಕ ಯಾತಕ್ಕಾಗಿ ಪ್ರತಿಪಕ್ಷಗಳನ್ನು ಮಣಿಸಲು ಹೊರಟಿದೆ? ಮಾತ್ರವಲ್ಲದೆ ಹಿಂದುತ್ವದ ಹೆಸರಿನಲ್ಲಿ ಮತ್ತೇ ದೇಶವನ್ನು ವಿಭಜಿಸಲು ಹೊರಟ ಬಿಜೆಪಿ ಸಂಘಪರಿವಾರದ ಕುತಂತ್ರಗಳನ್ನು ಜನತೆ ಸರಿಯಾದ ದಾರಿಯಲ್ಲಿ ಅರ್ಥೈಸಬೇಕಾಗಿದೆ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಸಿಪಿಐಎಂ ಜಿಲ್ಲೆಯ ಹಿರಿಯ ನಾಯಕರಾದ ಕ್ರಷ್ಣಪ್ಪ ಸಾಲಿಯಾನ್‌ರವರು ಮಾತನಾಡುತ್ತಾ, ದೇಶದ ಪ್ರಮುಖ ಆಧಾರ ಸ್ತಂಭಗಳಾದ ಕಾರ್ಮಿಕ ವರ್ಗ ಹಾಗೂ ರೈತಾಪಿ ಜನತೆಯ ಬದುಕಿನಲ್ಲಿ ಚೆಲ್ಲಾಟವಾಡುವ ಮೋದಿ ಸರ್ಕಾರ ದೇಶದ ಅರ್ಥಿಕತೆಯನ್ನೇ ಸರ್ವನಾಶ ಮಾಡಿದೆ. ಸಾರ್ವಜನಿಕ ಉದ್ದಿಮೆಗಳನ್ನು ಕಾರ್ಪೊರೇಟ್ ಸಂಸ್ಥೆಗಳ ಕೈಗೊಪ್ಪಿಸಿ ಮತ್ತೆ ದೇಶವನ್ನು ಗುಲಾಮಗಿರಿಯತ್ತ ಸಾಗಿಸಲು ಹುನ್ನಾರ ನಡೆಸುತ್ತಿದೆ ಎಂದು  ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಾಸ್ತಾವಿಕವಾಗಿ ಮಾತನಾಡಿದ ಸಿಪಿಐಎಂ ಉಳ್ಳಾಲ ತಾಲೂಕು ಕಾರ್ಯದರ್ಶಿ ಯು.ಜಯಂತ ನಾಯಕ್ ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೂಟವನ್ನು ಸೋಲಿಸಿ, ಜಾತ್ಯಾತೀತ ಶಕ್ತಿಗಳ ಗೆಲುವಿಗೆ ಕಮ್ಯುನಿಸ್ಟರು ಶಕ್ತಿಮೀರಿ ಶ್ರಮಿಸಬೇಕೆಂದು ಹೇಳಿದರು.

ಮಾರ್ಚ್ 31ರಂದು ತೊಕ್ಕೋಟು ಯುನಿಟಿ ಹಾಲ್‌ನಲ್ಲಿ ನಡೆಯಲಿರುವ ಮಂಗಳೂರು ವಿಧಾನಸಭಾ ಕ್ಷೇತ್ರದ ರಾಜಕೀಯ ಸಮಾವೇಶ, ಸ್ಥಳೀಯ ಪ್ರದೇಶಗಳಲ್ಲಿ ರಚಿಸಲ್ಪಡುವ ಸಿದ್ದತಾ ಸಭೆಗಳು ಹಾಗೂ ಎಪ್ರಿಲ್ 7ರಂದು ಜಿಲ್ಲೆಯಾದ್ಯಂತ ಯೋಜಿಸಲಾಗಿರುವ ಜನತೆಯ ಮಹಾಭಿಯಾನ ಮನೆ ಮನೆ ಭೇಟಿ ಕಾರ್ಯಕ್ರಮಗಳನ್ನು ಉಳ್ಳಾಲ ತಾಲೂಕಿನಲ್ಲಿ ಯಶಸ್ವಿಗೊಳಿಸಲು ಸಭೆಯು ಸರ್ವಾನುಮತದಿಂದ ಅಂಗೀಕರಿಸಿತು.

ಸಭೆಯಲ್ಲಿ ಸಿಪಿಐಎಂ ಜಿಲ್ಲಾ ನಾಯಕರಾದ ಪದ್ಮಾವತಿ ಶೆಟ್ಟಿ, ತಾಲೂಕು ಮುಖಂಡರಾದ ಸುಂದರ ಕುಂಪಲ, ಲೋಕಯ್ಯ ಪನೀರ್, ವಿಲಾಸಿನಿ ತೊಕ್ಕೋಟು, ರೋಹಿದಾಸ್, ಚಂದ್ರಹಾಸ ಪಿಲಾರ್, ಜಯಂತ ಅಂಬ್ಲಮೊಗರು, ಶೇಖರ್ ಕುಂದರ್ ಮುಂತಾದವರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...

ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್...

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ...

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...