ದಲಿತ ಸಂಘರ್ಷ ಸಮಿತಿಯಿಂದ ಭೀಮಾ ಕೋರೆಗಾಂವ್ ವಿಜಯೋತ್ಸವ

Date:

ಬಾಗೇಪಲ್ಲಿ:- ದಲಿತ ಸಂಘರ್ಷ ಸಮಿತಿಯಿಂದ ಭೀಮಾ ಕೋರೆಗಾಂವ್ ವಿಜಯೋತ್ಸವ ನಡೆಯಿತು. ಗೂಳೂರು ವೃತ್ತದಿಂದ ಹೊರಟ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಸ್ ನಿಲ್ದಾಣ ದಲ್ಲಿ ಸಮಾವೇಶಗೊಂಡರು. ಕೋರೆಗಾಂವ್ ಮಹರ್‌ ರೆಜಿಮೆಂಟಿನ ಯೋಧರ ಹೋರಾಟವನ್ನು ಸ್ಮರಿಸಲಾಯಿತು.

- Advertisement -

ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನ ಕೈವಾರಮಯ್ಯ ಮಾತನಾಡಿ, ‘ಕೋರೆಗಾಂವ್‌ ಘಟನೆಯು ಮಹರ್‌ ಸೈನಿಕರ ಹೋರಾಟವನ್ನು ಸ್ಮರಿಸುತ್ತದೆ. ಇತಿಹಾಸದಲ್ಲಿ ಹುದುಗಿದ್ದ ಮಹರ್ ಸೈನಿಕರ ಚರಿತ್ರೆಯನ್ನು ಅಂಬೇಡ್ಕರ್‌ ಅವರು ಅಧ್ಯಯನ ನಡೆಸಿ ಮುನ್ನಲೆಗೆ ತಂದರು’ ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪೇಶ್ವೆ ಸೈನ್ಯದ ವಿರುದ್ಧ ದಲಿತ ಮಹರ್ ಸೈನಿಕರ ಗೆಲುವನ್ನು ಈ ವಿಜಯೋತ್ಸವವು ಸ್ಮರಿಸುತ್ತದೆ. ಈ ಹೋರಾಟವು ಇಂದಿಗೂ ದಲಿತ ಸಮುದಾಯಕ್ಕೆ ಮಾದರಿಯಾಗಿದೆ. ಆತ್ಮವಿಶ್ವಾಸವನ್ನು ತುಂಬಲಿದೆ ಎಂದು ಹೇಳಿದರು.

‘ದೇಶದಲ್ಲಿ ಕೆಲವರು ಜ.1ರಂದು ಹೊಸ ವರ್ಷವಾಗಿ ಸಂಭ್ರಮಿಸುವರು. ನಾವು ಪೇಶ್ವೆಗಳ ವಿರುದ್ಧ ಮಹರ್ ಸೈನಿಕರು ಹೋರಾಟ ನಡೆಸಿ ವಿಜಯ ಸಾಧಿಸಿದ ದಿನವಾಗಿ ಆಚರಿಸುತ್ತೇವೆ’ ಎಂದು ಹೇಳಿದರು.

ದಲಿತ ಸಮುದಾಯವನ್ನು ಅವಮಾನಿಸಿದ ಪೇಶ್ವೆಗಳ ವಿರುದ್ಧ ಆತ್ಮಗೌರವಕ್ಕಾಗಿ ಹೋರಾಡಿದ ದಿನವೇ ಕೋರೆಗಾಂವ್ ವಿಜಯೋತ್ಸವದ ದಿನವಾಗಿದೆ. ಇತಿಹಾಸದಲ್ಲಿ ಮುಚ್ಚಿ ಹೋಗಿದ್ದ ಈ ವಿಚಾರವನ್ನು ಅಂಬೇಡ್ಕರ್ ಅವರು ಗುರುತಿಸಿದರು ಎಂದು ಹೇಳಿದರು.

ಇದನ್ನು ಓದಿದ್ದೀರಾ..?ಬೆಂ ಗ್ರಾಮಾಂತರ ಎಸ್‌ಪಿ ಆಗಿದ್ದ ಸಿ.ಕೆ ಬಾಬಾ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ ಯಾಗಿ ನೇಮಕ

ಈ ಸಂದರ್ಭದಲ್ಲಿ ಎ.ನಂಜುಂಡಪ್ಪ ,ವೆಂಕಟಶಿವಾರೆಡ್ಡಿ,ವೆಂಕಟೇಶ್, ಕೆ.ವಿ.ಸುಬ್ರಹ್ಮಣ್ಯ ಗಣೇಶ್, ಮುರಳಿ,ಹಾಗೂ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...