ಧಾರವಾಡ | ಕೌಟುಂಬಿಕ ಕಲಹ; ಮಕ್ಕಳಿಗೆ ವಿಷವುಣಿಸಿದ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ

Date:

ಕೌಟುಂಬಿಕ ಕಲಹದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರಿನಲ್ಲಿ‌ ನಡೆದಿದೆ.

- Advertisement -

ಮಾಲಂಬಿ ಎಂಬುವರು ತನ್ನ 8 ಹಾಗೂ 6 ವರ್ಷದ ಇಬ್ಬರು ಮಕ್ಕಳಿಗೆ ವಿಷವುಣಿಸಿದ್ದಾರೆ. ನಂತರ ತಾನೂ ವಿಷ ಸೇವಿಸಿದ್ದಾರೆ. ಬಳಿಕ ಅಸ್ವಸ್ಥರಾಗಿದ್ದರಿಂದ ಹುಬ್ಬಳ್ಳಿಯ ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಮೂಲತಃ ಕೊಪ್ಪಳ ತಾಲೂಕಿನ ಗೊಂಡಬಾಳ ಗ್ರಾಮದ ನಿವಾಸಿಯಾಗಿರುವ ಮಹಿಳೆ ಗಂಗಾವತಿಯ ಆಜಿಜ್ ಜತೆಗೆ ಮದುವೆಯಾಗಿದ್ದರು. ನಂತರ ಇಬ್ಬರ ನಡುವೆ ಮನಸ್ತಾಪವುಂಟಾಗಿತ್ತು. ಇದಾದ ಬಳಿಕ ಆಜಿಜ್ ಬಾಷಾ ಮಾಲಂಬಿಯನ್ನು ಬಿಟ್ಟು ಹೋಗಿದ್ದ. ಅಲ್ಲದೆ, ಪತಿಯ ಮನೆಯಲ್ಲಿ ಕಿರುಕುಳ ನೀಡಲಾಗುತ್ತಿತ್ತೆಂಬ ಆರೋಪವೂ ಕೇಳಿಬಂದಿದೆ.

“ಕಿರುಕುಳದಿಂದ ಮನನೊಂದ ಮಾಲಂಬಿ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಮಾಲಂಬಿ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ತೀವ್ರ ನಿಗಾ ಘಟಕ(ICU)ದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಸ್ಥಿತಿ ಚಿಂತಾಜನಕವಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪ್ರವಾದಿ ಮಹಮ್ಮದ್ ಕುರಿತು ಅವಹೇಳನ; ಯತ್ನಾಳ್ ವಿರುದ್ಧ ಕಾನೂನು ಕ್ರಮಕ್ಕೆ SDPI ಆಗ್ರಹ

“ಶುಕ್ರವಾರ ರಾತ್ರಿ ತೀವ್ರವಾಗಿ ಅಸ್ವಸ್ಥಗೊಂಡ ಸ್ಥಿತಿಯಲ್ಲಿದ್ದ ತಾಯಿ-ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದರು. ನಮ್ಮ ಸಿಬ್ಬಂದಿ ಚಿಕಿತ್ಸೆ ಮುಂದುವರೆಸಿದ್ದಾರೆ. ಇದೀಗ ತಾಯಿ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಆದರೆ ಇಬ್ಬರು‌ ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತೀವ್ರ ನಿಗಾಘಟಕದಲ್ಲಿ‌ ಇಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ” ಎಂದು ಕೆಎಂಸಿಆರ್​​ಐ ನಿರ್ದೇಶಕ ಡಾ. ಎಸ್ ಎಫ್ ಕಮ್ಮಾರ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...