ಧಾರವಾಡ | ಮರ್ಯಾದೆಗೇಡು ಹತ್ಯೆಗೆ ಎಐಎಮ್ಎಸ್ಎಸ್ ಖಂಡನೆ; ಸೂಕ್ತ ಕ್ರಮಕ್ಕೆ ಒತ್ತಾಯ

Date:

ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಖಂಡಿಸಿ, ಅಪರಾಧಿಗಳಿಗೆ ಸೂಕ್ತ ಶಿಕ್ಷೆ ನೀಡಲು ಆಗ್ರಹಿಸಿ ಎಐಎಮ್ಎಸ್ಎಸ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಪತ್ರಿಕೆಯಲ್ಲಿ ವರದಿಯಾದಂತೆ, ಮಾನ್ಯ ಎಂಬ ಯುವತಿ ಅನ್ಯ ಜಾತಿಯ ಹುಡುಗನ ಜೊತೆ  ಮದುವೆಯಾಗಿದ್ದಾಳೆ ಎಂದು ಕೋಪಗೊಂಡ ಪಾಲಕರು ಗರ್ಭಿಣಿ ಮಗಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದೂ, ಹುಡುಗನ ಕುಟುಂಬದವರ ಮೇಲೂ ಹಲ್ಲೇ ನಡೆಸಿರುವ ಪ್ರಕರಣ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇಂತಹ ಅಮಾನವೀಯ ಘಟನೆಗಳು ಕರ್ನಾಟಕದಲ್ಲಿ ನೂರಾರು ನಡೆದಿವೆ. ಗದಗದಲ್ಲಿ 2019 ರಲ್ಲಿ ಗಂಗಮ್ಮ ಮತ್ತು ರಮೇಶ್ ಎನ್ನುವವರು ಅಂತರ್ಜಾತಿ ವಿವಾಹವಾದಾಗ ದೀಪಾವಳಿ ಹಬ್ಬದ ನೆಪದಲ್ಲಿ ಕರೆಸಿಕೊಂಡು ಗಂಗಮ್ಮಳ ಸಂಭಂದಿಕರು ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಸಾಯಿಸಿದರು. ಮಂಡ್ಯ, ಕೋಲಾರ, ವಿಜಯಪುರ, ಹಾಸನದಲ್ಲಿ ಸಾಕಷ್ಟು ಮರ್ಯಾದ ಹತ್ಯೆ ಘಟನೆಗಳು ಜರುಗಿವೆ. ಇವು ಕೇವಲ ವರದಿಯಾಗಿರುವ ಪ್ರಕರಣಗಳು, ವರದಿಯಾಗದ ಪ್ರಕರಣಗಳು ಅದೆಷ್ಟೋ ಇದ್ದಾವೆ ಎಂದು ಮನವಿ ಪತ್ರದಲ್ಲಿ ಕಾಣಿಸಲಾಗಿದೆ.

ವಿಪರ್ಯಾಸವೆಂದರೆ ಈ ಅಪರಾಧವನ್ನು ತಡೆಗಟ್ಟಲು ನಮ್ಮ ದೇಶದಲ್ಲಿ ಯಾವುದೇ ಕಾನೂನು ಇಲ್ಲ. ಆದ್ದರಿಂದ ಈ ನಿಟ್ಟಿನಲ್ಲಿ ಸರ್ಕಾರಗಳು ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ಈ ಘಟನೆಯಲ್ಲಿ ಅಪರಾಧ ಎಸಗಿರುವವರಿಗೆ ಕಠಿಣ ಶಿಕ್ಷೆ ಆಗುವಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದ್ದಾರೆ.

ಇದನ್ನೂ ಓದಿ ಧಾರವಾಡ | ಮರ್ಯಾದೆಗೇಡು ಹತ್ಯೆ ನಿಷೇಧ ಕಾನೂನು ಜಾರಿಗೆ ಜನಪರ ಸಂಘಟನೆಗಳ ಒತ್ತಾಯ

ಈ ಸಂಧರ್ಭದಲ್ಲಿ ಜಿಲ್ಲಾ ಅಧ್ಯಕ್ಷೆ ಮಧುಲತಾ ಗೌಡರ್, ಜಿಲ್ಲಾ ಕಾರ್ಯದರ್ಶಿ ಗಂಗೂಬಾಯಿ ಕೊಕರೆ, ಜಿಲ್ಲಾ ಉಪಾಧ್ಯಕ್ಷೆ ದೇವಮ್ಮ ದೇವತ್ಕಲ್, ಕಾರ್ಯಕಾರಿ ಸಮಿತಿ ಸದಸ್ಯರಾದ ಅನುಸೂಯ ಶಾನವಾಡ, ವಿಜಯಲಕ್ಷ್ಮಿ ಹಿರೇಮಠ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...

ಯಾದಗಿರಿ | ಜನಜಾಗೃತಿ ಸಮಾವೇಶ: ಮಲ್ಲಣ್ಣ ದಾಸನಕೇರಿ ಅಧ್ಯಕ್ಷರಾಗಿ ನೇಮಕ

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಹಮ್ಮಿಕೊಳ್ಳಲಿರುವ ಮಾದಿಗರ ಜನಜಾಗೃತಿ...

ಯಾದಗಿರಿ | ಪ್ರಜಾಸೇವಾ ಅಭಿಯಾನ: ದೂರುಗಳ ಪರಿಶೀಲನೆಗೆ ಅಧಿಕಾರಿಗಳಿಗೆ ಖಡಕ್ ಸೂಚನೆ

ಶಹಾಪುರ ಹಾಗೂ ಗೋಗಿ ಹೋಬಳಿ ವ್ಯಾಪ್ತಿಯ ಪ್ರಜಾಸೇವಾ ಅಭಿಯಾನದಲ್ಲಿ ಸಲ್ಲಿಕೆಯಾದ ದೂರುಗಳ...