ನ. 1ರಿಂದ ಡಿ.15 ರವರೆಗೆ ರಾಜ್ಯದಾದ್ಯಾಂತ ಸಿಪಿಎಂ ರಾಜಕೀಯ ಪ್ರಚಾರಾಂದೋಲ

Date:

ಬಾಗೇಪಲ್ಲಿ :- ನಿವೇಶನ, ವಸತಿ, ಉದ್ಯೋಗ ಕಡಿತ, ಬಲವಂತದ ಭೂಸ್ವಾಧೀನ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೃಷಿಕೂಲಿ ಕಾರ್ಮಿಕರ ಸಮಸ್ಯೆ ನಿವಾರಣೆ ಮಾಡುವಂತೆ ಆಗ್ರಹಿಸಿ ನ. 1ರಿಂದ ಡಿ.15 ರವರೆಗೆ ರಾಜ್ಯದಾದ್ಯಾಂತ ಸಿಪಿಎಂ ರಾಜಕೀಯ ಸಹಿ ಪ್ರಚಾರಾಂದೋಲ ಹಮ್ಮಿಕೊಂಡಿದೆ ಎಂದು ಸಿಪಿಎಂ ರಾಜ್ಯ ಸಮಿತಿ ಸದಸ್ಯ ಎಂ.ಪಿ.ಮುನಿವೆಂಕಟಪ್ಪ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರೈತರು ಬೆಳದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ ಮಾಡಬೇಕು. ಬಲವಂತ ಭೂಸ್ವಾಧೀನ ವಾಪಸ್ ಪಡೆಯಬೇಕು. ಭೂಸುಧಾರಣಾ ತಿದ್ದುಪಡಿ, ಎಪಿಎಂಸಿ, ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

- Advertisement -

ಅರಣ್ಯ ಸಾಗುವಳಿ ಭೂಮಿಗೆ ಹಕ್ಕುಪತ್ರ ನೀಡಬೇಕು. ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಕನಿಷ್ಠ ₹36 ಸಾವಿರ ಪಿಂಚಣಿ ಜಾರಿಗೊಳಿಸಬೇಕು. ಕಟ್ಟಡ, ಸಾರಿಗೆ ನೌಕರರಿಗೆ ಸೌಲಭ್ಯ ಕಲ್ಪಿಸಬೇಕು. ಶಿಕ್ಷಣದ ಖಾಸಗಿಕರಣ, ವ್ಯಾಪಾರಿಕರಣ ತಡೆಗಟ್ಟಬೇಕು. ಪ್ರತಿ ಜಿಲ್ಲೆಗಳಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ತೆರೆದು ಬಡವರಿಗೆ ಉಚಿತ ಚಿಕಿತ್ಸೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಿಪಿಎಲ್ ಪಡಿತರ ಚೀಟಿ ಕಡಿತಗೊಳಿಸದೇ ಅರ್ಹರಿಗೆ ಬಿಪಿಎಲ್ ಪಡಿತರ ವಿತರಿಸಬೇಕು. ನಿವೇಶನ ರಹಿತರಿಗೆ ನಿವೇಶನ, ಮನೆ ವಿತರಿಸಬೇಕು. ಮಹಿಳೆಯರ, ಹೆಣ್ಣುಮಕ್ಕಳ ಮೇಲಿನ ಹಲ್ಲೆ, ದೌರ್ಜನ್ಯ, ಆತ್ಯಾಚಾರ ತಡೆಯಬೇಕು ಎಂದರು.

ಬಯಲುಸೀಮೆ ಜಿಲ್ಲೆಗೆ ಕೃಷ್ಣಾ ನದಿ,ಎತ್ತಿನೊಳೆ ನೀರನ್ನು ಹರಿಸಬೇಕು. ಧರ್ಮಸ್ಥಳದಲ್ಲಿನ ಅಸಹಜ ಸಾವು, ಭೂ ಕಬಳಿಕೆ, ಮೈಕ್ರೋಫೈನಾನ್ಸ್‌ ಸಮಗ್ರ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

ಸಿಪಿಎಂ ತಾಲ್ಲೂಕು ಸಮಿತಿ ಕಾರ್ಯದರ್ಶಿ ಎಂ.ಎನ್.ರಘುರಾಮರೆಡ್ಡಿ ಮಾತನಾಡಿ, ನ.1 ರಿಂದ ಡಿ. 15ರವರೆಗೂ ಮನೆ ಮನೆಗೆ ಭೇಟಿ ಮಾಡಿ, ಜನರ ಸಮಸ್ಯೆಗಳ ಬಗ್ಗೆ ಹಾಗೂ ರಾಜಕೀಯದ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು. ಡಿಸೆಂಬರ್ 5 ರಿಂದ 15 ರವರೆಗೆ ಪ್ರಜಾನಾಟ್ಯ ಕಲಾ ಮಂಡಳಿಯಿಂದ ಕ್ರಾಂತಿಗೀತೆಗಳ ಮೂಲಕ ಜಾಗೃತಿ ಮೂಡಿಸಲಾಗುವುದು. ಡಿ. 21ರಂದು ಬೆಂಗಳೂರಿನಲ್ಲಿ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಿಂದ 15 ಸಾವಿರ ಹಾಗೂ ಕ್ಷೇತ್ರದಿಂದ 6 ಸಾವಿರ ಜನ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನು ಓದಿದ್ದೀರಾ..? ಸ್ವಂತ ಹಣದಿಂದ ನಗರಸಭೆ ಸದಸ್ಯ ಫೈರೋಜ್ ಖಾನ್ 200 ಮೀಟರ್‌ಗೂ ಹೆಚ್ಚು ಉದ್ದದ ಹೊಸ ಪೈಪ್‌ಲೈನ್ ವ್ಯವಸ್ಥೆ

ಈ ಸಂದರ್ಭದಲ್ಲಿ ಸಿಪಿಎಂ ಜಿಲ್ಲಾ ಸಮಿತಿ ಸದಸ್ಯ ಬಿಳ್ಳೂರುನಾಗರಾಜ್, ಅಶ್ವತ್ಥಪ್ಪ, ಡಿ.ಟಿ.ಮುನಿಸ್ವಾಮಿ, ಚನ್ನರಾಯಪ್ಪ, ಜಿ.ಕೃಷ್ಣಪ್ಪ, ಜಿ.ಮುಸ್ತಾಫ, ಕೆ.ಮುನಿಯಪ್ಪ, ಎಚ್.ಎ.ರಾಮಲಿಂಗಪ್ಪ, ಬಿ.ಎಚ್.ರಫೀಕ್, ಇಮ್ರಾನ್, ನರಸಿಂಹರೆಡ್ಡಿ, ಚಂಚುರಾಯನಪಲ್ಲಿ ಕೃಷ್ಣಪ್ಪ, ಎ.ಸೋಮಶೇಖರ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...