ಬಾಗೆಪಲ್ಲಿ | ಮರೀಚಿಕೆಯಾದ ಮಾರುಕಟ್ಟೆ ಸ್ವಚ್ಛತೆ, ಮೂಲಭೂತ ಸೌಲಭ್ಯಗಳಿಗಾಗಿ ಪರದಾಟ

Date:

ಬಾಗೇಪಲ್ಲಿ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸ್ಥಳೀಯ ಆಡಳಿತ ಮಂಡಳಿಯ ಸ್ವಚ್ಛತಾ ಕಾರ್ಯ ಮರೆತಿರುವುದರಿಂದ ಮಾರುಕಟ್ಟೆ ಪ್ರಾಂಗಣ ಸ್ವಚ್ಛತೆ ಇಲ್ಲದೆ, ವರ್ತಕರು ಮತ್ತು ಗ್ರಾಹಕರು ಕಿರಿಕಿರಿ ಅನುಭವಿಸುವಂತಾಗಿದೆ.

- Advertisement -

ಎಲ್ಲೆಂದರಲ್ಲಿ ಕಸ, ತರಕಾರಿ ತ್ಯಾಜ್ಯದ ಜತೆಗೆ ಮಳೆ ಬಂದರೆ ಇಡೀ ಪ್ರಾಂಗಣವೇ ಕೆಸರುಗದ್ದೆಯಾಗಿ ಪರಿಣಮಿಸುತ್ತದೆ. ಹಾಗಾಗಿ ಮಾರುಕಟ್ಟೆಗೆ ಬರುವ ರೈತರು ವಿವಿಧ ರೋಗಗಳಿಗೆ ತುತ್ತಾಗುವ ಆತಂಕ ಎದುರಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಬಯಲು ಶೌಚಕ್ಕಿಲ್ಲ ಕಡಿವಾಣ, ಕುಡಿಯುವ ನೀರಿನ ಸಮಸ್ಯೆ

ಸುಮಾರು ಎರಡು ವರ್ಷಕ್ಕೂ ಹೆಚ್ಚು ಕಾಲದಿಂದ ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕದಿಂದ ದೂರದೂರುಗಳಿಂದ ಮಾರುಕಟ್ಟೆಗೆ ಬಂದವರಿಗೆ ಕುಡಿಯುವ ನೀರು ಲಭ್ಯವಿಲ್ಲ.‌ ಜೊತೆಗೆ ಮೂತ್ರ ವಿಸರ್ಜನೆಗೂ ಬಯಲು ಶೌಚವನ್ನೆ ಅವಲಂಬಿಸುವ ದುಸ್ಥಿತಿ ಎದುರಾಗಿದೆ. ಹೀಗೆ ರೈತರಿಗೆ, ಕೃಷಿ ಕೂಲಿ ಕಾರ್ಮಿಕರಿಗೆ ಹತ್ತು ಹಲವಾರು ಸಮಸ್ಯೆಗಳು ಪ್ರತಿ ನಿತ್ಯ ಸರ್ವೆ ಸಾಮಾನ್ಯವಾಗಿದೆ.

ಕೂಲಿ ಕಾರ್ಮಿಕರು, ಮಂಡಿ ಮಾಲೀಕರು ಹಾನಿಯಾದ ಹಾಗೂ ಕೊಳೆತ ಟೊಮೆಟೊ, ಹಾಗೂ ತರಕಾರಿಗಳನ್ನು ಕಸದ ಬುಟ್ಟಿಗೆ ಹಾಕದೇ, ರಸ್ತೆಯಲ್ಲಿ ಎಲ್ಲೆಂದರಲ್ಲಿ ಬಿಸಾಡುತ್ತಿದ್ದಾರೆ. ಪ್ರಾಂಗಣದಲ್ಲಿ ಸ್ವಚ್ಛತೆಗೆ ಲಕ್ಷಾಂತರ ಹಣ ನೀಡಲಾಗುತ್ತಿದೆ. ಆದರೆ ಸ್ವಚ್ಛತೆ ಮರೀಚಿಕೆ ಆಗಿದೆ. ಇದರಿಂದ ರಸ್ತೆಯೆಲ್ಲಾ ಕೊಳೆತ ಟೊಮೆಟೊ, ತರಕಾರಿಗಳು ರಾಶಿಗಟ್ಟಲೇ ಇದ್ದು ಕೊಳೆತ ದುರ್ನಾತ ಬೀರುತ್ತಿದೆ. ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ.

ಸಾಂಕ್ರಾಮಿಕ ರೋಗ ಭೀತಿ

ಮಾರುಕಟ್ಟೆಗೆ ಬರುವ ರೈತರು ಮತ್ತು ವರ್ತಕರು ಮೂಲಭೂತ ಸೌಲಭ್ಯಗಳ ಕೊರತೆಯಿಂದ ಹಾಗೂ ತ್ಯಾಜ್ಯದ ರಾಶಿಗಳಿಂದಾಗಿ ಸೊಳ್ಳೆಗಳ ಉಗಸ್ಥಾನಗಳಂತಾಗಿ ಸಾಂಕ್ರಾಮಿಕ ರೋಗಗಳ ಹರಡುವ ಭೀತಿಯನ್ನು ಎದುರಿಸುತ್ತಿದ್ದಾರೆ.ಏಕೆಂದರೆ
ಕಾಲಕಾಲಕ್ಕೆ ತ್ಯಾಜ್ಯ ವಿಲೇವಾರಿ ಮಾಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿದೆ.

ರೈತ ಮುಖಂಡರ ಆಕ್ರೋಶ

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಎಚ್.ಎನ್ ಗೋವಿಂದರೆಡ್ಡಿ ಮಾತನಾಡಿ, ನಿತ್ಯವೂ ಸಾವಿರಾರು ರೈತರು, ವರ್ತಕರು ಮಾರುಕಟ್ಟೆಯಲ್ಲಿ ವ್ಯವಹಾರ ನಡೆಸುತ್ತಿರುತ್ತಾರೆ. ಅವರಿಗೆ ಕುಡಿಯಲೂ ನೀರಿಲ್ಲದಂತಹ ದುಸ್ಥಿತಿ ಎದುರಾಗಿದೆ. ಮಾರುಕಟ್ಟೆಗೆ ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಹರಾಜು ಪ್ರಕ್ರಿಯೆ ಬಗ್ಗೆ ಗಮನ ನೀಡಬೇಕು. ಕೂಡಲೇ ಅಧಿಕಾರಿಗಳು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರು, ಶೌಚಾಲಯಗಳನ್ನು ವ್ಯವಸ್ಥೆ ಮಾಡಬೇಕು. ದೂರದಿಂದ ಬರುವ ರೈತರು ವಿಶ್ರಮಿಸಲು ರೈತರ ವಿಶ್ರಾಂತಿ ಕೊಠಡಿಗಳನ್ನು ಸ್ಥಾಪಿಸಬೇಕು.‌ ದಲ್ಲಾಳಿಗಳಿಗೆ ಕಡಿವಾಣ ಹಾಕಬೇಕಿದೆ. ಹಾಗೆಯೆ ಮಾರುಕಟ್ಟೆಯ ನಿರ್ವಹಣೆ ತೀರಾ ಹದಗೆಟ್ಟಿದ್ದು, ಕೂಡಲೇ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ನಮ್ಮ ರೈತ ಸಂಘಟನೆಯ ವತಿಯಿಂದ ಉಗ್ರ ಹೋರಾಟ ನಡೆಸಬೇಕಾಗುವುದು ಎಂದು ಎಚ್ಚರಿಸಿದರು.

WhatsApp Image 2024 08 09 at 11.58.31 de404b09
+ posts

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.

ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ವಿಜಯ್‌ ಕುಮಾರ್ ಗಜ್ಜರಹಳ್ಳಿ
ವಿಜಯ್‌ ಕುಮಾರ್ ಗಜ್ಜರಹಳ್ಳಿ
ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...