ಬಿಜೆಪಿಯಿಂದ ಆದಿವಾಸಿಗಳ ಕಡೆಗಣನೆ: ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ: ಶೋಭನ್ ಬಾಬು

Date:

ಕೋಲಾರ: ದೇಶದಲ್ಲಿ ಆದಿವಾಸಿಗಳ ಅಭಿವೃದ್ಧಿ ಬಿಜೆಪಿ­ ಮತ್ತು ಅದರ ಪೋಷಕ ಸಂಘಟನೆ ಆರ್.ಎಸ್.ಎಸ್ ನಿಂದ ಸಾಧ್ಯವಿಲ್ಲ ಚುನಾವಣೆಯ ಸಂದರ್ಭದಲ್ಲಿ ಮಾತ್ರವೇ ಆದಿವಾಸಿಗಳು ನೆನಪಿಗೆ ಬರತ್ತಾರೆ ಹೊರತು ಅಧಿಕಾರದಲ್ಲಿ ಇದ್ದಾಗ ಬರಲ್ಲ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಏನು ಮಾಡಿದರು ಎಂಬುದು ದೇಶದ ಜನತೆಗೆ ಗೊತ್ತಿದೆ ಎಂದು ಎಐಸಿಸಿ ಆದಿವಾಸಿ ವಿಭಾಗದ ರಾಷ್ಟ್ರೀಯ ಸಂಯೋಜಕ ಶೋಭನ್ ಬಾಬು ತಿಳಿಸಿದರು.

- Advertisement -

ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಶನಿವಾರ ಕಾಂಗ್ರೆಸ್ ಎಸ್ಟಿ ಘಟಕದ ಸಂಘಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ದೇಶದಲ್ಲಿ ನರೇಂದ್ರಮೋದಿ ಪ್ರಧಾನಿಯಾಗಿನಿಂದ ದಲಿತರ, ಬಡವರ, ಹಿಂದುಳಿದ ವರ್ಗಗಳ ಅಭಿವೃದ್ಧಿ ಕುಂಟಿತಗೊಳ್ಳುತ್ತಿದೆ ಬಿಜೆಪಿ ಅಭಿ­ವೃದ್ಧಿಯ ನಾಟಕವಾಡುತ್ತಿದೆ ಕರ್ನಾಟಕ ರಾಜ್ಯ­ದಲ್ಲಿ ಬಿಜೆಪಿ ಅಧಿಕಾರ­ದಲ್ಲಿದ್ದಾಗ ಮುಖ್ಯಮಂತ್ರಿ ಸೇರಿದಂತೆ ಮಂತ್ರಿಗಳು ಭ್ರಷ್ಟಾಚಾರದಲ್ಲಿ ತೊಡಗಿ ಜೈಲು ಕಂಡಿದ್ದಾರೆ. ಇಂತಹ ಪಕ್ಷದಿಂದ ದೇಶದ ಮತ್ತು ಆದಿವಾಸಿಗಳ ಅಭಿವೃದ್ಧಿ ಹೇಗೆ ಸಾಧ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಎಐಸಿಸಿ ಮಾರ್ಗದರ್ಶನದಲ್ಲಿ ಆದಿವಾಸಿಗಳ ಮಧ್ಯೆ ನಾಯಕತ್ವವನ್ನು ಬೆಳೆಸಬೇಕು ಅದಕ್ಕಾಗಿ ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದ ತನಕ ನಾಯಕರನ್ನು ಗುರುತಿಸಬೇಕು ವಿಶೇಷವಾಗಿ ಮಹಿಳೆಯರು ಯುವಕರಿಗೆ ಹೆಚ್ಚಿನ ಜವಾಬ್ದಾರಿ ಕೊಡಬೇಕಾಗಿದೆ ನಾಯಕರು ಮತ್ತು ಕಾರ್ಯಕರ್ತರು ಮಧ್ಯೆ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಏನು ಸಮಸ್ಯೆ ಇದ್ದರೂ ಗಮನಕ್ಕೆ ತನ್ನಿ ಎಂದ ಅವರು ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ಈ ಭಾಗದ ಮತದಾರರು ತಕ್ಕ ಪಾಠ ಕಲಿಸಬೇಕು ದೇಶಕ್ಕೆ ರಾಹುಲ್‌ ಗಾಂಧಿಯಂತಹ ಯುವ ಪ್ರಧಾನಿಯ ಅವಶ್ಯಕತೆ ಇದೆ. ಮತದಾರರು ಆಸೆ, ಆಮಿಷಗಳಿಗೆ ಬಲಿಯಾಗದೇ ಉತ್ತಮ ಆಡಳಿತ­ಕ್ಕಾಗಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿ­ಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎಸ್ಟಿ ಘಟಕದ ಜಿಲ್ಲಾ ಅಧ್ಯಕ್ಷ ಎನ್.ಅಂಬರೀಷ್ ಮಾತನಾಡಿ ದೇಶದಲ್ಲಿ ಬಿಜೆಪಿ ಪಕ್ಷವು ಆರ್.ಎಸ್.ಎಸ್ ಸಂಘದ ಮಾರ್ಗದರ್ಶನದಲ್ಲಿ ದೇಶವನ್ನು ಹಾಳು ಮಾಡಲು ಹೊರಟಿದೆ ರಾಮಾಯಣವನ್ನು ವಾಲ್ಮೀಕಿ ಬರೆದಿಲ್ಲ ಎಂದು ಹಸಿ ಸುಳ್ಳು ಜನರ ಮಧ್ಯೆ ಬಿತ್ತಲು ಹೊರಟಿದೆ ಇದನ್ನು ವಿರೋಧ ಮಾಡಿಲ್ಲ ಎಂದರೆ ಮುಂದೆ ಅಂಬೇಡ್ಕರ್ ಸಂವಿಧಾನ ಬರೆದಿಲ್ಲ ಅನ್ನುವ ಕಾಲ ದೂರವಿಲ್ಲ ನಾವು ಎಲ್ಲರೂ ಹಿಂದೂಗಳಾಗಿದ್ದರೂ ಎಸ್ಟಿ ಸಮಾಜದ ೭% ಮೀಸಲಾತಿ ಜಾರಿ ಮಾಡಲಿಲ್ಲ ಆದರೆ ೨% ಜನಸಂಖ್ಯೆಗೆ ೧೦% ಮೀಸಲಾತಿ ಕೊಟ್ಟು ಬಿಜೆಪಿಯ ದ್ವಿಮುಖ ನೀತಿಯಾಗಿದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಡವರಿಗೆ ಗ್ಯಾರಂಟಿ ಕೊಡಲಾಗಿದೆ ಎಲ್ಲರಿಗೂ ಅವಕಾಶ ಕೊಟ್ಟಿದೆ ಬೇರೆ ರಾಜ್ಯದಲ್ಲಿ ಬಿಜೆಪಿ ಭರವಸೆ ಕೊಟ್ಟು ಜಾರಿ ಮಾಡಿಲ್ಲ ಎಂದರು.

ಇದನ್ನು ಓದಿದ್ದೀರಾ…? ಅರಿಕುಂಟೆ ಗ್ರಾಪಂ ಅಧಿಕಾರಿಗಳಿಗೆ 25 ಸಾವಿರ ದಂಡ

ಈ ಸಂದರ್ಭದಲ್ಲಿ ಕಾಂಗ್ರೆಸ್ ಎಸ್ಟಿ ಘಟಕದ ರಾಜ್ಯ ಅಧ್ಯಕ್ಷ ವಿಜಯ ನಾಯಕ್, ಪ್ರಧಾನ ಕಾರ್ಯದರ್ಶಿ ದಿನೇಶ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೈಲಾಂಡಹಳ್ಳಿ ಮುರಳಿ, ಸೈಯದ್ ಅಫ್ಸರ್, ಮುಖಂಡರಾದ ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಅಡ್ಡಗಲ್ ನರೇಶ್, ಕರಡುಗುರ್ಕಿ ಗೋವಿಂದ, ಬೈರಂಡಹಳ್ಳಿ ನಾಗೇಶ್, ವೆಲಗಲಬುರೆ ವಿಜಿ, ಬೈರಕೂರು ರಾಮಾಂಜಿ, ಗಡ್ಡರೂ ಪ್ತಕಾಶ್, ವಕ್ಕಲೇರಿ ರಾಜು, ವಾಸು, ಹರಟಿ ಸಂಪತ್, ಪಿಳ್ಳಪ್ಪ, ಬೆಳ್ಳೂರು ಮುರಳಿ, ಶಾಂತ ಮುಂತಾದವರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...