ಔರಾದ ತಾಲೂಕಿನ ಲಾಧಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು , ಕೂಡಲೇ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
ಕಳೆದ ಎರಡು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ನೀರಿನ ಸಮಸ್ಯೆ ಬಗೆಹರಿಸಲು ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ, ಅಧ್ಯಕ್ಷರಿಗೆ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು
ಸ್ಥಳೀಯ ಶಾಸಕರಿಗೆ, ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದೇವೆ. ಆದರೆ ಯಾರೊಬ್ಬರೂ ಕುಡಿಯುವ ನೀರಿನ ದಾಹ ನೀಗಿಸಲು ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ ಮಹಿಳೆಯರು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತ ಪಡಿಸಿದರು.
ಹಾಹಾಕಾರ ಪಡುವಂತಾಗಿದೆ. ಆದರೆ ಪಿಡಿಓ ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತ್ರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಇದು ಹೀಗೆ ಮುಂದುವರೆದರೇ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಗ್ರಾಮಸ್ಥರು ಸರಕಾರಕ್ಕೆ ಎಚ್ಚರಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿರುವ ಕಾರಣ ಗ್ರಾಮಸ್ಥರು ಕಳೆದೆರಡು ತಿಂಗಳಿಂದ ಅಕ್ಕಪಕ್ಕದಲ್ಲಿರುವ ರೈತರ ಹೊಲಗಳಿಂದ ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಪ್ರತಿಭಟನಾನಿರತ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.
ಗ್ರಾಮದಲ್ಲಿ ಇರುವ ಒಂದೆರಡು ಬೋರ್ ವೆಲ್ ಗಳು ಕೆಟ್ಟು ಹೋಗಿದ್ದು, ಅಧಿಕಾರಿಗಳು ದುರಸ್ತಿ ಮಾಡುವ ಗೋಜಿಗೆ ಹೋಗಿಲ್ಲ. ಮಹಿಳೆಯರು, ಮಕ್ಕಳು ಸುಡು ಬಿಸಿಲಿನಲ್ಲಿ ನೀರಿಗಾಗಿ ಅಲೆದಾಡುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ಎಚ್ಚೆತ್ತುಕೊಂಡು ನೀರಿನ ವ್ಯವಸ್ಥೆ ಕಲ್ಪಿಸಬೇಕು, ಇಲ್ಲದಿದ್ದರೆ ಉಗ್ಜರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು..
ಗ್ರಾಮದಲ್ಲಿ ಒಂದೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಮಾಡಲಾಗಿದೆ. ಈ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ ಪರಿಣಾಮ ಹನಿ ನೀರು ಕೂಡ ಬರುತ್ತಿಲ್ಲ ಎಂದು ಗ್ರಾಮಸ್ಥರು ದೂರಿದರು.