ಬೀದರ್ | ಗೃಹಜ್ಯೋತಿ ಯೋಜನೆ ಬಡಜನರ ಆರ್ಥಿಕ ಹೊರೆತಗ್ಗಿಸಲಿದೆ: ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

Date:

Advertisements
  • ಬೀದರ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ
  • ರಾಜ್ಯ ಸರ್ಕಾರದ ಐದು ಯೋಜನೆಗಳು ಜನರ ಆರ್ಥಿಕತೆಗೆ ಸಹಕಾರಿ

ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಜ್ಯೋತಿ ಯೋಜನೆಯಿಂದ ಬಡಜನರ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಹೊರೆ ತಗ್ಗಿಸುವುದರ ಜೊತೆಗೆ ಅವರ ಮನೆ ಬೆಳಗಲಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ಬೀದರ ನಗರದ ಪ್ರತಾಪ ನಗರದ ಹತ್ತಿರದ ಘಾಳೆ ಲಕ್ಸುರಿ ಕನ್ವೆನ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಗೃಹ ಜ್ಯೋತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ಆಗಸ್ಟ್ 5 ರಂದು ಕಲಬುರ್ಗಿಯಲ್ಲಿ ಮುಖ್ಯಮಂತ್ರಿಗಳು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ್ದಾರೆ. ಅದರಂತೆ ಬೀದರದಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ್ದೇನೆ. ಜಿಲ್ಲೆಯಲ್ಲಿ 3,67,871 ಜನ ವಿದ್ಯುತ್ ಬಳಕೆದಾರರಿದ್ದು, ಇದರಲ್ಲಿ 2,99,628 ಜನ ಗೃಹಜ್ಯೋತಿ ಯೋಜನೆಯಡಿ ನೋಂದಣಿ ಮಾಡಿಸಿಕೊಂಡಿರುವುದರಿಂದ ಶೇ.81% ಪ್ರತಿಶತ ಜನರು ಈ ಯೋಜನೆ ಲಾಭ ಪಡೆಯಲಿದ್ದಾರೆ ಎಂದು ಹೇಳಿದರು.

Advertisements

ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿ ಮಾಡಲಾಗುತ್ತಿದೆ. ಅದರಂತೆ ಈಗಾಗಲೇ ಜಾರಿ ಮಾಡಿರುವ ಶಕ್ತಿ ಯೋಜನೆಯಡಿ ದಿನನಿತ್ಯ 50 ಲಕ್ಷ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿ ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಹಾಗೂ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ.ಅಕ್ಕಿ ನೀಡಲು ನಿರ್ಧರಿಸಲಾಗಿತ್ತು ಆದರೆ ಅಕ್ಕಿ ಹೊಂದಿಸಲು ಆಗದೇ ಇರುವುದರಿಂದ ತಲಾ 170 ರೂ. ರಂತೆ ಪಡಿತರ ಕುಟುಂಬರ ಮುಖ್ಯಸ್ಥರ ಖಾತೆಗಳಿಗೆ ಹಣ ಜಮೆ ಮಾಡಲಾಗಿದೆ ಎಂದು ಹೇಳಿದರು.

ಆಗಸ್ಟ್ 27ಕ್ಕೆ ಗೃಹಲಕ್ಷ್ಮಿ ಯೋಜನೆಗೆ ಚಾಲನೆ:

ಇನ್ನುಳಿದ ಯೋಜನೆಗಳಾದ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ ಈಗಾಗಲೇ ನೋಂದಣಿ ಪ್ರಾರಂಭವಾಗಿದ್ದು, 1 ಕೋಟಿ ಜನರು ನೋಂದಣಿ ಮಾಡಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇದರ ಸಂಖ್ಯೆ 1.50 ಕೋಟಿಗೆ ದಾಟುವ ಸಂಭವ ಇದೆ. ಈ ಯೋಜನೆಗೆ ಆಗಸ್ಟ್ 27 ರಂದು ಚಾಲನೆ ನೀಡಲಾಗುವುದು. ಅದೇ ರೀತಿ ನಿರುದ್ಯೋಗಿ ಯುವಕ ಯುವತಿಯರಿಗೆ ನಿರುದ್ಯೋಗ ಪದವಿಧರರಿಗೆ 3 ಸಾವಿರ ರೂ. ಹಾಗೂ ಡಿಪ್ಲೋಮಾ ಪದವಿಧರರಿಗೆ 1500 ರೂ. ನೀಡುವ ಯುವನಿಧಿ ಯೋಜನೆ ಜನವರಿಯಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದರು.

ಕೆಕೆಆರ್‌ಡಿಬಿ.ಗೆ 5 ಸಾವಿರ ಕೋಟಿ ಅನುದಾನ:

ಅರಣ್ಯ ಇಲಾಖೆಯಿಂದ ರಾಜ್ಯದ್ಯಾಂತ 5 ಕೋಟಿ ಸಸಿಗಳನ್ನು ನೆಡುವ ಗುರಿಯಿತ್ತು, ಈಗಾಗಲೇ 41 ದಿನಗಳಲ್ಲಿ ರಾಜ್ಯದಲ್ಲಿ 3 ಕೋಟಿ 10 ಲಕ್ಷ ಸಸಿಗಳನ್ನು ನೆಡಲಾಗಿದೆ. ಬೀದರ ಜಿಲ್ಲೆಯಲ್ಲಿ 10.5 ಲಕ್ಷ ಸಸಿಗಳನ್ನು ನೆಡಲಾಗಿದೆ, ಈಗಾಗಲೇ ಬೀದರ ಜಿಲ್ಲೆಯಲ್ಲಿ ಕೃಷ್ಣಾಮೃಗ ಮೀಸಲು ಪ್ರದೇಶ ನಿರ್ಮಿಸಲು ನಿರ್ಧರಿಸಿದ್ದು, ಅರಣ್ಯ ಇಲಾಖೆಯಿಂದ 2 ಕೋಟಿ ಅನುದಾನ ನೀಡಲಾಗಿದೆ. ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೇಟ್‌ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 3 ಸಾವಿರ ಕೋಟಿ ಅನುದಾನ ನೀಡಿದ್ದು, ಕಳೆದ ಬಾರಿ 2 ಸಾವಿರ ಕೋಟಿ ಅನುದಾನ ಸೇರಿ ಒಟ್ಟು 5 ಸಾವಿರ ಕೋಟಿ ಅನುದಾನ ಕೆ.ಕೆ.ಆರ್.ಡಿ.ಬಿಯಡಿಲ್ಲಿದೆ. ಮುಂದಿನ ದಿನಗಳಲ್ಲಿ ಈ ಭಾಗದ ಅಭಿವೃದ್ಧಿಗೆ ಅದನ್ನು ಹಂತ ಹಂತವಾಗಿ ಬಳಸಲಾಗುವುದು ಎಂದರು.

ಜಿಲ್ಲೆಯಲ್ಲಿ ತ್ಯಾಜವನ್ನು ಹೊರಸೂಸಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಕೈಗಾರಿಕೆಗಳ ಬಗ್ಗೆ ತನಿಖೆ ನಡೆಸಿ ಅವರ ವಿರುದ್ಧ ಕ್ರಮ ವಹಿಸುವಂತೆ ಅಧಿಕಾರಿಗಳಿ ಸೂಚಿಸಿದ್ದೇನೆ. ಈಗಾಗಲೇ 8 ಕೈಗಾರಿಕೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪರಿಸರದ ನಿಯಮಗಳನ್ನು ಮೀರಿ ಕೈಗಾರಿಕೆಗಳನ್ನು ನಡೆಸುತ್ತಿದ್ದರೆ ಅವರ ವಿರುದ್ಧವು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

WhatsApp Image 2023 08 12 at 8.58.45 AM 1

ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ ಖಾನ್ ಮಾತನಾಡಿ, ತಿಂಗಳ ವಿದ್ಯುತ ಬಿಲ್ ಕಟ್ಟಲಾಗದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕೆಲವು ಜನರಿದ್ದಾರೆ. ಅವರಿಗೆ ಗೃಹಜ್ಯೋತಿ ಯೋಜನೆಯಿಂದ ಲಾಭವಾಗಲಿದೆ ಅದೇ ರೀತಿ ಗೃಹಲಕ್ಷ್ಮಿ ಯೋಜನೆಯಿಂದ ಮನೆಯ ಯಜಮಾನಿಯರು 2 ಸಾವಿರ ಪಡೆಯಲಿದ್ದಾರೆ. ಇದು ಅವರ ಆರ್ಥಿಕ ಪ್ರಗತಿಗೆ ಸಹಕಾರಿಯಾಗಲಿದೆ. ರಾಜ್ಯ ಸರ್ಕಾರದ ಐದು ಮಹತ್ವಕಾಂಕ್ಷಿ ಯೋಜನೆಗಳ ಲಾಭವನ್ನು ರಾಜ್ಯದ ಶೇ.80 ರಿಂದ 90 ಪ್ರತಿಶತ ಜನ ಲಾಭ ಪಡೆಯಲಿದ್ದಾರೆ ಇದು ದೇಶಕ್ಕೆ ಮಾದರಿಯಾಗಲಿದೆ. ಮಹಿಳೆಯರಿಗೆ, ಯುವಕರಿಗೆ, ಸೇರಿದಂತೆ ರಾಜ್ಯದ ಎಲ್ಲಾ ಜನರು ಈ ಐದು ಯೋಜನೆಗಳಲ್ಲಿ ಒಂದಲ್ಲಾ ಒಂದು ಯೋಜನೆಯ ಲಾಭ ಪಡೆಯಲಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಗೃಹಜ್ಯೋತಿ ಯೋಜನೆಯಡಿ ಲಾಭ ಪಡೆದ ಫಲಾನುಭವಿಗಳಿಗೆ ಜೀರೊ ವಿದ್ಯುತ್ ಬಿಲ್ ವಿತರಿಸಿದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ ಸದಸ್ಯರುಗಳಾದ ಅರವಿಂದಕುಮಾರ ಅರಳಿ, ಭೀಮವಾರ ಬಿ. ಪಾಟೀಲ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್ ಜೆಸ್ಕಾಂ ಕಲರ್ಬುರ್ಗಿ ವಿಭಾಗದ ವ್ಯವಸ್ಥಾಪಕ ನಿರ್ದೇಶಕ ಪಾಂಡ್ವೆ ರಾಹುಲ್ ತುಕಾರಾಮ್, ಜೆಸ್ಕಾಂ ಕಲಬುರ್ಗಿ ವಿಭಾಗದ ತಾಂತ್ರಿಕ ನಿರ್ದೇಶಕ ಮತ್ತು ಮುಖ್ಯ ಅಭಿಯಂತರ ಆರ್.ಡಿ. ಚಂದ್ರಶೇಖರ, ಬೀದರ ಜೇಸ್ಕಾಂ ಕಾರ್ಯ ಪಾಲಕ ಅಭಿಯಂತರರ ರಮೇಶ ಪಾಟೀಲ್, ಜೇಸ್ಕಾಂನ ವಿವಿಧ ಅಧಿಕಾರಿಗಳು, ಸಿಬ್ಬಂದಿಗಳು, ಗೃಹಜ್ಯೋತಿ ಯೋಜನೆಯ ಫಲಾನುಭವಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X