ಬೀದರ್‌ |ಶಿವಾಜಿ ವೃತ್ತದ ಬಳಿಯ ಮದ್ಯದ ಅಂಗಡಿ ಎರಡು ತಿಂಗಳೊಳಗೆ ತೆರವು

Date:

Advertisements
  • ಅಕ್ಟೋಬರ್ ತಿಂಗೊಳಗೆ ಮದ್ಯದ ಅಂಗಡಿ ತೆರವುಗೊಳಿಸುವ ವಿಶ್ವಾಸ
  • ಭಾಲ್ಕಿಯ ಮರಾಠಾ ಸಮಾಜದ ಪ್ರಮುಖರ ಸಭೆಯಲ್ಲಿ ಭರವಸೆ

ಭಾಲ್ಕಿ ಪಟ್ಟಣದ ಶಿವಾಜಿ ವೃತ್ತದ ಬಳಿಯ ಮದ್ಯದ ಅಂಗಡಿ ಎರಡು ತಿಂಗಳೊಳಗೆ ತೆರವುಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಆದಿತ್ಯ ಹೋಟೆಲ್‌ನಲ್ಲಿ ಶನಿವಾರ ಆಯೋಜಿಸಿದ್ದ ಮರಾಠಾ ಸಮಾಜದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, “ಕಳೆದ ಮೂರು ತಿಂಗಳ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಶಿವಾಜಿ ವೃತ್ತದ ಬಳಿಯ ಮದ್ಯದ ಅಂಗಡಿ ತೆರವುಗೊಳಿಸುವ ಭರವಸೆ ನೀಡಿದ್ದೇನೆ. ಅದರಂತೆ ಕ್ಷೇತ್ರದ ಜನರ ಆಶೀರ್ವಾದದಿಂದ ಶಾಸಕನಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೂಡ ಆಗಿದ್ದೇನೆ. ಡಿಸಿ, ಎಸ್ಪಿ ಮತ್ತು ಅಬಕಾರಿ ಅಧಿಕಾರಿಗಳ ತಂಡದೊಂದಿಗೆ ಇಲ್ಲಿಯ ಮದ್ಯದ ಅಂಗಡಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದೇನೆ” ಎಂದರು.

“ಕಾನೂನು ಪ್ರಕಾರ ಅಧಿಕೃತ ಆದೇಶ ಹೊರಡಿಸಿದ್ದು ಮುಂದಿನ ಅಕ್ಟೋಬರ್ ತಿಂಗೊಳಗೆ ಮದ್ಯದ ಅಂಗಡಿ ತೆರವು ಆಗಲಿದೆ. ಹಿಂದಿನ ನಾಲ್ಕು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದರೂ ಕೂಡ ಬಿಜೆಪಿ ಮುಖಂಡರು ಮದ್ಯದ ಅಂಗಡಿ ತೆರವುಗೊಳಿಸುವ ಪ್ರಯತ್ನ ಮಾಡಲಿಲ್ಲ. ಕೇಂದ್ರದ ಸಚಿವ ಖೂಬಾ ಅವರು ಶಿವ ಜಯಂತಿ ಸಂದರ್ಭದಲ್ಲಿ ಮದ್ಯದ ಅಂಗಡಿ ತೆರವು ಮಾಡಿಸುವುದಾಗಿ ಹುಸಿ ಭರವಸೆ ನೀಡಿದರು. ಮದ್ಯದ ಅಂಗಡಿ ವಿಷಯವಾಗಿ ಬಿಜೆಪಿ ರಾಜಕೀಯ ಮಾಡಿತು ಹೊರತು ಎತ್ತಂಗಡಿ ಮಾಡುವ ಕೆಲಸ ಮಾಡಲಿಲ್ಲ” ಎಂದು ದೂರಿದರು.

Advertisements

“ನಾನು ವಿರೋಧ ಪಕ್ಷದಲ್ಲಿದ್ದರೂ ಕೂಡ ಮದ್ಯದ ಅಂಗಡಿ ತೆರವಿಗಾಗಿ ವಿಧಾನ ಸಭೆ ಕಲಾಪದಲ್ಲಿ ಮಾತನಾಡಿದ್ದೇನೆ. ಇದೀಗ ನಾನು ಪುನಃ ನಾಲ್ಕನೇ ಬಾರಿಗೆ ಶಾಸಕ, ಸಚಿವನಾದ ಮೇಲೆ ಮದ್ಯದ ಅಂಗಡಿ ತೆರವುಗೊಳಿಸುವ ಕೆಲಸ ಮಾಡಿ ಜನರಿಗೆ ನೀಡಿರುವ ಭರವಸೆ ಈಡೇರಿಸುತ್ತಿದ್ದೇನೆ” ಎಂದರು.

“ಬೀದರ್ ಡಿಸಿಸಿ ಬ್ಯಾಂಕ್‌ನ ಆಡಳಿತ ಮಂಡಳಿಗೆ ಮುಂದಿನ ಒಂದೆರಡು ತಿಂಗಳಲ್ಲಿ ಚುನಾವಣೆ ನಡೆಯಲಿದ್ದು ಹೊಸದಾಗಿ ಆಡಳಿತ ತರಲು ಕಾರ್ಯಕರ್ತರು ಸನ್ನದ್ಧರಾಗಬೇಕು. ಸಹಕಾರ ಕ್ಷೇತ್ರದಲ್ಲಿ ನಮ್ಮ ಭಾಗದ ರೈತರ ಕೆಲಸಗಳು ಸುಗಮವಾಗಿ ಆಗಬೇಕಿದ್ದರೇ ಹೊಸ ಆಡಳಿತ ತರುವುದು ಅವಶ್ಯಕತೆ ಇದೆ. ಹಾಗಾಗಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ. ಧ್ಯಾನೇಶ್ವರ ನೀರಗುಡೆ ಅಧಿಕಾರ ಸ್ವೀಕಾರ

ಈ ಸಂದರ್ಭದಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ, ಪುರಸಭೆ ಸದಸ್ಯ ಬಸವರಾಜ ವಂಕೆ, ಪ್ರಮುಖರಾದ ಪ್ರವೀಣ ಹಣಮಶೆಟ್ಟಿ, ಅಶೋಕರಾವ ಸೋನಜಿ, ಡಾ.ರಾಜೇಂದ್ರ ಜಾಧವ, ಸತೀಶ ಪಾಟೀಲ್, ಅನಿಲ ಪಾಟೀಲ್, ವೈಜಿನಾಥ ತಗಾರೆ ಸೇರಿದಂತೆ ಹಲವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X