ಬೋವಿ ಜನಾಂಗದ ಕಲಿಕಾ ಕೇಂದ್ರಕ್ಕೆ 30 ಗುಂಟೆ ಜಮೀನು ಮಂಜೂರು

Date:

ಚಿಂತಾಮಣಿ:ನಗರದ ಹೊರವಲಯದ ನಲ್ಲಗುಟ್ಟಹಳ್ಳಿ ಗ್ರಾಮದ ಸರ್ವೆ ನಂ:42ರ.ಭಾಗ 27ರಲ್ಲಿ 30 ಗುಂಟೆ ಜಮೀನನ್ನ ನಮ್ಮ ಜನಾಂಗದ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿಗಾಗಿ ಕಲಿಕಾ ಕೇಂದ್ರವನ್ನು ಸ್ಥಾಪಿಸಲು ಉನ್ನತ ಶಿಕ್ಷಣ ಸಚಿವರಾದ ಡಾ!ಎಂ ಸಿ ಸುಧಾಕರ್ ರವರು ಸರ್ಕಾರದಿಂದ ಮಂಜೂರು ಮಾಡಿಸಿದ್ದು ಅವರಿಗೆ ನಮ್ಮ ಜನಾಂಗದಿಂದ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇವೆ ಎಂದು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಎನ್ ಶ್ರೀನಿವಾಸ್ ಹೇಳಿದರು.

- Advertisement -

ಇಂದು ಸಚಿವರ ನಿವಾಸದಲ್ಲಿ ಜಮೀನು ಮಂಜೂರು ಆಗಿರುವ ಅಧಿಕೃತ ಜ್ಞಾಪನ ಪತ್ರವನ್ನು ಪಡೆದ ನಂತರ ಮಾತನಾಡಿದವರು ಮುಂದೆಯೂ ಸಹ ನಮ್ಮ ಸಮುದಾಯದ ಅಭಿವೃದ್ಧಿಗೆ ಸಚಿವರ ಸಹಕಾರ ಅಗತ್ಯವಿದೆ ಎಂದು ಹೇಳುತ್ತಾ ನಾವುಗಳು ಸಚಿವರಿಗೆ ಚಿರಋಣಿಯಾಗಿರುತ್ತೇವೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಮಕ್ಕಳಿಗೆ ಪೋಷಕರ ಆಶೀರ್ವಾದ ಮುಖ್ಯ: ಡಿಐಜಿಪಿ ಡಿ.ದೇವರಾಜ್

ಬೋವಿ ಮಹಾಸಭಾ ಜಿಲ್ಲಾಧ್ಯಕ್ಷರಾದ ಎಂ ಗುರ್ರಪ್ಪ, ಭೋವಿ ಸಂಘದ ಸರ್ಕಾರಿ ನೌಕರ ಸದಸ್ಯ ಶಿವನಂದ, ದಶರಲ್,ಮುನಿ ವೆಂಕಟಪ್ಪ,ವಿ.ಸಿ ನಾಗರಾಜ್,ಧಾಸರಿ ವೆಂಕಟೇಶ್,ಮಧು,ಪ್ರಕಾಶ್,ಗ್ರಾಮ ಪಂಚಾಯತಿ ಸದಸ್ಯ ರಮೇಶ್,ರಾಂಪುರ ಗ್ರಾಮ್ ಪಂಚಾಯತ್ ಸದಸ್ಯ ಶ್ರೀನಿವಾಸ್,ಆರ್ ಶ್ರೀನಿವಾಸ್,ಅಂಜನ್ ಪ್ರಸಾದ್, ಸೇರಿದಂತೆ ಸಮುದಾಯ ಎಲ್ಲಾ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...