ಮುಂಡಗೋಡ | ಕನ್ನಡದಲ್ಲಿ ಶೇ.100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸನ್ಮಾನ

Date:

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉತ್ತರ ಕನ್ನಡ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ.100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭವನ್ನು ಮುಂಡಗೋಡದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಯಿತು.

- Advertisement -

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಜಿ.ಟಿ. ಕಡೇಮನಿ ಅವರು, ಕನ್ನಡವು ಪ್ರತಿಯೊಬ್ಬರಿಗೂ ಅನ್ನ ನೀಡುವ ಭಾಷೆಯಾಗಿದ್ದು, ಎಲ್ಲರೂ ಕನ್ನಡವನ್ನು ಗೌರವಿಸಿ ಪ್ರೀತಿಸಬೇಕು ಎಂದು ಹೇಳಿದರು. ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಿದ್ದು, ವಿದ್ಯಾರ್ಥಿಗಳ ಸಾಧನೆಗೆ ಕಾರಣರಾದ ಶಿಕ್ಷಕರು ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಕೆ. ಕರವಿನಕೊಪ್ಪ ಅವರು, ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಶ್ಲಾಘನೀಯವಾಗಿದೆ. ಕನ್ನಡ ನಾಡಿಗೆ ಎಂಟು ಜ್ಞಾನಪೀಠ ಪ್ರಶಸ್ತಿ ವಿಜೇತರು ದೊರೆತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಅವರ ಕೊಡುಗೆಯನ್ನು ಸದಾ ಸ್ಮರಿಸಬೇಕು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮುಂಡಗೋಡ | ಜೇನುನೊಣ ದಾಳಿಗಿಂತ ಭಯಾನಕ ಅವ್ಯವಸ್ಥೆ: ಮೊರಾರ್ಜಿ ವಸತಿ ಶಾಲೆ ವಿರುದ್ಧ ಗಂಭೀರ ಆರೋಪ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ಆಶ್ರಯ ಅವರು ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಮೂಲಕ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡದ ಬೆಳವಣಿಗೆಗೆ ಶ್ರಮಿಸುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2022ರಿಂದ ಇಲ್ಲಿಯವರೆಗೆ ಕನ್ನಡ ವಿಷಯದಲ್ಲಿ ಹೆಚ್ಚು ಅಂಕ ಪಡೆದ 5,000ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಸನ್ಮಾನಿಸಿರುವುದು ಪರಿಷತ್ತಿನ ಹೆಮ್ಮೆಯ ಸಾಧನೆಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕನ್ನಡ ವಿಷಯದಲ್ಲಿ ಶೇ.100ಕ್ಕೆ 100 ಅಂಕ ಪಡೆದ 20 ವಿದ್ಯಾರ್ಥಿಗಳನ್ನು ಕನ್ನಡ ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನಿಸಲಾಯಿತು. ಅಲ್ಲದೆ ಹಿರಿಯ ಸಾಹಿತಿ ಅರವಿಂದ ಗುಡವಿ ಮಳಗಿ ಅವರನ್ನು ಜಿಲ್ಲಾ ಘಟಕದ ವತಿಯಿಂದ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್.ಡಿ. ಮುಡೆಣ್ಣವರ, ಡಾ. ಪಿ.ಪಿ. ಚಬ್ಬಿ. ಅರವಿಂದ ಗುಡಿಗೆ ಬಿಆರ್‌ಸಿ ಮುಂಡಗೋಡದ ಸಮನ್ವಯಾಧಿಕಾರಿ ಡಾ. ರಮೇಶ್ ಅಂಬಿಗರ, ಸುಭಾಷ್ ಡೋರಿ, ಪಿ.ಸಿ. ಕೇಶಪ್ಪನಟ್ಟಿ, ಅಶೋಕ್ ಶಂಕರಿಕೊಪ್ಪ, ನಾಗರಾಜ ಅರ್ಕಸಾಲಿ, ಎಂ.ಎಚ್. ಕಲಾಲ, ಎಸ್.ಬಿ. ಹೂಗಾರ್, ಚಿದಾನಂದ ಪಾಟೀಲ್, ದಿನೇಶ್ ವರ್ಣೇಕರ್, ಶಿವಾನಂದ ವಾಲಿಶೆಟ್ಟರ್, ಗಿರೀಶ್ ಕುಲಕರ್ಣಿ, ಎಸ್.ಕೆ. ಬೋರ್ಕರ್, ಆರ್.ಎಸ್. ಕಲಾಲ, ಸುಭಾಷ್ ವಡ್ಡರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...

ಉಡುಪಿ | ಅಗ್ರಿಗೋಲ್ಡ್ ಹಗರಣ: ದಾಖಲೆ ಪರಿಶೀಲನಾ ಕೇಂದ್ರದಲ್ಲಿ ಸಂತ್ರಸ್ತರ ಪರದಾಟ

ಬಹುಕೋಟಿ ರೂ.ಗಳ ಅಗ್ರಿಗೋಲ್ಡ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ದಾಖಲೆ ಪರಿಶೀಲನೆ ಕಾರ್ಯ...