ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಿರಿ: ರೈತ ಸಂಘಟನೆ ಆಗ್ರಹ

Date:

ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿಯೂ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆಯಬೇಕು. ನೋಂದಣಿ ಕಾರ್ಯವನ್ನು ಮತ್ತೆ ಆರಂಭಿಸಬೇಕು. ಪ್ರತಿ ಹೋಬಳಿಯಲ್ಲಿಯೂ ನೋಂದಣಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿ ಸೋಮವಾರ ನಗರದ ಜಿಲ್ಲಾಡಳಿತ ಭವನದ ಎದುರು ಅಖಿಲ ಕರ್ನಾಟಕ ರೈತ ಸಂಘಟನೆ (ಎಕೆಆರ್‌ಎಸ್) ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾ ಗ್ರಂಥಾಲಯದ ಮುಂಭಾಗ ಸಮಾವೇಶಗೊಂಡ ರೈತರು ಮತ್ತು ಸಂಘಟನೆ ಸದಸ್ಯರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆ ಕಾಲ್ನಡಿಗೆ ಜಾಥಾ ನಡೆಸಿದರು.ಜಿಲ್ಲಾಧಿಕಾರಿ ಕಚೇರಿಯ ಮುಖ್ಯದ್ವಾರ ಭವನದ ಮೆಟ್ಟಿಲುಗಳ ಮೇಲೆ ಕುಳಿತು ರೈತರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆ ಮೊಳಗಿಸಿದರು.

- Advertisement -

ಎಕೆಆರ್‌ಎಸ್ ಜಿಲ್ಲಾ ಸಂಚಾಲಕ ಮಂಜುನಾಥ್ ರೆಡ್ಡಿ,ರೈತರು ಬೆಳೆದಿರುವ ಮೆಕ್ಕೆಜೋಳವನ್ನು ಯಾವುದೇ ಮಿತಿಯ ನಿರ್ಬಂಧವಿಲ್ಲದೆ ಸಂಪೂರ್ಣವಾಗಿ ಸರ್ಕಾರವೇ ಖರೀದಿಸಬೇಕು. ಬೆಂಬಲ ಬೆಲೆಯ ದರವನ್ನು ₹2,400ರಿಂದ ₹ 3,500 ನಿಗದಿಪಡಿಸಬೇಕು. ಈಗಾಗಲೇ ಜೋಳ ಮಾರಾಟ ಮಾಡಿರುವ ರೈತರಿಗೆ ಹಣ ನೀಡಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಲಿವುಡ್‌ ಮೇಲೆ ಭೂಗತ ಲೋಕದ ಕರಿನೆರಳು: ದಾವೂದ್ ಇಬ್ರಾಹಿಂನಿಂದ...

ಒಂದು ಕಾಲದಲ್ಲಿ ಬಾಲಿವುಡ್ ಸಿನಿಮಾಗಳಿಗೆ ಹಣ ಹೂಡುತ್ತಿದ್ದ, ನಟ-ನಟಿಯರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಿದ್ದ ಭೂಗತ ಲೋಕ, ಈಗ ಗುಂಡಿನ ದಾಳಿ ಮತ್ತು ಜೀವಬೆದರಿಕೆಗಳ ಮೂಲಕ ಮತ್ತೊಮ್ಮೆ ತನ್ನ ಅಸ್ತಿತ್ವ ಪ್ರದರ್ಶಿಸುತ್ತಿದೆ. ದಾವೂದ್...

ಲೋಕಸಭೆಯ ಬಲ 850ಕ್ಕೆ ಏರಿಕೆ: ಕಲಾಪದ ಸಮಯ ಹೆಚ್ಚಳವಿಲ್ಲದಿದ್ದರೆ...

ಲೋಕಸಭೆಯ ಸದಸ್ಯರ ಬಲವನ್ನು 550ರಿಂದ 850ಕ್ಕೆ ಹೆಚ್ಚಿಸುವ ‘ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ–2026’ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದೆ. ಜನಸಂಖ್ಯೆಗೆ ಅನುಗುಣವಾಗಿ ಸೀಟುಗಳ ಹೆಚ್ಚಳ ಅನಿವಾರ್ಯವಾದರೂ, ಸಂಸತ್ತಿನ ವಾರ್ಷಿಕ ಕಲಾಪದ ದಿನಗಳು ಮತ್ತು...

ಸೌದಿ ಅರೇಬಿಯಾದ ಕಂಠನಾಳಕ್ಕೇ ಕೈಹಾಕಿರುವ ಯೆಮನ್!

ಸೌದಿ ಅರೇಬಿಯಾದ ಜೀವನಾಡಿಗೇ ಕೈಹಾಕಿರುವ ಯೆಮನ್‌ನ ಈ ಪ್ರತಿರೋಧವು ಕೇವಲ ಒಂದು ಯುದ್ಧದ ಕಥೆಯಲ್ಲ; ಇದು ಮಧ್ಯಪ್ರಾಚ್ಯದ ರಾಜಕೀಯ ಇತಿಹಾಸವನ್ನೇ ಮರುಬರೆಯಬಹುದಾದ ಸಂಘರ್ಷವಾಗಿದೆ. ಅಲ್ಲಿಯವರೆಗೆ, ಯೆಮನ್ ಕೇವಲ ಅರಬ್ ಜಗತ್ತಿಗಷ್ಟೇ ಅಲ್ಲ, ಇಡೀ...

ಮೆಕ್ಕೆಜೋಳ ಖರೀದಿ ಪ್ರಕ್ರಿಯೆಯ ಅವೈಜ್ಞಾನಿಕ ನಿಯಮಗಳನ್ನು ಸರಳೀಕರಿಸಬೇಕು. ಕೇಂದ್ರ ಸರ್ಕಾರವು ವಿದೇಶದಿಂದ ಮೆಕ್ಕೆಜೋಳ ಆಮದು ಮಾಡಿಕೊಳ್ಳುತ್ತಿದ್ದು ಇದನ್ನು ಕೈ ಬಿಡಬೇಕು. ಎಪಿಎಂಸಿಗಳಲ್ಲಿ ನಡೆಯುತ್ತಿರುವ ರೈತರ ಸುಲಿಗೆ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ಇದನ್ನು ಓದಿದ್ದೀರಾ..?ರಸ್ತೆಯಲ್ಲಿಚಿರತೆ ಪ್ರತ್ಯಕ್ಷ ನಂದಿ ಹಿಲ್ಸ್​ಗೆ ಬರುವ ಪ್ರವಾಸಿಗರಲ್ಲಿ ಆತಂಕ

ಈ ಸಂದರ್ಭದಲ್ಲಿ ನರಸಿಂಹಪ್ಪ, ಹನುಮಂತರೆಡ್ಡಿ, ಲಕ್ಷ್ಮಿನಾರಾಯಣ, ಹೇಮಚಂದ್ರ, ಶ್ರೀನಿವಾಸ್, ಗೋಪಾಲ್ ರೆಡ್ಡಿ, ರಮೇಶ್ ರೆಡ್ಡಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನನ್ನ ರಾಜಕೀಯ ಏಳಿಗೆಯಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪಾತ್ರ ದೊಡ್ಡದು | ಸಿದ್ದರಾಮಯ್ಯ

ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ...

ಚಿಕ್ಕಮಗಳೂರು | ಭೀಕರ ಅಪಘಾತ: ಇಬ್ಬರಿಗೆ ಗಂಭೀರ 

ವಾಹನ ಅಪಘಾತ,ಜೆಸಿಬಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು...

ಬಾಗೇಪಲ್ಲಿ: ಅಂತರರಾಜ್ಯ ಮಟ್ಟದ ಬಹುಭಾಷಾ ದಸರಾ ಕವಿಗೋಷ್ಠಿ

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ವತಿಯಿಂದ ಪಟ್ಟಣಕ್ಕೆ ಸಮೀಪದ ಗಡಿದಂ ರಾಜರಾಜೇಶ್ವರಿ...