ರಸ್ತೆಯಲ್ಲಿ ನಡೆಯುತ್ತಿರುವ ಅವರೆಕಾಯಿ ವ್ಯಾಪಾರದಿಂದ ಸಾರ್ವಜನಿಕರಿಗೆ ಹಾಗೂ ಟ್ರಾಫಿಕ್‌ಗೆ ತೀವ್ರ ತೊಂದರೆಯಾಗುತ್ತಿದೆ

Date:

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಕನ್ನಡಪರ ಹಾಗೂ ರೈತ ಸಂಘಟನೆಗಳ ಮುಖಂಡರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಎಂ.ಜಿ. ರಸ್ತೆಯ ಅವರೆಕಾಯಿ ಮಾರುಕಟ್ಟೆ ಸ್ಥಳಾಂತರ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಕುಮಾರ್ ಅವರ ಇತ್ತೀಚಿನ ನಡೆಗೆ ಹೋರಾಟಗಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಬೈಚೇಗೌಡ, “ಎಂ.ಜಿ. ರಸ್ತೆಯಲ್ಲಿ ನಡೆಯುತ್ತಿರುವ ಅವರೆಕಾಯಿ ವ್ಯಾಪಾರದಿಂದ ಸಾರ್ವಜನಿಕರಿಗೆ ಹಾಗೂ ಟ್ರಾಫಿಕ್‌ಗೆ ತೀವ್ರ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ವ್ಯಾಪಾರವನ್ನು ಎಪಿಎಂಸಿ ಮಾರುಕಟ್ಟೆಗೆ ವರ್ಗಾಯಿಸುವಂತೆ ನಾವು ಪ್ರತಿಭಟನೆ ನಡೆಸಿದ್ದೆವು. ಆದರೆ ರಮೇಶ್ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಬಡವರ ಪರ ಎನ್ನುವ ನಾಟಕವಾಡುತ್ತಿದ್ದಾರೆ,” ಎಂದು ಕಿಡಿಕಾರಿದರು.

“ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಬೆಳೆಗಳನ್ನು ಜೆಸಿಬಿ ಮೂಲಕ ನಾಶ ಮಾಡಿದಾಗ ಅಥವಾ ಮಾವಿನ ಬೆಳೆ ಬೆಲೆ ಕಳೆದುಕೊಂಡು ರೈತರು ಬೀದಿಗೆ ಬಿದ್ದಾಗ ನಿಮ್ಮ ಬಡವರ ಪರ ಕಾಳಜಿ ಎಲ್ಲಿ ಹೋಗಿತ್ತು? ನಾವು ಹೋರಾಟ ಮಾಡಿ ಶ್ರೀನಿವಾಸಪುರ ಬಂದ್ ಮಾಡಿ ಸರ್ಕಾರದಿಂದ ಬೆಂಬಲ ಬೆಲೆ ಕೊಡಿಸಿದ್ದೇವೆ. 30-40 ವರ್ಷಗಳಿಂದ ರಸ್ತೆಯಲ್ಲೇ ವ್ಯಾಪಾರ ನಡೆಯುತ್ತಿದೆ ಎಂದರೆ ಪಟ್ಟಣದ ಅಭಿವೃದ್ಧಿ ಬೇಡವೇ?” ಎಂದು ಅವರು ಪ್ರಶ್ನಿಸಿದರು. ಕನ್ನಡಪರ ಸಂಘಟನೆಯ ಮುಖಂಡ ಆಟೋ ಜಗದೀಶ್ ಮಾತನಾಡಿ, ಹೋರಾಟಗಾರರ ವಿರುದ್ಧ ಅವಾಚ್ಯ ಶಬ್ದ ಬಳಸಿದ ಬಿ ಎಂ ಪ್ರಕಾಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ಪುರಸಭೆ ಅಧ್ಯಕ್ಷರಾಗಿದ್ದಾಗ ಐದು ಲಕ್ಷ ರೂಪಾಯಿಗಳನ್ನು ಪುರಸಭೆ ಖಾತೆಗೆ ಜಮಾ ಮಾಡುವುದು ಬಿಟ್ಟು ವೈಯಕ್ತಿಕ ಖಾತೆಗೆ ಹಾಕಿಕೊಂಡು ಭ್ರಷ್ಟಾಚಾರದ ಆರೋಪ ಎದುರಿಸಿದವರು ಇಂದು ಹೋರಾಟಗಾರರ ಮೇಲೆ ಆರೋಪ ಮಾಡುತ್ತಿದ್ದಾರೆ.

ಇದನ್ನು ಓದಿದ್ದೀರಾ..? ಅವರೆಕಾಯಿ ವ್ಯಾಪಾರ ಸ್ಥಳಾಂತರ ವಿವಾದ; ವ್ಯಾಪಾರಿಗಳ ಪರ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬ್ಯಾಟಿಂಗ್

ದಲ್ಲಾಳಿಗಳ ಪರ ವಕಾಲತ್ತು ವಹಿಸುವುದನ್ನು ಬಿಟ್ಟು, ಕಡಿಮೆ ಬೆಲೆಗೆ ರೈತರಿಂದ ಖರೀದಿಸಿ ಹೆಚ್ಚಿನ ಬೆಲೆಗೆ ಮಾರುವ ದಲ್ಲಾಳಿಗಳ ಹಾವಳಿ ತಡೆಯಿರಿ,” ಎಂದು ಸವಾಲು ಹಾಕಿದರು. ನಾಡು, ನುಡಿ ಹಾಗೂ ರೈತರ ಪರವಾಗಿ ಹೋರಾಡುವವರ ಬಗ್ಗೆ ಹಗುರವಾಗಿ ಮಾತನಾಡಿದರೆ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಇದೇ ವೇಳೆ ಕನ್ನಡಪರ ಸಂಘಟನೆಯ ಮುಖಂಡ ಸುಬ್ರಮಣಿ ಮಾತನಾಡಿ ಹೋರಾಟಗಾರರ ವಿರುದ್ಧ ಆವಾಚ್ಯ ಶಬ್ದಗಳ ನಿಂದನೆ ಮಾಡಿರುವರ ಮೇಲೆ ಪ್ರಕರಣ ದಾಖಲಾಗಿದೆ ಹೋರಾಟಗಾರರ ಬಗ್ಗೆ ಹಗುರವಾಗಿ ಮಾತನಾಡಿದರೆ ಸುಮ್ಮನಿರುವುದಿಲ್ಲವೆಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...