ರಾಜ್ಯ ಸರಕಾರದ ಕೈಗಾರಿಕೆಗಾಗಿ ಬಲವಂತದ ಭೂ ಸ್ವಾಧೀನದ ಸಿಪಿಐಎಂ ಪಕ್ಷ ಖಂಡನೆ

Date:

ಬಾಗೇಪಲ್ಲಿ:- ಬೆಂಗಳೂರು ಆನೇಕಲ್ ಹತ್ತಿಬೆಲೆ ಪ್ರದೇಶದಲ್ಲಿ ಪ್ರತಿಷ್ಠಿತ ಇನ್ಫೋಸಿಸ್ ಕಂಪನಿಯು, ಕೈಗಾರಿಕಾಭಿವೃದ್ಧಿ ಹೆಸರಿನಲ್ಲಿ ಕೆಐಏಡಿಬಿಯ ಮೂಲಕ ಈ ಹಿಂದೆ ಪಡೆದ ಸುಮಾರು 1,000 ಕೋಟಿ ರೂಗೂ ಅಧಿಕ ಮೌಲ್ಯದ
55.5 ಎಕರೆ ಜಮೀನನ್ನು ಇದೀಗ 250 ಕೋಟಿ ರೂಗಳಿಗೆ ಮಾರಾಟ ಮಾಡಿದೆ.

ಕೈಗಾರಿಭಿವೃದ್ಧಿ ಹೆಸರಿನಲ್ಲಿ ಸರಕಾರದಿಂದ ಅತ್ಯಂತ ಕಡಿಮೆ ಬೆಲೆಗೆ ಅಥವಾ ದಾನವಾಗಿ ಪಡೆದ ಜಮೀನನ್ನು ರಿಯಲ್ ಎಸ್ಸೇಟ್ ಮಾಡಿ ಲಾಭ ಮಾಡಿಕೊಂಡ ಇನ್ಫೋಸಿಸ್ ಸಂಸ್ಥೆಯ ಅಕ್ರಮವನ್ನು ಸಿಪಿಐಎಂ ಬಲವಾಗಿ ಖಂಡಿಸುತ್ತದೆ
ಎಂದು ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯರು ಮುನಿವೆಂಕಟಪ್ಪ ಎಂಪಿ ತಿಳಿಸಿದರು.

- Advertisement -

ಅವರು ಪಟ್ಟಣದ ಸಿಪಿಐಎಂ ಪಕ್ಷದ ಕಛೇರಿ ಸುಂದರಯ್ಯ ಭವನದಲ್ಲಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದರು.
ಈ ಕೂಡಲೆ ಸದರಿ ಭೂಮಿಯ ಮಾರಾಟದ ಪ್ರಕ್ರಿಯೆಯನ್ನು ತಡೆದು ರಾಜ್ಯ ಸರಕಾರ ವಾಪಾಸು ಪಡೆಯಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ರಾಜ್ಯ ಸರಕಾರ ಕೆಐಏಡಿಬಿ ಮೂಲಕ ರೈತರಿಂದ ಅತ್ಯಂತ ಕಡಿಮೆ ಬೆಲೆಗೆ ಮತ್ತು ಬಲವಂತವಾಗಿ ಸ್ವಾಧೀನ ಮಾಡಿ, ನಂತರ ಕೇವಲ ತಲಾ ಎಕರೆಗೆ 100 ರೂಗಳಂತೆ ಕೈಗಾರಿಕಾಭಿವೃದ್ಧಿ ಹೆಸರಿನಲ್ಲಿ ಸದರಿ ಕಂಪನಿಗೆ ಗುತ್ತಿಗೆಗೆ ನೀಡಿದೆ. ನಂತರ ಅತ್ಯಂತ ಕಡಿಮೆ ಬೆಲೆಗೆ ( ಹಳೆಯ) ಅವರಿಗೆ ಮಾರಾಟ ಮಾಡಿದೆ.

ಇನ್ಪೋಸಿಸ್ ಸಂಸ್ಥೆಯು ಅದನ್ನು ಸಂಸ್ಥೆ ಹಾಗು ಕೈಗಾರಿಕಾಭಿವೃದ್ಧಿಗೆ ಬಳಸದೆ ರಿಯಲ್ ಎಸ್ಟೇಟ್ ಮಾಡಿ ಲಾಭ ಮಾಡಿಕೊಂಡು ವಂಚಿಸಿದೆ. ಇದು, ರಾಜ್ಯ ಸರಕಾರ ಕೈಗಾರಿಕಾಭಿವೃದ್ದಿ ಹೆಸರಲ್ಲಿ ರೈತರಿಂದ ಬಲವಂತವಾಗಿ ಸ್ವಾಧೀನ ಮಾಡಿದ ಜಮೀನುಗಳು ಹೇಗೆ ಕಾರ್ಪೋರೇಟ್ ಸಂಸ್ಥೆಗಳ ರಿಯಲ್ ಎಸ್ಟೇಟ್ ದಂಧೆಗೆ ಮತ್ತು ಅವರ ಲೂಟಿಗೆ ಒಳಗಾಗುತ್ತಿವೆ ಎಂಬುದನ್ನು ಎತ್ತಿ ತೋರಿಸುತ್ತಿದೆ. ಮಾತ್ರವಲ್ಲಾ, ರೈತರಿಂದ ಬಲವಂತವಾಗಿ ಸ್ವಾಧೀನ ಮಾಡಿಕೊಂಡು ಕಾರ್ಪೋರೇಟ್ ಸಂಸ್ಥೆಗಳ ಲೂಟಿಕೋರತನಕ್ಕೆ ವರ್ಗಾಯಿಸುತ್ತಿದೆ ಎಂಬುದನ್ನು ಬಯಲುಗೊಳಿಸುತ್ತದೆ ಎಂದು ಸಿಪಿಐಎಂ ವಿವರಿಸಿದೆ.

ಇದನ್ನು ಓದಿದ್ದೀರಾ..? ಅಪಘಾತದಲ್ಲಿ ಅಜ್ಜವಾರದ 4 ಮಂದಿ ಯುವಕರು ಸಾವು: ಮೃತರ ಸ್ವ-ಗ್ರಾಮಕ್ಕೆ ಶಾಸಕ ಪ್ರದೀಪ್ ಈಶ್ವರ್ ಭೇಟಿ

ಈ ಭೂಮಿಯನ್ನು ಸರ್ಕಾರ ನಿರ್ದಿಷ್ಟ ಉದ್ದೇಶಕ್ಕಾಗಿ ರಿಯಾಯಿತಿ ದರದಲ್ಲಿ ಹಂಚಿಕೆ ಮಾಡಿದೆ. ಆ ಉದ್ದೇಶಕ್ಕಾಗಿ ಭೂಮಿಯನ್ನು ಬಳಸಲಾಗಿಲ್ಲ ಎಂದ ಮೇಲೆ, ಇನ್ಫೋಸಿಸ್ ಅದನ್ನು ವಾಣಿಜ್ಯ ದರಕ್ಕೆ ಮಾರಾಟ ಮಾಡುವ ಹಕ್ಕನ್ನು ಹೊಂದಿಲ್ಲ. ಹೀಗಾಗಿ ಈ ಭೂಮಿ ಮತ್ತು ಅದರ ಆದಾಯವನ್ನು ಕರ್ನಾಟಕ ಸರ್ಕಾರಕ್ಕೆ ಹಿಂತಿರುಗಿಸಬೇಕೆಂದು
ಸಿಪಿಐಎಂ ರಾಜ್ಯ ಸಮಿತಿ ಕಾರ್ಯದರ್ಶಿ ಮಂಡಳಿ ಸದಸ್ಯರು ಮುನಿವೆಂಕಟಪ್ಪ ಎಂಪಿ ತಿಳಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮೀಣ ಬದುಕು, ಕೃಷಿ ಸಂಸ್ಕೃತಿ ಪ್ರವಾಸಿಗರಿಗೆ ಪರಿಚಯಿಸಲು ಹೊಸ ಪ್ರವಾಸೋದ್ಯಮ ಪ್ಯಾಕೇಜ್‌ಗಳ ಚಿಂತನೆ

ಉಡುಪಿ ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳೊಂದಿಗೆ ಗ್ರಾಮೀಣ...

ವಿಜಯಪುರ | ಬರ ಪರಿಹಾರ ಹೆಚ್ಚಳ, ಸಾಲಮನ್ನಾಕ್ಕೆ ರಾಜ್ಯ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯಲ್ಲಿ ಮಳೆ ಕೈಕೊಟ್ಟು ಕೃಷಿ ಚಟುವಟಿಕೆಗಳು ತೀವ್ರ ಸಂಕಷ್ಟಕ್ಕೆ ಸಿಲುಕಿರುವ...

ಇಂಡಿ | ಸ್ಥಳೀಯ ಚುನಾವಣೆ: ಕಾಂಗ್ರೆಸ್ ಬಲಗೊಳಿಸಲು ಯಶವಂತರಾಯಗೌಡ ಪಾಟೀಲ ಕರೆ

ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಗರಸಭೆ...

ಬಸವನ ಬಾಗೇವಾಡಿ ಸಮೀಪ 3.5 ತೀವ್ರತೆಯ ಭೂಕಂಪ ದಾಖಲು!

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ದಿಂದಾವರ ಗ್ರಾಮ ಪಂಚಾಯಿತಿ ಸಮೀಪ...