ರಾಯಚೂರು |ನಿವೇಶನ ಹಂಚಿಕೆ 10 ವರ್ಷಗಳ ಕಾಲಹರಣ: ಸ್ಲಂ ನಿವಾಸಿಗಳ ಪ್ರತಿಭಟನೆ

Date:

ವಾಜಿಪೇಯಿ ನಗರ ನಿವೇಶನ ಯೋಜನೆಯಲ್ಲಿ ಸರ್ವೆ ನಂ:581, 929/2 ಮತ್ತು 726/727 ರ ಭೂಮಿಯನ್ನು ಅಭಿವೃದ್ಧಿಪಡಿಸದೆ, ನಿವೇಶನ ಹಂಚಿಕೆ ಮಾಡದೇ 10 ವರ್ಷಗಳಿಂದ ಕಾಲಹರಣ ಮಾಡುತ್ತಿರುವ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಫಲಾನುಭವಿಗಳು ನಗರದ ಜಿಲ್ಲಾಡಳಿತ ಭವನದ ಎದುರು ರಾಯಚೂರು ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ನಗರದ ವಿವಿಧ ಸ್ಲಂಗಳಲ್ಲಿ ಬಾಡಿಗೆ ಮನೆಗಳಲ್ಲಿ, ಬೀದಿಬದಿ ಟೆಂಟ್‌ಗಳಲ್ಲಿ ವಾಸಿಸುವ ದಲಿತ, ಹಿಂದುಳಿದ, ಅಲ್ಪಸಂಖ್ಯಾತ, ಅಲೆಮಾರಿ ಮತ್ತು ಬಡ ಕೂಲಿ ಕಾರ್ಮಿಕರ ಹಿತಾರ್ಥಕ್ಕಾಗಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ 10 ವರ್ಷಗಳ ಹಿಂದೆ ವಾಜಿಪೇಯಿ ಯೋಜನೆಯಲ್ಲಿ ಭೂಮಿ ಮಂಜೂರಿ ಮಾಡಿ ನಿವೇಶನ ಹಕ್ಕುಪತ್ರಗಳನ್ನು ನೀಡಿದ್ದರೂ, ಇಂದಿಗೂ ಯೋಜನೆ ಜಾರಿಗೆ ಬಂದಿಲ್ಲ. ನಿವೇಶನ ಪಡೆಯದೆ ಹಲವಾರು ಫಲಾನುಭವಿಗಳು ತೀರಿಕೊಂಡಿರುವುದನ್ನು ಕುಟುಂಬಸ್ಥರು ಕಳವಳದಿಂದ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದಕ್ಕೂ ಮೊದಲು ಹಲವಾರು ಬಾರಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಿ, ಸಭೆಗಳಲ್ಲಿ ಭಾಗವಹಿಸಿದರೂ ಯಾವುದೇ ಪರಿಹಾರ ದೊರೆತಿಲ್ಲ. ಫಲಾನುಭವಿಗಳು ಒಂದು ತಿಂಗಳೊಳಗೆ ವಾಜಿಪೇಯಿ ನಿವೇಶನ ಯೋಜನೆಯಲ್ಲಿ ಅಭಿವೃದ್ಧಿ ಕೆಲಸ ಪೂರ್ಣಗೊಳಿಸಿ ನಿವೇಶನ ಹಂಚಿಕೆ ಮಾಡಬೇಕು. ಇಲ್ಲದಿದ್ದರೆ ಬೃಹತ್‌ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ವೇದಿಕೆಯ ಅಧ್ಯಕ್ಷ ಜನಾರ್ಧನ ಹಳ್ಳಿಬೆಂಚಿ, ಕಾರ್ಯದರ್ಶಿ ನೂರ್‌ಜಾನ್, ಸಂಘಟನಾ ಕಾರ್ಯದರ್ಶಿ ಬಸವರಾಜ್, ಖಜಾಂಚಿ ರಾಜಶೇಖರ, ಮುಖಂಡರಾದ ಜಿ.ರಾಜು, ಎಸ್.,ನಾಗರಾಜ, ಪವನ್, ಅನೀಲ್‌ಕುಮಾರ ಸೇರಿದಂತೆ ಅನೇಕರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...