ರಾಯಚೂರು | ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಧರಣಿ

Date:

Advertisements
  • ಪಡಿತರ ಆಹಾರ ಧಾನ್ಯ ಮತ್ತು ನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಆಗ್ರಹ
  • ಆಗಸ್ಟ್ 14 ಮತ್ತು 15 ರಂದು ಎರಡು ದಿನ ರಾಜ್ಯಾದ್ಯಂತ ಅಹೋರಾತ್ರಿ ಧರಣಿ

ಪಡಿತರ ಆಹಾರ ಧಾನ್ಯ ಮತ್ತು ನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿಕಾರರ ಸಂಘಟನೆಯಿಂದ ರಾಜ್ಯಾದ್ಯಂತ ಎರಡು ದಿನ ಅಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಕೂಸ್ ರಾಜ್ಯ ಮುಖಂಡ ಗುರುರಾಜ್ ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸ್ವಾತಂತ್ರ್ಯ ದಿವಸದ ಅಂಗವಾಗಿ ರೈತರ ಮತ್ತು ಕಾರ್ಮಿಕರ ಹಿತ ದೃಷ್ಟಿಯಿಂದ , ಪೌಷ್ಟಿಕಾಂಶದ ಕೊರತೆ ನೀಗಿಸುವುದಕ್ಕಾಗಿ ಅನುಕೂಲಕರ ದರದಲ್ಲಿ ಪಡಿತರದಲ್ಲಿ ಆಯಾಯ ಪ್ರದೇಶಕ್ಕೆ ಅನುಗುಣವಾಗಿ ಅಕ್ಕಿಯೊಂದಿಗೆ ರಾಗಿ ಅಥವಾ ಜೋಳ ಮತ್ತು 1 ಕೆ.ಜಿ. ತೊಗರಿಬೇಳೆ, 1 ಕೆ.ಜಿ. ಎಣ್ಣೆ ಅನುಕೂಲಕರ ದರದಲ್ಲಿ ಕೊಡಬೇಕೆಂದು ಒತ್ತಾಯಿಸಿ ಆಗಸ್ಟ್ 14 ಮತ್ತು 15 ರಂದು ಪ್ರತಿಭಟನೆ ನಡೆಸಲಿದ್ದೇವೆ” ಎಂದು ಮಾಹಿತಿ ನೀಡಿದ್ದರು.

“ರೈತರ ಬೆಳೆಗೂ ಸ್ಥಳೀಯವಾಗಿ ಸೂಕ್ತ ಮಾರುಕಟ್ಟೆ ದೊರೆತರೆ ಕಾರ್ಮಿಕರಿಗೆ ಪೌಷ್ಟಿಕ ಆಹಾರ ಸಿಗುತ್ತದೆ. ಉದ್ಯೋಗ ಖಾತ್ರಿಯಲ್ಲಿ 90 ದಿವಸಗಳಿಗೂ ಹೆಚ್ಚಿನ ಮಾನವ ದಿನಗಳನ್ನು ಮುಗಿಸಿದ ಕಾರ್ಮಿಕರಿಗೆ ‌ಸಾಮಾಜಿಕ ಭದ್ರತೆಗಾಗಿ BOCW ಅಡಿಯಲ್ಲಿ ಕಾರ್ಮಿಕ ಚೀಟಿಗಳನ್ನು ನೀಡಬೇಕೆಂದು ಒತ್ತಾಯಿಸಲಾಗುವುದು” ಎಂದರು.

Advertisements

ಈ ಸುದ್ದಿ ಓದಿದ್ದೀರಾ ? ರಾಯಚೂರು | ಏಮ್ಸ್ ಮಂಜೂರಾತಿ ಕುರಿತು ಪ್ರಾಣ ತ್ಯಾಗಕ್ಕೂ ಸಿದ್ಧ: ಕಾಂಗ್ರೆಸ್ ಮುಖಂಡ

“ಅಪೌಷ್ಟಿಕತೆ ನೀಗಿಸುವ ಆಹಾರ ಭದ್ರತೆ ಮತ್ತು ಆರೋಗ್ಯ ಶಿಕ್ಷಣವು ಸಾಮಾಜಿಕ ಭದ್ರತೆ ನೀಡುವ ಯೋಜನೆಗಳಾಗಿದ್ದು, ರೈತರ ಮತ್ತು ಕಾರ್ಮಿಕ‌ರಿಗೆ ಏಕಕಾಲಕ್ಕೆ ಪ್ರಯೋಜನೆ ಆಗಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X