ವಾಲ್ಮೀಕಿ ಸಮುದಾಯದ ಹಾಸ್ಟೆಲ್ ಪ್ರಾರಂಭಿಸಲು 10 ಲಕ್ಷ ಅನುದಾನ ಕೊತ್ತೂರು ಮಂಜುನಾಥ್ ಭರವಸೆ

Date:

ಕೋಲಾರ: ವಾಲ್ಮೀಕಿ ಸಮುದಾಯದ ಮಕ್ಕಳಿಗೆ ಹಾಸ್ಟೆಲ್ ಪ್ರಾರಂಭಿಸಲು ಸರ್ಕಾರದ ಜಾಗವಿರಬೇಕು ಅಂತಹ ಸಂದರ್ಭದಲ್ಲಿ ಮಾತ್ರವೇ ಸರ್ಕಾರದಿಂದ ಅನುದಾನ ಕೊಡಿಸಲು ಸಾಧ್ಯ ಪ್ರಸ್ತುತ ಸಮುದಾಯದ ಜಾಗದಲ್ಲಿ ಸಮುದಾಯದ ಹಾಸ್ಟೆಲ್ ಗಾಗಿ 10 ಲಕ್ಷ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

- Advertisement -

ನಗರ ಹೊರವಲಯದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಿದ್ದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜ ಉದ್ದಾರ ಒಬ್ಬರಿಂದ ಸಾಧ್ಯವಿಲ್ಲ ದೇಶದ ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯವಾಗಿದೆ ಸಮುದಾಯಗಳು ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸಮಾಜದಲ್ಲಿ ಸಣ್ಣಪುಟ್ಟ ಸಮುದಾಯಗಳು ಕಳೆದ ಐದಾರು ವರ್ಷಗಳಿಂದ ಕಣ್ಣು ತೊರೆಯುವಂತಾ ವಾತಾವರಣ ಸೃಷ್ಟಿಯಾಗಿದೆ ಇಂತಹ ಸಮುದಾಯಗಳೊಂದಿಗೆ ಬಲಿಷ್ಠ ಸಮುದಾಯಗಳು ಕೈಜೋಡಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕಾಗಿದೆ ಎಂದರು

ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ, ರಾಜಕೀಯದಲ್ಲಿ ಸಮುದಾಯಕ್ಕಾಗಿ ತಪ್ಪಿ ಹೋಗಿರುವ ಎರಡು ಸಚಿವ ಸ್ಥಾನಗಳನ್ನು ಪುನಃ ನೀಡಲು ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ನಿಮ್ಮೊಂದಿಗೆ ಸದಾ ನಾವು ಇರುತ್ತೇವೆ. ಕೋಲಾರದಲ್ಲಿ ಎಲ್ಲಾ ಸಮಾಜಕ್ಕೆ ಸೇರಿದ ಹಾಸ್ಟೆಲ್ ಗಳೂ ಇದ್ದು, ನಿಮ್ಮ ಸಮುದಾಯಕ್ಕೂ ನ್ಯಾಯ ಒದಗಿಸಲಾಗುವುದು ಎಂದರು.

ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ವಾಲ್ಮೀಕಿ ಎಂದೊಡನೆ ನಮಗೆ ನೆನಪಾಗುವುದೇ ರಾಮಾಯಣ. ಅವರ ಇತಿಹಾಸದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಬೇಡರ ಕಣ್ಣಪ್ಪ, ಏಕಲವ್ಯ, ಚಿತ್ರದುರ್ಗದ ಕೊನೆಯ ಪಾಳೆಯಗಾರ ಮದಕರಿ ನಾಯಕ ಸೇರಿದಂತೆ ಅನೇಕ ಮಹನೀಯರು ಸಮುದಾಯದಲ್ಲಿದ್ದು ಇತಿಹಾಸವಿರುವ ದೊಡ್ಡ ಸಮಾಜವಾಗಿದೆ.ಹಾಸ್ಟೆಲ್ ನಿರ್ಮಾಣ ನಮ್ಮ‌‌ ಅನುದಾನ‌‌ದಿಂದ ಸಾಲುವುದಿಲ್ಲ. ಅದರ ಜತೆಗೆ ಎಸ್ಸಿಪಿ, ಟಿಎಸ್ಪಿ‌ ಹಣ ಕೊಡಿಸಿ ಸೌಲಭ್ಯ ಕಲ್ಪಿಸಲಾಗುವುದು ಎಂದ ಅವರು, ಉನ್ನತ ಶಿಕ್ಷಣ ಪಡೆದು ಹೆಚ್ಚು ಹೆಚ್ಚು ಸೌಲಭ್ಯಗಳನ್ನು ಪಡೆದುಕೊಳ್ಳುವಂತಾಗಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ನಗರಸಭೆ ಸದಸ್ಯ, ಸಮುದಾಯದ ಮುಖಂಡ ಅಂಬರೀಷ್, ನಾವು ಸಾಕಷ್ಟು ಹಿಂದೆ ಉಳಿದಿದ್ದು, ಕುರುಬ ಸಮುದಾಯವನ್ನು ನಮ್ಮ ಜತೆಗೆ ಬೇಡ. ನಮ್ಮ‌ ಮರಣ ಶಾಸನ ಬರೆದಂತಾಗುತ್ತದೆ.ಕೋಟೆ ವಾಲ್ಮೀಕಿ‌ ಭವನದ ಮೇಲೆ ಹಾಸ್ಟೆಲ್ ಕಟ್ಟಡ ಅನುಕೂಲ ಮಾಡಿಕೊಟ್ಟರೆ ನಾವೇ ಊಟದ ವ್ಯವಸ್ಥೆ ಮಾಡುತ್ತೇವೆ ರಾಮನಿಗೆ ಜೆಂಡಾ ನೀಡಿದ್ದೇ ವಾಲ್ಮೀಕಿ ಆದರೆ ಇಂದು ವಾಲ್ಮೀಕಿ ಅವರ ಪುತ್ಥಳಿಗೆ ಬಜರಂಗದಳ, ಆರ್‌ಎಸ್ ಎಸ್ ನವರು ಹಾರ ಹಾಕಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಅನಿಲ್ ಕುಮಾರ್ ಪಲ್ಲಕ್ಕಿಗಳ ಮೆರವಣಿಗೆಯನ್ನು ಡೊಳ್ಳು ಹೊಡೆಯುವ ಮೂಲಕ ಚಾಲನೆ ನೀಡಿದರು ವಿವಿಧ ಇಲಾಖೆಗಳು ಹಾಗೂ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಂದ ಬಂದ 50ಕ್ಕೂ ಹೆಚ್ಚು ಪಲ್ಲಕ್ಕಿಗಳು ಹಾಗೂ ಜಾನಪದ ಕಲಾ ತಂಡಗಳು ನೋಡುಗರ ಗಮನ ಸೆಳೆಯಿತು.

ಇದನ್ನು ಓದಿದ್ದೀರಾ..? ವಾಲ್ಮೀಕಿ ಜಯಂತಿ ಪ್ರಯುಕ್ತ ಪ್ರತಿಭಾ ಪುರಸ್ಕಾರ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಎಂ.ಆರ್ ರವಿ, ಜಿಪಂ ಸಿಇಒ ಪ್ರವೀಣ್ ಬಾಗೇವಾಡಿ, ಎಸ್ಪಿ ಬಿ‌.ನಿಖಿಲ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ವಾಲ್ಮೀಕಿ ಸಮಾಜದ ಮುಖಂಡರಾದ, ಬಾಲಗೋವಿಂದ್, ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಬೈರಂಡಹಳ್ಳಿ ನಾಗೇಶ್, ಮಂಜುಳಾ ಶ್ರೀನಿವಾಸ್, ಡಿಪಿಎಸ್ ಮುನಿರಾಜು, ಪಂಡಿತ್ ಮುನಿವೆಂಕಟಪ್ಪ, ಮೈಲಾಂಡಹಳ್ಳಿ ಮುರಳಿ, ಅಪ್ಸರ್, ಗಂಗಣ್ಣ, ಅಮರನಾಥ, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಏಜಾಜ್, ರಾಮಯ್ಯ, ವ್ಯಾಪಲಪಲ್ಲಿ ನರೇಶ್, ವಾಸು, ಸಿಂಗಹಳ್ಳಿ ಮುರಳಿ, ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...