ವಿಜಯಪುರ | ಭಾರೀ ಮಳೆ; ಅವಧಿಗೂ ಮುನ್ನವೇ ಅರ್ಧ ಭರ್ತಿಯಾದ ಆಲಮಟ್ಟಿ

Date:

ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಮಹಾರಾಷ್ಟ್ರ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದ ಆಲಮಟ್ಟಿ ಜಲಾಶಯಕ್ಕೆ ಮೇ 19ರಿಂದಲೇ ಒಳಹರಿವು ಆರಂಭವಾಗಿತ್ತು. ಆರಂಭದಲ್ಲಿ 424 ಕ್ಯೂಸೆಕ್‌ನಿಂದ ಶುರುವಾದ ಒಳಹರಿವು ಈಗ 12,134 ಕ್ಯೂಸೆಕ್‌ಗೆ ಬಂದು ತಲುಪಿದೆ.

- Advertisement -

ಮುಂಗಾರು ಪೂರ್ವ ಮಳೆಯಿಂದ ಮೇ 24ರವರೆಗೆ ಡ್ಯಾಮ್‌ಗೆ ಸಾಧಾರಣ ಒಳಹರಿವು ಇತ್ತು. 25ರಿಂದ 29ರವರೆಗೆ 35 ಸಾವಿರದಿಂದ 60 ಸಾವಿರ ಕ್ಯೂಸೆಕ್‌ ಒಳಹರಿವು ಶುರುವಾಗಿದ್ದರಿಂದ ಮುಂಜಾಗೃತಾ ಕ್ರಮವಾಗಿ ಮೇ 29ರಂದು ಕೆಪಿಸಿಎಲ್ ಮೂಲಕ ನದಿ ಪಾತ್ರಕ್ಕೆ 10 ಸಾವಿರ ಕ್ಯೂಸೆಕ್ ನೀರು ಹರಿಬಿಡುವ ಮೂಲಕ ಪ್ರಸಕ್ತ ಸಾಲಿನಲ್ಲಿ ಪ್ರಥಮ ಬಾರಿಗೆ ಹೊರಹರಿವು ಆರಂಭಿಸಲಾಯಿತು. ಒಳಹರಿವಿನ ಪ್ರಮಾಣ ನಂತರ ದಿನಗಳಲ್ಲಿ ಇಳಿಮುಖವಾಗಿದ್ದರಿಂದ ಹೊರಹರಿವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಆರ್ಭಟ ಆರಂಭವಾದ್ದರಿಂದ ಆಲಮಟ್ಟಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ಶುಕ್ರವಾರ ಬೆಳಿಗ್ಗೆಯಿಂದ ಮತ್ತೆ ಕೆಪಿಸಿಎಲ್ ಮೂಲಕ ನದಿ ಪಾತ್ರಕ್ಕೆ ನೀರು ಹರಿ ಬಿಡಲಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಭಾರೀ ಮಳೆಗೆ ಗೋಡೆ ಕುಸಿತ; ವೃದ್ಧೆ ಸಾವು, ನಾಲ್ವರಿಗೆ ಗಾಯ

ಜೂನ್ ತಿಂಗಳ ಎರಡನೇ ವಾರದಲ್ಲಿ ಆಲಮಟ್ಟಿ ಜಲಾಶಯ ಅರ್ಧದಷ್ಟು ಭರ್ತಿಯಾಗಿರುವುದು ದಾಖಲೆಯಾಗಿದೆ. ಕಳೆದ ಐದಾರು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿರುವುದರ ಜತೆಗೆ ಜಲಾಶಯ ಅರ್ಧ ಭರ್ತಿಯಾಗಿದ್ದರಿಂದ ವಿಜಯಪುರ, ಬಾಗಲಕೋಟೆ, ರಾಯಚೂರ, ಯಾದಗಿರಿ, ಕಲಬುರಗಿ ಜಿಲ್ಲೆಯ ಕೃಷ್ಣಾ ಅಚ್ಚುಕಟ್ಟು ಪ್ರದೇಶದ ರೈತರು ಸಂತಸಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...