ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪೋಷಕರ-ಶಿಕ್ಷಕರ ಮಹಾಸಭೆ

Date:

ಬಾಗೇಪಲ್ಲಿ:ವಿದ್ಯಾರ್ಥಿಗಳ ಗುಣಮಟ್ಟದ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಾರ್ಗದರ್ಶನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿರುವ ವಿವಿಧ ಉಪಕ್ರಮಗಳಿಗೆ ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ,ಎಸ್.ಡಿ.ಎಂ.ಸಿ,ಅದ್ಯಕ್ಷರು ಸದಸ್ಯರು ಹಾಗೂ ಸಮುದಾಯ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುವ ಉದ್ದೇಶದಿಂದ, ನವೆಂಬರ್ 14ರಂದು ಮಕ್ಕಳ ದಿನಾಚರಣೆಯ ಪ್ರಯುಕ್ತ ತಾಲ್ಲೂಕಿನ ಕಸಭಾ ಹೋಬಳಿ ಘಂಟಂವಾರಿಪಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ “ಪೋಷಕರ-ಶಿಕ್ಷಕರ ಮಹಾಸಭೆ” ಹಮ್ಮಿಕೊಳ್ಳಾಗಿದೆ ಎಂದು ಮುಖ್ಯ ಶಿಕ್ಷಕಿ ರಾಮಸುಬ್ಬಮ್ಮಜಿ ಹೇಳಿದರು.

ಈ ಸಂದರ್ಭದಲ್ಲಿ ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳ,ಎಸ್.ಡಿ.ಎಂ.ಸಿ,ಅದ್ಯಕ್ಷರು ಸದಸ್ಯರು ದೀಪಾ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು.

- Advertisement -

ತದನಂತರ ಮಾತನಾಡಿ 2024-25 ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳನ್ನು ಅಭಿನಂದನೆಗೊಳಿಸುವ ಕಾರ್ಯಕ್ರಮ, ಬಾಲ್ಯ ವಿವಾಹ ನಿಷೇಧ ಮತ್ತು ಬಾಲ ಕಾರ್ಮಿಕ ನಿಷೇಧ ನೀತಿಗಳ ಬಗ್ಗೆ ಜಾಗೃತಿ ಮೂಡಿಸುವಿಕೆ, ಹಾಗೂ ವಿಶೇಷ ಚೇತನ ಮಕ್ಕಳಿಗೆ ನೀಡಲಾಗುವ ಸೌಲಭ್ಯಗಳ ಕುರಿತು ಪೋಷಕರಿಗೆ ಅರಿವು ನೀಡುವುದು ಸೇರಿದಂತೆ ಹಲವಾರು ಚಟುವಟಿಕೆಗಳು ನಡೆಯಿತು, ಸಭೆಯಲ್ಲಿ ಶಾಲೆಯ ಅಭಿವೃದ್ಧಿಯಲ್ಲಿ ಭಾಗೀದಾರರ ಪಾತ್ರ, ಪೋಷಕರ ಸಹಕಾರದ ಅಗತ್ಯತೆ ಇದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ.ಬಿ.ಆಂಜನೇಯ ರೆಡ್ಡಿ ಮಾತನಾಡಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪೋಷಕರು ಮತ್ತು ಮಕ್ಕಳೊಂದಿಗೆ ಆರೋಗ್ಯಪೂರ್ಣ ಚರ್ಚೆ ನಡೆಸಿ, ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

‘ಸರ್ಕಾರದ ಸೂಚನೆಯಂತೆ ಶಾಲೆಯಲ್ಲಿ ತಳಿರು–ತೋರಣಗಳಿಂದ ಬಲೂನ್ ನಿಂದ ಅಲಂಕರಿಸಿ, ಹಬ್ಬದ ವಾತಾವರಣ ಸೃಷ್ಟಿಸಲಾಗಿದೆ. ವಿದ್ಯಾರ್ಥಿಗಳಿಗೆ ನೀಡುತ್ತಿರುವ ವಿವಿಧ ಸವಲತ್ತುಗಳ ಅನುಷ್ಠಾನ ಕುರಿತು ಪೋಷಕರಿಗೆ ಮಾಹಿತಿ ಒದಗಿಸಲಾಗುತ್ತದೆ. ಜತೆಗೆ ಮಕ್ಕಳ ಹಕ್ಕುಗಳು, ಮಕ್ಕಳ ರಕ್ಷಣಾ ನೀತಿ, ಪೋಕ್ಸೊ ಕಾಯ್ದೆ ಕುರಿತಂತೆ ಅರಿವು ಮೂಡಿಸುವ ಕಾರ್ಯ ಮಾಡಲಾಗುತ್ತಿದೆ’ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಏ ಆರ್ ಟಿ ಓ ಕಚೇರಿಯಲ್ಲಿ ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಕಾರ್ಯಕ್ರಮ

ಈ ಸಂದರ್ಭದಲ್ಲಿ ಶಿಕ್ಷಕರಾದ ಎನ್.ಎನ್.ಸಂಧ್ಯಾ,ಜಿ.ವಿ.ಚಂದ್ರಶೇಖರ, ಜಿ.ಲಕ್ಷ್ಮೀದೇವಮ್ಮ,ನಾರಾಯಣ ಸ್ವಾಮಿ.ಸಿ.,ಎಸ್.ವರಲಕ್ಷ್ಮಿ,ಶರ್ಮಿಲಾ,ರಘುನಾಥ್ ಹೆಚ್.ಆರ್,ಎಸ್. ಡಿ.ಎಂ.ಅದ್ಯಕ್ಷ ಸಿದ್ದಯ್ಯ,ಸದಸ್ಯರಾದ ಬಾಬು,ನಾರಾಯಣ ಸ್ವಾಮಿ, ಬಾಬಾಜಾನ್ ಹಾಗೂ ಶಾಲಾ ಮಕ್ಕಳ ಪೋಷಕರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...