ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ ಅವಕಾಶ ಕೊಡಿ: ಡಾ ಕೆ ನಾಗರಾಜ್ ಮನವಿ

Date:

ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ, ಜಯಶೀಲರನ್ನಾಗಿ ಮಾಡಿದರೆ ಶಿಕ್ಷಕರು ಮತ್ತು ಪದವೀಧರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ನಲ್ಲಿ ಧ್ವನಿಯಾಗಿ ಕೆಲಸ ಮಾಡುತ್ತೇನೆ ಒಂದು ಅವಕಾಶ ನೀಡಿ ಎಂದು ಜೆಡಿಯು ಪಕ್ಷದ ಅಭ್ಯರ್ಥಿ ಹಾಗೂ ಪಕ್ಷದ ಯುವ ಘಟಕದ ರಾಜ್ಯ ಅಧ್ಯಕ್ಷ ಕಲ್ಲಂಡೂರು ಡಾ.ಕೆ.ನಾಗರಾಜ್ ಮನವಿ ಮಾಡಿದರು,

- Advertisement -

ಜಿಲ್ಲೆಯಾದ್ಯಂತ ಕಾಲೇಜುಗಳಿಗೆ ಶನಿವಾರ ಭೇಟಿ ನೀಡಿ ಆಗ್ನೇಯ ಪದವೀಧರ ಚುನಾವಣೆಗೆ ಸಂಬಂಧಿಸಿದಂತೆ ನೋಂದಣಿ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು ಈ ಭಾಗದಲ್ಲಿ ಸಮಸ್ಯೆಗಳು ಹೆಚ್ಚಾಗಿವೆ ವಿಧಾನಸೌಧದಲ್ಲಿ ಪದವೀಧರ ಸಮುದಾಯವು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸಮರ್ಥರ ಕೊರತೆ ಇದೆ ಈ ಬಾರಿ ನನಗೆ ಅವಕಾಶ ನೀಡಿ ಬೆಂಬಲಿಸಿದರೆ ನಿಮ್ಮಗಳ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸುಮಾರು 15 ವರ್ಷಗಳಿಂದ ಶಿಕ್ಷಕರು ಮತ್ತು ಪದವೀಧರರ ಅನೇಕ ಸಮಸ್ಯೆಗಳ ಧ್ವನಿಯಾಗಿ ಬಂದಿದ್ದೇನೆ ಸುಮಾರು ವರ್ಷಗಳಿಂದ ಅತಿಥಿ ಉಪನ್ಯಾಸಕರ ಹೋರಾಟದಲ್ಲಿ ಜೊತೆಯಾಗಿದ್ದೇನೆ ರಾಜ್ಯದಲ್ಲಿ ಸುಮಾರು 2.80 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಪದವೀಧರರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು ದುಡಿಯುವ ಕೈಗಳಿಗೆ ಉದ್ಯೋಗ ಇಲ್ಲದಂತಾಗಿದೆ. ಇದನ್ನು ಹೋಗಲಾಡಿಸಬೇಕಾದರೆ ಈ ಬಾರಿಯ ಚುನಾವಣೆಯಲ್ಲಿ ಜೆಡಿಯು ಪಕ್ಷದ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಿದರೆ ಖಂಡಿತವಾಗಿ ನಿಮ್ಮ ಋಣವನ್ನು ತೀರಿಸುವ ಕೆಲಸವನ್ನು ಮಾಡುತ್ತೇನೆ ಎಂದರು.

ಮುಂದಿನ 2026 ರ ಪದವೀಧರ ಚುನಾವಣೆಯಲ್ಲಿ ಮತ ಚಲಾಯಿಸಬೇಕಾದರೆ ಪದವಿ ಪೂರ್ಣಗೊಳಿಸಿರುವ ಪದವೀಧರರು ತಮ್ಮ ವ್ಯಾಪ್ತಿಯಲ್ಲಿನ ತಹಶಿಲ್ದಾರ್ ಕಚೇರಿಯ ಚುನಾವಣಾ ಶಾಖೆಯಲ್ಲಿ ಅರ್ಜಿ ನಮೂನೆ ಪಡೆದು ಮತದಾರರಾಗಿ ನೋಂದಣಿ ಮಾಡಿಸಿಕೊಳ್ಳಬೇಕು.ಇದಕ್ಕಾಗಿ ಜೆಡಿಯು ಪಕ್ಷದ ವತಿಯಿಂದ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ ಪ್ರತಿಯೊಬ್ಬ ಪದವೀಧರರು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಎರಡು ಫೋಟೋ ಜೊತೆಗೆ ಗೆಜಿಟೆಡ್ ಅಧಿಕಾರಿಯ ದೃಢೀಕರಣ ಪ್ರತಿಗಳೊಂದಿಗೆ ನ.6 2025ರ ಒಳಗೆ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ..? ಜನರು ಕಚೇರಿಗಳ ಸುತ್ತ ಅಲೆದಾಡುವುದನ್ನು ತಪ್ಪಿಸಲು ಜನ ಸ್ಪಂದನ ಕಾರ್ಯಕ್ರಮ

ಈ ಸಂದರ್ಭದಲ್ಲಿ ಡಾ.ಸಹನಾ, ಗ್ರಾಪಂ ಮಾಜಿ ಸದಸ್ಯ ನಂಜುಂಡಪ್ಪ, ಮಾಜಿ ನಗರಸಭಾ ಸದಸ್ಯ ಸುಬ್ರಮಣಿ, ನಿವೃತ್ತ ಮುಖ್ಯೋಪಾಧ್ಯಾಯ ದೊಡ್ಡ ವಿರಯ್ಯ, ಜೆಡಿಯು ಯುವ ಘಟಕದ ಜಿಲ್ಲಾ ಅಧ್ಯಕ್ಷ ನಾರಾಯಣಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಯಾರಭ್, ಮುಖಂಡರಾದ ನಾಗರಾಜ್, ಶೈಲೇಶ್, ಟಿ.ಸಿ ಮುನಿರಾಜು, ಲೋಹಿತ್ ಗೌಡ, ಮಹೇಶ್ ಗೌಡ, ಚೇತನ್ ಗೌಡ, ಡಾ.ಚೇತನ್, ಹರೀಶ್ ಗೌಡ, ಮೋಹನ್ ಗೌಡ, ಭಾರತಿ, ಸ್ವಾತಿ, ಸಂಜನ, ವಕೀಲರಾದ ಜಗನ್ನಾಥ್, ಹರೀಶ್ ಗೌಡ, ಶಿವಣ್ಣ ಮುಂತಾದವರು ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...