ಶುದ್ದ ಕುಡಿಯುವ ನೀರಿನ ಘಟಕ ಮತ್ತು ಹೈಮಾಸ್ಟ್ ದೀಪ ಉದ್ಘಾಟಿಸಿದ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್

Date:

ಚಿಂತಾಮಣಿ:ನಗರದ ಹೊರಭಾಗದಲ್ಲಿ ಸುಮಾರು 500-600 ಎಕರೆ ಪ್ರದೇಶದಲ್ಲಿ ಚಿಂತಾಮಣಿಯ ಉಪನಗರವನ್ನು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

- Advertisement -

ನಗರದ ನೆಕ್ಕುಂದಿ ಪೇಟೆ ಅಗ್ರಹಾರದ ಬಳಿಯ ಪಟಾಲಮ್ಮ ದೇವಾಲಯದ ಬಳಿಯ ವೃತ್ತದಲ್ಲಿ ನಗರಸಭೆ ನಿಧಿಯಿಂದ ಸ್ಥಾಪಿಸಿರುವ ಶುದ್ದ ಕುಡಿಯುವ ನೀರಿನ ಘಟಕ ಮತ್ತು ಹೈ ಮಾಸ್ಟ್ ದೀಪವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನಗರದ ನೆಕ್ಕುಂದಿ ಕೆರೆಯ ಅಭಿವೃದ್ಧಿಗೆ 74 ಕೋಟಿ ರೂ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಆದಷ್ಟು ಬೇಗ ಕಾಮಗಾರಿಗೆ ಚಾಲನೆ ನೀಡಲಾಗುವುದು. ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಚಿಂತಾಮಣಿಯೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಜನರ ಬೇಡಿಕೆ ಮತ್ತು ನಿರೀಕ್ಷೆಗಳು ಹೆಚ್ಚಾಗಿವೆ. ಹೀಗಾಗಿ ಎಲ್ಲರಿಗೂ ವಸತಿ ಮತ್ತಿತರ ಸೌಲಭ್ಯಗಳನ್ನು ಒದಗಿಸುವುದು ಕಷ್ಟವಾಗಿದೆ. ಹಾಗಾಗಿ ಉಪನಗರ ನಿರ್ಮಾಣದ ಯೋಜನೆ ರೂಪಿಸಲಾಗುತ್ತಿದೆ ಎಂದರು.

ನೆಕ್ಕುಂದಿ ಕೆರೆಯ ಸುತ್ತಮುತ್ತಲಿನ ಪ್ರದೇಶ, ಮುಂತಕದಿರೇನಹಳ್ಳಿ, ನಾಯನಹಳ್ಳಿ, ಧನಮಿಟ್ಟೇನಹಳ್ಳಿ ಪ್ರದೇಶಗಳಲ್ಲಿ ಈಗಾಗಲೇ ಅಧಿಕಾರಿಗಳು ಸರ್ವೆ ನಡೆಸುತ್ತಿದ್ದಾರೆ. ಸುಮಾರು 400-500 ಎಕರೆ ಪ್ರದೇಶ ಲಭ್ಯವಾಗುತ್ತದೆ. ಮದ್ಯದಲ್ಲಿ ಬರುವ ರೈತರ ಜಮೀನುಗಳಿಗೆ ಹೆಚ್ಚಿನ ಪರಿಹಾರವನ್ನು ಕೊಡಿಸಲಾಗುವುದು, ಸುಮಾರು 10 ಸಾವಿರ ನಿವೇಶನಗಳು ದೊರೆಯುವ ಅಂದಾಜಿದೆ. ಆಧುನಿಕ ಕಾಲಕ್ಕೆ ತಕ್ಕಂತೆ ಎಲ್ಲ ಸೌಲಭ್ಯಗಳುಳ್ಳ ಉಪನಗರವನ್ನು ನಿರ್ಮಾಣ ಮಾಡುವುದಾಗಿ ಹೇಳಿದರು.

ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಚಿಂತಾಮಣಿಯಲ್ಲಿ ಒಳಚರಂಡಿ ಯೋಜನೆಯನ್ನು ಅಂದಿನ ಶಾಸಕ ಚೌಡರೆಡ್ಡಿ ಮಂಜೂರು ಮಾಡಿಸಿದ್ದರು. ನಗರದ ಹೊಸ ಬಡಾವಣೆಗಳಲ್ಲಿ ಹಾಗೂ ಹಾಳಾಗಿರುವ ಕೆಲವು ಪ್ರದೇಶಗಳ ಹಳೆಯ ಒಳಚರಂಡಿ ವ್ಯವಸ್ಥೆಯನ್ನು ಬದಲಿಸಲು 52 ಕೋಟಿ ರೂ ಮಂಜೂರಾಗಿದ್ದು ಕಾಮಗಾರಿ ಚಾಲನೆಯಲ್ಲಿದೆ. ನಗರೋತ್ಥಾನ ಯೋಜನೆಯಲ್ಲಿ ರಸ್ತೆಗಳ ಕಾಮಗಾರಿ ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದರು.
ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶದಲ್ಲಿ 5 ಕೋಟಿ ರೂ ವೆಚ್ಚದಲ್ಲಿ ಸಿಮೆಂಟ್ ರಸ್ತೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೂ 10-15 ಕೋಟಿ ಅವಶ್ಯಕತೆ ಇದ್ದು, ಪ್ರಸ್ತಾವನೆ ಸಲ್ಲಿಸಲಾಗಿದೆ. ಚೊಕ್ಕರೆಡ್ಡಿಹಳ್ಳಿ ಸಮೀಪ 10 ಮಕೋಟಿ ರೂ ವೆಚ್ಚದಲ್ಲಿ ಎಸ್.ಸಿ.ಪಿ ಟ್ರೀಟ್ ಮೆಂಟ್ ಪ್ಲಾಂಟ್ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದರು.

ಬೆಂಗಳೂರು ರಸ್ತೆಯ ಎಂಜನಿಯರಿಂಗ್ ಕಟ್ಟಡ ನಿರ್ಮಾಣ ಪ್ರದೇಶದಲ್ಲಿ ಒಕ್ಕಲಿಗ ಸಂಘ, ಬಲಿಜಿಗ ಸಂಘ, ಯಾದವ ಸಂಘ, ವಿಶ್ವಕರ್ಮ ಸಂಘ, ಕನ್ನಡ ಸಂಘ , ಮುಸ್ಲಿಂ ಸಮುದಾಯ ಸೇರಿದಂತೆ ವಿವಿಧ ಜನಾಂಗ ಮತ್ತು ಸಂಸ್ಥೆಗಳ ಸಮುದಾಯ ಭವನಗಳ ನಿರ್ಮಾಣಕ್ಕಾಗಿ ಸ್ಥಳವನ್ನು ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ..? ಮಾಲೂರಿನ ಯುಕೆನ್ ಇಂಡಿಯಾ ಕಂಪನಿಯಿಂದ ಕಾರ್ಮಿಕರಿಗೆ ಕಿರುಕುಳ

ಈ ಸಂದರ್ಭದಲ್ಲಿ ನಗರ ಸಭೆ ಪೌರಾಯುಕ್ತ ಜಿ ಎನ್ ಚಲಪತಿ , ಮುಖಂಡರಾದ ಶೇಕ್ ಸಾಧಿಕ್ ರಜ್ವಿ , ಇಂತಿಯಾಜ್ ಪಾಷಾ , ಅಮುನ್‌ , ಮಾಲಿಕ್ ಪಾಷಾ, ನಗರಸಭೆಯ ಮಾಜಿ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಅಮರ್ , ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.  

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...