ಸಕಾಲದಲ್ಲಿ ದೌರ್ಜನ್ಯ ಪ್ರಕರಣಗಳ ಇತ್ಯರ್ಥ ಆಗಬೇಕು:ಎ.ಬಿ ಬಸವರಾಜು

Date:

ದೊಡ್ಡಬಳ್ಳಾಪುರ: ದೌರ್ಜನ್ಯ ಕಾಯ್ದೆಯಡಿಯಲ್ಲಿ ದಾಖಲಾಗುವ ಪ್ರಕರಣಗಳಿಗೆ ತ್ವರಿತವಾಗಿ ಸ್ಪಂದಿಸಿ ಸೂಕ್ತ ನ್ಯಾಯ ದೊರಕಿಸಿಕೊಡುವುದರ ಜೊತೆಗೆ ನೊಂದವರಿಗೆ ಸಕಾಲದಲ್ಲಿ ವಿಳಂಬವಿಲ್ಲದೆ ಪರಿಹಾರಧನ ಮಂಜೂರಾತಿಗೆ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಹೇಳಿದರು.

- Advertisement -

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2025 ನೇ ಸಾಲಿನ 4 ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ, ಪಿಇಎಂಎಸ್ ಮತ್ತು ಆರ್ ಕಾಯ್ದೆ-2013 ರ ಸಮಿತಿ ಸಭೆ ಹಾಗೂ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪೊಲೀಸ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭೇಟಿ ನೀಡಿ ಜನರಲ್ಲಿ ಕಾನೂನಿನ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡುವ ಪ್ರಯತ್ನ ಮಾಡಬೇಕು. ದೌರ್ಜನ್ಯ ನಿಯಂತ್ರಣದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಏರ್ಪಡಿಸಿಸಬೇಕು ಎಂದರು.

11 ದೌರ್ಜನ್ಯ ಪ್ರಕರಣ ದಾಖಲು
ಅಕ್ಟೋಬರ್ 1 ರಿಂದ ಇಲ್ಲಿಯವರೆಗೂ ಒಟ್ಟು 11 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿ 11 ಪ್ರಕರಣಗಳಲ್ಲಿ ನೊಂದ 20 ಸಂತ್ರಸ್ತರಿಗೆ ಒಟ್ಟು 5.85 ಲಕ್ಷ ರೂ.ಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಉಪನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

ಸಫಾಯಿ ಕರ್ಮಚಾರಿಗಳಿಗೆ ನಿವೇಶನ ಹಂಚಿಕೆ
ನಗರ ಪ್ರದೇಶಗಳಲ್ಲಿ ನಿವೇಶನ, ಮನೆ ಒದಗಿಸಲು ಮೊದಲ ಆದ್ಯತೆಯಾಗಿ ಸಫಾಯಿ ಕರ್ಮಚಾರಿಗಳನ್ನು ಪರಿಗಣಿಸಲಾಗುವುದು ಮನೆಗಳಿಲ್ಲದೆ ಇರುವ ಸಫಾಯಿ ಕರ್ಮಚಾರಿಗಳಿಗೆ ನಿವೇಶನವನ್ನು ಶೀಘ್ರವಾಗಿ ಒದಗಿಸಲಾಗುವುದು. ಅವರ ಕುಟುಂಬಗಳಿಗೆ ವ್ಯಾಪಾರ, ವ್ಯವಹಾರಕ್ಕಾಗಿ ವಿವಿಧ ಕೌಶಲ್ಯ ತರಬೇತಿ, ಮಾರ್ಗದರ್ಶನ ನೀಡಿ ಸರ್ಕಾರದಿಂದ ಸಿಗುವಂತಹ ಸಾಲ ಸೌಲಭ್ಯ ಕಲ್ಪಿಸಿ ಕೆಲಸಕ್ಕೆ ಬೇಕಾಗುವ ಅಗತ್ಯ ಪರಿಕರಗಳನ್ನು ಅವರಿಗೆ ಒದಗಿಸುವುದರ ಜೊತೆಗೆ ವೇತನ ಪಾವತಿಯಲ್ಲಿ ವಿಳಂಬವಾಗದಂತೆ ಕ್ರಮ ವಹಿಸಿ ಎಂದರು.

ಜಿಲ್ಲಾ ಪೋಲಿಸ್ ವರಷ್ಠಾಧಿಕಾರಿ ಸಿ.ಕೆ ಬಾಬಾ ಅವರು ಮಾತಾನಾಡಿ ಸಮಾಜದಲ್ಲಿ ಸಮಾನತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವ್ಯಕ್ತಿಗಳ ಹಕ್ಕುಗಳನ್ನು ರಕ್ಷಿಸುವುದು. ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಮತ್ತು ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ಸಾಮಾಜಿಕ ನ್ಯಾಯದ ಮುಖ್ಯ ಉದ್ದೇಶವಾಗಿರುತ್ತದೆ ಹಾಗಾಗಿ ದೌರ್ಜನ್ಯವಾದರೆ ಅಥವಾ ದೌರ್ಜನ್ಯ ಕಂಡು ಬಂದರೆ ಯಾವುದೇ ರೀತಿಯ ಭಯ ಪಡದೇ ದೂರು ನೀಡಿದರೆ ಅಗತ್ಯ ವೈದ್ಯಕೀಯ ಸೇವೆ ಒದಗಿಸಿ ರಕ್ಷಣೆ ನೀಡಿ ಸಂತ್ರಸ್ತರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಲಾಗುತ್ತದೆ ಎಂದರು.

ಇದನ್ನು ಓದಿದ್ದೀರಾ..? ನರಸಾಪುರದಲ್ಲಿ ಅಂಬೇಡ್ಕರ್ ವೃತ್ತ ಹೆಸರಿಡಲು ಕನ್ನಡ ಸೇನೆ ಒತ್ತಾಯ

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ಎನ್.ಅನುರಾಧ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಟಿ.ಎಲ್.ಎಸ್. ಪ್ರೇಮ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಾಗೃತಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...