ಸಿಟಿಜನ್ ವೆಲ್ ಫೇರ್ ಫೋರಂ ಅಸೋಸಿಯೇಷನ್ ವತಿಯಿಂದ ಸಂಕ್ರಾಂತಿ ಸಂಭ್ರಮ.

Date:

ಚಿಂತಾಮಣಿ : ನಗರದ ರಾಜೀವ್ ಬಡಾವಣೆಯ ಸಿಟಿಜನ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಸಂಕ್ರಾಂತಿ ಸಂಭ್ರಮ 2026,ಸಂಭ್ರಮದ ಸುಗ್ಗಿ ಹಬ್ಬವನ್ನು ವಿವಿಧ ಚಟುವಟಿಕೆಗಳ ಮೂಲಕ ಅದ್ದೂರಿಯಾಗಿ ಆಚರಿಸಲಾಯಿತು.

- Advertisement -

ಮುಂಜಾನೆ 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೂ ಸಡಗರ ಸಂಭ್ರಮದಿಂದ ವಿವಿಧ ಕಾರ್ಯಕ್ರಮಗಳು ನಡೆದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಜೀವನಗರ ಬಡಾವಣೆಯ ರಸ್ತೆಗಳಿಗೆ ಸೋಮವಾರವೇ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.ಬೆಂಗಳೂರು ರಸ್ತೆಯಿಂದ ಪ್ರವೇಶದ್ವಾರ, 30 ಅಡಿ ರಸ್ತೆ ಸೇರಿದಂತೆ ಬಡಾವಣೆಯ ವಿವಿಧ ರಸ್ತೆಗಳು ವಿದ್ಯುತ್ ದೀಪಗಳಿಂದt ಜಗಮಗಿಸುತ್ತಿವೆ.ಮೂರು ದಿನಗಳ ಕಾಲ ವಿದ್ಯುತ್ ದೀಪಾಲಂಕಾರ ನೋಡುಗರ ಮನತಣಿಸಲಿವೆ.

ನಾಡಿನ ಸಂಸ್ಕೃತಿ ಮತ್ತು ಪರಂಪರೆ ಹಾಗೂ ಹಳ್ಳಿಯ ಸೊಬಗನ್ನು ಪ್ರತಿಬಿಂಬಿಸುವ ಪ್ರಮುಖ ಹಬ್ಬಗಳಲ್ಲಿ ಸಂಕ್ರಾಂತಿಯ ಹಬ್ಬದಲ್ಲಿ ಬಡಾವಣೆಯ ಜನರು ಸಡಗರ ಸಂಭ್ರಮದಿಂದ ಭಾಗವಹಿಸಿದ್ದರು.

ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು. ನೂರಾರು ಸಂಖ್ಯೆಯಲ್ಲಿ ಮಹಿಳೆಯರು 30 ಅಡಿ ರಸ್ತೆಯಲ್ಲಿ ಬಣ್ಣ ಬಣ್ಣದ ಚಿತ್ತಾರಗಳಲ್ಲಿ ಆಕರ್ಷಣೀಯವಾದ ರಂಗೋಲಿಗಳನ್ನು ಬಿಡಿಸಿದ್ದರು
ಗ್ರಾಮೀಣ ಆಟಗಳಾದ ಪುರುಷರಿಗೆ ಮಡಿಕೆ ಒಡೆಯುವುದು ಗೋಣಿ ಚೀಲದ ಓಟ ಹಗ್ಗ ಜಗ್ಗಾಟ ಮಡಿಕೆ ಹೊಡೆಯುವುದು,ಲೆಮನ್ ಅಂಡ್ ಸ್ಪೂನ್ ನಡಿಗೆ,ಮ್ಯೂಜಿಕಲ್ ಚೇರ್,ಹಗ್ಗ ಜಗ್ಗಾಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಮಹಿಳೆಯರು,ಪುರುಷರು ಸಂತಸದಿಂದ ಆಟಗಳಲ್ಲಿ ಭಾಗವಹಿಸಿ ಬಾಲ್ಯತನದ ಮೆಲಕು ಹಾಕಿದರು.ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆಯನ್ನು ಎರಡು ವಿಭಾಗಗಳಾಗಿ ವಿಂಗಡಿಸಿದ್ದು1 ರಿಂದ 5 ನೇ ತರಗತಿ ಹಾಗೂ 6 ರಿಂದ 10 ನೇ ತರಗತಿ ಮಕ್ಕಳು ಭಾಗವಹಿಸಿದ್ದರು.

ಅಸೋಸಿಯೇಷನ್ ವತಿಯಿಂದ ಪ್ರತಿ ತಿಂಗಳು ಸ್ವಚ್ಚತಾ ಕಾರ್ಯಕ್ರಮ,ದೇಶೀಯ ಸಂಸ್ಕೃತಿ ಮತ್ತು ಪರಂಪರೆಯ ಅರಿವನ್ನು ಮೂಡಿಸುವ ಸಲುವಾಗಿ ಎಲ್ಲ ಹಬ್ಬಗಳನ್ನು ಸಾಮೂಹಿಕವಾಗಿ ಆಚರಣೆ ಮಾಡುತ್ತಿದ್ದೇವೆ. ಸ್ವಚ್ಛತೆಯ ಕಡೆಗೆ ನಮ್ಮ ನಡಿಗೆ ಎಂಬ ಘೋಷ ವಾಕ್ಯದೊಂದಿಗೆ 9 ವರ್ಷಗಳಿಂದ ಪ್ರತಿ ತಿಂಗಳು ಮೊದಲ ಭಾನುವಾರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರಲಾಗುತ್ತಿದೆ ಎಂದು ಕಾರ್ಯದರ್ಶಿ ಕೃಷ್ಣಾರೆಡ್ಡಿ ತಿಳಿಸಿದರು.

ಸಂಜೆ ಸುಂದರವಾಗಿ ಅಲಂಕೃತಗೊಂಡಿದ್ದ ತಮಟೆಯೊಂದಿಗೆ ಅಲಂಕೃತ ರಾಸುಗಳ ಮೆರವಣಿಗೆ ಹಾಗೂ ಕಿಚ್ಚು ಹಾಯಿಸುವ ಕಾರ್ಯಕ್ರಮ ನಡೆಯಿತು. ಕಿಚ್ಚು ಹಾಯಿಸುವ ಕಾರ್ಯಕ್ರಮ ತೀವ್ರ ಕುತೂಹಲ ಮೂಡಿಸಿತ್ತು. ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಇದನ್ನು ಓದಿದ್ದೀರಾ..?ಶಿಡ್ಲಘಟ್ಟ | ಪೌರಾಯುಕ್ತೆಗೆ ಬೆದರಿಕೆ: ಕಾಂಗ್ರೆಸ್ ಮುಖಂಡನ ಬಂಧನಕ್ಕೆ ಪೌರಕಾರ್ಮಿಕರ ಆಗ್ರಹ

ಸಿಟಿಜನ್ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಶಂಕರರೆಡ್ಡಿ,ಕಾರ್ಯದರ್ಶಿ ಕೃಷ್ಣಾರೆಡ್ಡಿ ಹಾಗೂ ಪದಾಧಿಕಾರಿಗಳು,ಬಡಾವಣೆಯ ಮುಖಂಡರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...