ಹೋರಾಟ ನಡೆಯದಿದ್ದರೆ ಕನ್ನಡ ಉಳಿವು ಕಷ್ಟ

Date:

ಕೋಲಾರ: ಎರಡೂವರೆ ಸಾವಿರ ವರ್ಷಗಳ ಇತಿಹಾಸ ಇರುವ ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಬೇಕಿದೆ. ಅನ್ಯಭಾಷಿಕರನ್ನು ಕನ್ನಡ ಭಾಷೆಗೆ ಕರೆ ತರುವಂತಾಗಬೇಕು. ಇಲ್ಲವಾದಲ್ಲಿ ಯುವ ಪೀಳಿಗೆಗೆ ದ್ರೋಹ ಬಗೆದಂತಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್ ತಿಳಿಸಿದರು.

- Advertisement -

ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಆದಿಮ ಸಾಂಸ್ಕೃತಿಕ ಕೇಂದ್ರ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಕಾರದಲ್ಲಿ ಹಮ್ಮಿಕೊಂಡಿದ್ದ ‘ಕನ್ನಡ ಭಾಷಾ ಬೆಳವಣಿಗೆ ಮತ್ತು ಸವಾಲುಗಳು’ ಕುರಿತು ವಿಚಾರ ಸಂಕಿರಣ ಉದ್ಘಾಟಿಸಿದ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕನ್ನಡ ಭಾಷೆ ಬೆಳವಣಿಗೆಯಲ್ಲಿ ಸರ್ಕಾರದ ನಿಲುವು ಮತ್ತು ಆದೇಶಗಳು ಕುರಿತು ಮಾತನಾಡಿ, ಕೋಲಾರ ಜಿಲ್ಲೆಯು ಕನ್ನಡ ಹೋರಾಟದ ಕೇಂದ್ರವಾಗಿ ಗುರುತಿಸಿಕೊಂಡಿದೆ. ರಾಜ್ಯದ ಗಡಿ ಭಾಗವಾಗಿದ್ದು, ತೆಲುಗು, ತಮಿಳು, ಊರ್ದು ಮತ್ತು ಕನ್ನಡ ಸೇರಿ ನಾಲ್ಕು ಭಾಷೆಗಳು ಸಮಾಗಮವಾಗಿ ವಿಶೇಷತೆಯಿಂದ ಕೂಡಿದೆ ಎಂದರು.

ಕನ್ನಡ ಭಾಷೆಯು ಕಗ್ಗೊಲೆಯಾಗಿ ಅವನತಿಗೆ ತಲುಪುತ್ತಿರುವುದನ್ನು ತಡೆಯುವ ಶಕ್ತಿ ಯುವ ಜನತೆಗೆ ಇದೆ. ಕರ್ನಾಟಕದಲ್ಲಿರುವ ಎಲ್ಲರೂ ಕನ್ನಡಿಗರೇ ಅಗಿದ್ದರೂ ಕನ್ನಡ ಭಾಷೆ ನಿರೀಕ್ಷೆಯಷ್ಟು ಸಮೃದ್ಧವಾಗಿಲ್ಲ. ಹೊರ ರಾಜ್ಯದ ಸಾಮಾನ್ಯ ವ್ಯಕ್ತಿಗೆ ಇರುವಷ್ಟು ಕನ್ನಡ ಭಾಷೆಯ ಮೇಲೆ ಕಾಳಜಿ ನಮ್ಮಲ್ಲಿ ಇಲ್ಲವಾಗಿದೆ. 2011ರ ದಕ್ಷಿಣ ಭಾರತದ ಸಮೀಕ್ಷೆ ಪ್ರಕಾರ ಹಿಂದಿ ಬೆಳವಣಿಗೆ ಶೇ 63ರಷ್ಟಿದ್ದರೆ, ಕನ್ನಡ ಭಾಷೆ ಬೆಳವಣಿಗೆ ಕೇವಲ ಶೇ 3.6ರಷ್ಟಿರುವುದು ಆತಂಕಕಾರಿಯಾಗಿದೆ ಎಂದು ಹೇಳಿದರು.

ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆಗೆ 100ರ ಸಂಭ್ರಮದ ಜನಾಂದೋಲವನ್ನಾಗಿ ರೂಪಿಸಲು ತಮ್ಮ ಅಭಿಪ್ರಾಯಗಳನ್ನು ಮುಖ್ಯಮಂತ್ರಿಗೆ ಪತ್ರ ಮೂಲಕ ತಿಳಿಸಿ ಎಂದು ಕೋರಿದರು.

ಕನ್ನಡ ಅಭಿವೃದ್ದಿ ಪ್ರಾಧಿಕಾರ ಸದಸ್ಯ ಟಿ.ತಿಮ್ಮೇಶ್, ‘ಕನ್ನಡಿಗರು ಪರೋಪಕಾರಿಗಳು. ಬದುಕು ಕಟ್ಟಿಕೊಳ್ಳಲು ರಾಜ್ಯಕ್ಕೆ ಬರುವ ಹೊರಗಿನವರಿಗೆ ಕನ್ನಡ ಕಲಿಸದೆ ಅವರದೇ ಭಾಷೆಯಲ್ಲಿ ಮಾತನಾಡಿ ಹೊಂದಾಣಿಕೆ ಮಾಡಿಕೊಳ್ಳುವ ಉದಾರತೆ ಕನ್ನಡಿಗರ ಸಂಸ್ಕೃತಿಯಾಗಿದೆ. ಇದೇ ಈಗ ನಮ್ಮ ಭಾಷೆಯ ಬೆಳವಣಿಗೆಗೆ ತೊಡಕಾಗಿದೆ. ಕನ್ನಡ ಕಲಿಸುವ ಮೂಲಕ ಬೆಳವಣಿಗೆಗೆ ಪ್ರೇರಣೆಯಾಗಬೇಕಾಗಿದೆ’ ಎಂದು ಹೇಳಿದರು.

ಗಟ್ಟಿ ಸೌಧದ ಮೇಲೆ ಕಟ್ಟಿದ ಕನ್ನಡ ಎಂದೂ ಕುಸಿಯುವುದಿಲ್ಲ. ಪ್ರತಿಯೊಬ್ಬರೂ ಕನ್ನಡ ಬಾರದವರಿಗೆ ಕನ್ನಡ ಕಲಿಸುವಂತಾಗಬೇಕು. ನವೆಂಬರ್ ತಿಂಗಳು ಮಾತ್ರ ಕನ್ನಡಿಗರಾಗದೆ ವರ್ಷವಿಡೀ ಕನ್ನಡಿಗರಾಗಿರಬೇಕು. ಕೈಗಾರಿಕೆಗಳಲ್ಲಿ ಶೇ 60 ಸ್ಥಳೀಯ ಕನ್ನಡಿಗರಿಗೆ ಮೀಸಲು ಇರಬೇಕು. ಎಲ್ಲೆಡೆ ಕನ್ನಡದ ಫಲಕಗಳು ರಾರಾಜಿಸಬೇಕು. ಕನ್ನಡ ಶಾಲೆಗಳಿಗೆ ವಿಶೇಷ ಆದ್ಯತೆ ಸಿಗುವಂತಾಗಬೇಕು ಎಂದು ತಿಳಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್ ಕನ್ನಡ ಓದು-ಮಾಧ್ಯಮಗಳ ಕುರಿತು ಉಪನ್ಯಾಸ ನೀಡಿದರು. ‘ಪತ್ರಿಕೆಗಳು ಮತ್ತು ಮಾಧ್ಯಮಗಳು ಒಂದೇ ನಾಣ್ಯದ ಎರಡು ಮುಖಗಳು. ಪತ್ರಿಕೆಗಳು ಓದುವಿಕೆಯಿಂದ ಭಾಷೆ ಶುದ್ಧತೆ, ಬೆಳವಣಿಗೆ ಸಾಧ್ಯವಾಗಲಿದೆ. ಇಂದು ಪತ್ರಿಕೆಗಳು ಓದುವಿಕೆ ಶೇ 50ರಷ್ಟು ಕ್ಷೀಣಿಸುತ್ತಿರುವುದು ಕಳವಳಕಾರಿಯಾಗಿದೆ’ ಎಂದರು.

ಸಾಮಾಜಿಕ ಜಾಲತಾಣಗಳಿಂದ ಮಾಧ್ಯಮಗಳಿಗೆ ಮಂಕು ಕವಿದಿದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಮಕ್ಕಳಲ್ಲಿ ಕನ್ನಡ ಬೆಳೆಸುವಂಥ ಕಾಳಜಿ ಪೋಷಕರು ಮತ್ತು ಶಿಕ್ಷಕರಲ್ಲಿ ಇಲ್ಲವಾಗಿದೆ ಎಂದು ತಿಳಿಸಿದರು.

ಆದಿಮ ಸಾಂಸ್ಕೃತಿಕ ಕೇಂದ್ರದ ಕಾರ್ಯದರ್ಶಿ ಹ.ಮಾ.ರಾಮಚಂದ್ರ ಚಳವಳಿಗಳು ಮತ್ತು ಭಾಷಾ ಪ್ರಾಧಾನ್ಯ ಕುರಿತು ಮಾತನಾಡಿದರು. ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಮುನಿಶಾಮಪ್ಪ ಆಶಯ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾಧ್ಯಕ್ಷ ಎನ್.ಬಿ.ಗೋಪಾಲಗೌಡ ಭಾಗವಹಿಸಿದ್ದರು.

ಕನ್ನಡ ಪರ ಚಿಂತಕಿ ಕೆ.ವಿ.ನೇತ್ರಾವತಿ ಗಡಿಯಲ್ಲಿನ ಕನ್ನಡ ಶಾಲಾ ಕಾಲೇಜುಗಳ ವಸ್ತುಸ್ಥಿತಿ ಕುರಿತು ಉಪನ್ಯಾಸ ನೀಡಿದರು. ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಜೆ.ಜಿ.ನಾಗರಾಜ್ ನಿರೂಪಿಸಿದರೆ, ನಡುಪಳ್ಳಿ ಮಂಜುನಾಥ್ ಸ್ವಾಗತಿಸಿದರು.

ಇದನ್ನು ಓದಿದ್ದೀರಾ..? ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆ, ಕಾರ್ಮಿಕರ ಹಕ್ಕುಗಳಿಗೆ ಒಗ್ಗಟ್ಟು ಮುಖ್ಯ: ಹೆಚ್ ಎನ್ ಗೋಪಾಲಗೌಡ

ಕನ್ನಡ ಪರ ಸಂಘಟನೆಗಳ ಒಕ್ಕೂ ಟದ ಜಿಲ್ಲಾಧ್ಯಕ್ಷ ಅ.ಕೃ. ಸೋಮಶೇಖರ್, ಕ.ರ.ವೇ ಜಿಲ್ಲಾಧ್ಯಕ್ಷ ಮೇಡಿಹಾಳ ರಾಘವೇಂದ್ರ, ಜಯಕರ್ನಾಟಕ ಸಂಘ ಅಧ್ಯಕ್ಷ ಕೆ.ಆರ್.ತ್ಯಾಗರಾಜ್. ಶರಣ ಸಾಹಿತ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ ಬಿ.ಸುರೇಶ್, ಪರಿಸರ ವಿಜ್ಞಾನ ಲೇಖಕ ಎಚ್.ಎ.ಪುರುಷೋತ್ತಮರಾವ್, ಚುಸಾಪ ಜಿಲ್ಲಾಧ್ಯಕ್ಷ ಪಿ.ನಾರಾಯಣಪ್ಪ, ಕರವೇ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್, ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಬಾ.ಹ.ಶೇಖರಪ್ಪ, ಕ‌ಸಾಪ ಪದಾಧಿಕಾರಿಗಳಾದ ಆರ್.ಶಂಕರಪ್ಪ, ಸುಬ್ಬರಾಮಯ್ಯ, ಮಂಜುಳಾ, ಕನ್ನಡ ಉಪನ್ಯಾಸಕ ಮುನಿವೆಂಕಟ ಸ್ವಾಮಿ, ರಾಜಪ್ಪ ಇದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...