ಕೆಕೆಆರ್‌ಡಿಬಿಯಿಂದ ಅರಣ್ಯ ಇಲಾಖೆಗೆ ₹30 ಕೋಟಿ ಅನುದಾನ ಬಿಡುಗಡೆ: ಸಚಿವ ಪ್ರಿಯಾಂಕ್ ಖರ್ಗೆ

Date:

Advertisements

ಕಲ್ಯಾಣ ಕರ್ನಾಟಕ‌ ಅಭಿವೃದ್ದಿ ನಿಗಮದ ವತಿಯಿಂದ ಅರಣ್ಯ ಇಲಾಖೆಗೆ 30 ಕೋಟಿ ರೂ. ಅನುದಾನ‌ ಬಿಡುಗಡೆ ಮಾಡಲಾಗುತ್ತಿದ್ದು, ಅದನ್ನು ಬಳಸಿಕೊಂಡು ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಅರಣ್ಯ ಇಲಾಖೆಯ ವತಿಯಿಂದ ಕಲಬುರಗಿಯ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ರಾಜ್ಯಮಟ್ಟದ ಅರಣ್ಯ ಕ್ರೀಡಾಕೂಟದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಕೆಕೆಆರ್‌ಡಿಬಿಯಿಂದ ₹30 ಕೋಟಿ ಅಲ್ಲದೇ ಇನ್ನೂ ಬೇಕಾಗುವ ಅನುದಾನ ಬಿಡುಗಡೆ ಮಾಡಲು ಮಾನ್ಯ ಅರಣ್ಯ ಸಚಿವರಿಗೆ ಮನವಿ ಸಲ್ಲಿಸಿ. ಪ್ರಕೃತಿಯ ಆಸ್ತಿಯನ್ನು ಕಾಪಾಡುವ ಅರಣ್ಯ ಸಿಬ್ಬಂದಿಗಳ ಕಾರ್ಯಕ್ಷಮತೆ ದೇಶದ ಗಡಿ ಕಾಯುವ ಸೈನಿಕರ ಸೇವೆಗೆ ಸಮಾನವಾದುದು ಎಂದು ಶ್ಲಾಘಿಸಿದರು.

Advertisements

“ನೈಸರ್ಗಿಕ ವಿಕೋಪ, ವನ್ಯ ಜೀವಿಗಳ ನಡುವಿನ ಸಂಘರ್ಷ, ಅರಣ್ಯ ಚೋರರ ವಿರುದ್ದದ ಕಾರ್ಯಾಚರಣೆ ಸೇರಿದಂತೆ ಹಲವಾರು ಅಡೆತಡೆಗಳ ನಡುವೆ ಕೆಲಸ ಮಾಡುವ ನಿಮ್ಮ ಸೇವೆಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿದೆ. ನಾವು ವನ್ಯಜೀವಿಗಳ ಬಗ್ಗೆ ತೋರಿಸುವ ಕಾಳಜಿ ಅರಣ್ಯ ಸಿಬ್ಬಂದಿಗಳಿಗೂ ತೋರಿಸಬೇಕಿದೆ” ಎಂದು ಸಚಿವರು ತಿಳಿಸಿದರು.

ಇದನ್ನು ಓದಿದ್ದೀರಾ? ಹುಬ್ಬಳ್ಳಿ | ಬೆಳ್ಳಂಬೆಳಗ್ಗೆ ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಸರಣಿ ಅಪಘಾತ; ನಾಲ್ವರು ಸ್ಥಳದಲ್ಲೇ ಮೃತ್ಯು

“ಮಾನವ ಹಾಗೂ ವನ್ಯಜೀವಿಗಳ ಸಂಘರ್ಷ ನಿಲ್ಲಬೇಕು ಎನ್ನುವುದು ಎಲ್ಲರ ಕೂಗು. ಆದರೆ, ನಿಮಗೆ ಸರಿಯಾದ ಸೌಕರ್ಯ ಕೊಟ್ಟಾಗ ಮಾತ್ರ ಸಂಘರ್ಷ ತಡೆಯಲು ಅನುಕೂಲವಾಗುತ್ತದೆ‌. ಹಾಗಾಗಿ, ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿಂದ ಅಗತ್ಯ ಅನುದಾನ ಬಿಡುಗಡೆ ಮಾಡಲು ಬದ್ಧ” ಎಂದರು.

“ಸುಮಾರು 2 ದಶಕಗಳ ನಂತರ ಕಲಬುರಗಿಯಲ್ಲಿ ಕ್ರೀಡಾ ಕೂಟ ನಡೆಯುತ್ತಿದೆ. ರಾಜ್ಯದ 13 ವೃತ್ತಗಳಿಂದ 1,200 ಕ್ಕೂ ಸ್ಪರ್ಧಾಳುಗಳು ಭಾಗಿಯಾಗಿ, ಒಟ್ಟು 271 ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅವರಿಗೆ ನನ್ನ ಶುಭಾಶಯಗಳು” ಎಂದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಪೊಲೀಸ್ ಕಮೀಷನರ್ ಆರ್ ಚೇತನ್, ಎಸ್ ಪಿ ಅಡ್ಡೂರು ಶ್ರೀನಿವಾಸಲು, ಸುದರ್ಶನ್, ಬ್ರಿಜೇಶ್ ಕುಮಾರ, ಬಿಶ್ವಜಿತ್ ಮಿಶ್ರಾ, ಶಾಶ್ವತಿ ಮಿಶ್ರ ಸೇರಿದಂತೆ ಹಲವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X