ಬೀದರ್‌ | ಕಳೆದ ವರ್ಷ ಜಿಲ್ಲೆಯಲ್ಲಿ 1097 ರಸ್ತೆ ಅಪಘಾತ; ಸಾವಿನ ಹಾದಿಗೆ 330 ಮಂದಿ

Date:

ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ದಿನನಿತ್ಯ ಒಂದಲ್ಲಾ ಒಂದು ಕಡೆಯಲ್ಲಿ ರಸ್ತೆ ಅಪಘಾತದಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೆಲವರು ಕೈ, ಕಾಲು ಶಾಶ್ವತವಾಗಿ ಕಳೆದುಕೊಂಡರೆ ಇನ್ನು ಕೆಲವರು ಗಾಯಾಳುಗಳಾಗುತ್ತಿದ್ದಾರೆ.

- Advertisement -

ಕಳೆದ ವರ್ಷ 2023ರಲ್ಲಿ ರಾಜ್ಯದಲ್ಲಿ ಬರೋಬ್ಬರಿ 43,440 ಅಪಘಾತಗಳಲ್ಲಿ 52,531 ಜನಗಾಯಗೊಂಡಿದ್ದರೇ, 12,327 ಜನ ಸಾವನ್ನಪ್ಪಿದ್ದಾರೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ (ತರಬೇತಿ) ಅಲೋಕ್ ಕುಮಾರ್ ಮಾಹಿತಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“2023ರಲ್ಲಿ ಬೀದರ್‌ ಜಿಲ್ಲೆಯಲ್ಲಿ ಒಟ್ಟು 1097 ರಸ್ತೆ ಅಪಘಾತಗಳು ಸಂಭವಿಸಿವೆ. ಈ ಪೈಕಿ 330 ಮಾರಣಾಂತಿಕ ಅಪಘಾತ ಸಂಭವಿಸಿದರೇ, 767 ಮಾರಣಾಂತಿಕವಲ್ಲದ ಅಪಘಾತಗಳು ಸಂಭವಿಸಿವೆ. ಕಳೆದ ವರ್ಷ ಸಂಭವಿಸಿದ 1097 ಅಪಘಾತಗಳಲ್ಲಿ 1404 ಜನಗಾಯಗೊಂಡಿದ್ದರೇ, 335 ಜನ ಸಾವನ್ನಪ್ಪಿದ್ದಾರೆ” ಎಂಬ ಅಂಕಿಅಂಶಗಳ ಮಾಹಿತಿಯ ಕೋಷ್ಠಕವನ್ನು ಅಲೋಕ್ ಕುಮಾರ್ ʼಎಕ್ಷ್‌ʼ ನಲ್ಲಿ ಹಂಚಿಕೊಂಡಿದ್ದಾರೆ.

https://x.com/alokkumar6994/status/1768228972888740312?s=20

ಕಳೆದ ವರ್ಷ ಕರ್ನಾಟಕದಲ್ಲಿ ಪ್ರತಿದಿನ 34 ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಾರಣಾಂತಿಕ ಅಪಘಾತಗಳಲ್ಲಿ 5% ಹೆಚ್ಚಳವಾಗಿದೆ. ಅಜಾಗರೂಕ ಚಾಲನೆ, ಕಳಪೆ ಚಾಲನಾ ಕೌಶಲ್ಯ, ಕಳಪೆ ರಸ್ತೆಗಳು, ಪಾದಚಾರಿಗಳಿಗೆ ಅಸಮರ್ಪಕ ಸೌಲಭ್ಯ ಸೇರಿದಂತೆ ಇನ್ನಿತರ ಅಂಶಗಳು ಅಪಘಾತಗಳಿಗೆ ಕಾರಣಗಳಾಗಿವೆ. ಸದ್ಯ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

ಸಾರ್ವಜನಿಕರು ತಮ್ಮ ಅಮೂಲ್ಯವಾದ ಜೀವ ರಕ್ಷಣೆಗೆ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಮತ್ತು ಕಾರು ಚಾಲನೆ ಮಾಡುವಾಗ ಸೀಟ್ ಬೆಲ್ಟ್‌ ಧರಿಸುವುದನ್ನು ಮರೆಯಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅವರ ನೇತ್ರತ್ವದಲ್ಲಿ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸುತ್ತಿದ್ದರೂ ವಾಹನ ಸವಾರರು ಕಿವಿಗೊಡದೆ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವುದು ಹೆಚ್ಚಿನ ಅಪಘಾತಗಳಿಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...