ಕಲಬುರಗಿ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹1.90 ಕೋಟಿ ನಗದು ವಶ

Date:

  • ಕಲಬುರಗಿ ಜಿಲ್ಲೆಯಾದ್ಯಂತ 42 ಕಡೆ ಚೆಕ್‌ಪೋಸ್ಟ್ ಸ್ಥಾಪನೆ
  • ನಗದು ಜೊತೆಗೆ ಅಕ್ರಮ ಮದ್ಯ ಮತ್ತು ಕೆಲವು ವಸ್ತುಗಳ ವಶ

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಕಲಬುರಗಿ ಜಿಲ್ಲೆಯಲ್ಲಿ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದೆ. ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಂದಾಜು ₹1.90 ಕೋಟಿ ನಗದನ್ನು ಚೆಕ್‌ಪೋಸ್ಟ್‌ಗಳಲ್ಲಿ ಬುಧವಾರ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ ಗುರುಕರ್ ತಿಳಿಸಿದ್ದಾರೆ.

ಕಿಣ್ಣಿಸಡಕ್ ಚೆಕ್‌ಪೋಸ್ಟ್ ಬಳಿ ₹1.40 ಕೋಟಿ, ಜೇವರ್ಗಿ ಚೆಕ್‌ಪೋಸ್ಟ್ ನಲ್ಲಿ ₹50 ಲಕ್ಷ ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಹಣದ ಜೊತೆಗೆ ಸಾಗಿಸುತ್ತಿದ್ದ ಅಕ್ರಮ ಮದ್ಯ ಹಾಗೂ ಕೆಲವು ವಸ್ತುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಆರಂಭವಾಗಿದ್ದು, ಕಲಬುರಗಿ ಜಿಲ್ಲಾಡಳಿತ ಜಿಲ್ಲೆಯಾದ್ಯಂತ 42 ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | 24 ಪುಟಗಳ ಡೆತ್‌ನೋಟ್ ಬರೆದು ಯುವತಿ ಆತ್ಮಹತ್ಯೆ

ಯುವತಿಯೊಬ್ಬರು 24 ಪುಟಗಳ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ದಕ್ಷಿಣ...

ಕರಾವಳಿ ಭಾಗದಲ್ಲಿ ನೀರಿನ ಅಭಾವ; ಹಲವು ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ಥನೆ

ಕರಾವಳಿ ಭಾಗದಲ್ಲಿ ನೀರು ಕೊರತೆ ಉಂಟಾಗಿದ್ದು, ದೇವಸ್ಥಾನಗಳಲ್ಲಿ ಅಭಿಷೇಕಕ್ಕೂ ನೀರಿಲ್ಲದೆ ಜಲಕ್ಷಾಮ...

ಸಂಘಪರಿವಾರದ ಹೇಡಿಗಳಿಗೆ ಪಠ್ಯದಲ್ಲಿ ಜಾಗವಿಲ್ಲ: ಬಿಕೆ ಹರಿಪ್ರಸಾದ್

ಸಂಘಪರಿವಾರದ ಹೇಡಿಗಳ ಪಠ್ಯಗಳನ್ನು ಪಠ್ಯಪುಸ್ತಕಗಳಲ್ಲಿ ಉಳಿಸುವುದಿಲ್ಲ. ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡ್ಗೇವಾರ್ ಸೇರಿದಂತೆ...

ಬಿಡಿಎ ಅಧ್ಯಕ್ಷರಾಗಿ ಐಎಎಸ್‌ ಅಧಿಕಾರಿ ರಾಕೇಶ್‌ ಸಿಂಗ್‌ ನೇಮಕ

ಬಿಡಿಎ ಅಧ್ಯಕ್ಷ ಸ್ಥಾನಕ್ಕಾಗಿ ಶಾಸಕರ ನಡುವೆ ಪೈಪೋಟಿ ರಾಜಕಾರಣಿಗಳ ನೇಮಕಕ್ಕೆ ಅಂತ್ಯವಾಡಿದ...