ಚಿಕ್ಕಬಳ್ಳಾಪುರ | ಕೋಟಿ ರೂ. ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡ ಜಿಲ್ಲಾಸ್ಪತ್ರೆ

Date:

ಸ್ಥಳೀಯ ಆಡಳಿತ ಸಂಸ್ಥೆಗಳು ಗ್ರಂಥಾಲಯ ಕರ ಬಾಕಿ ಉಳಿಸಿಕೊಳ್ಳುವುದು ಒಂದೆಡೆಯಾದರೆ, ಮತ್ತೊಂದೆಡೆ ಸರಕಾರಿ ಇಲಾಖೆಗಳು ಅನುದಾನ ಇದ್ದರೂ ಕೋಟ್ಯಾಂತರ ರೂ. ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಳ್ಳುತ್ತಿವೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯು ಒಂದು ಕೋಟಿಗೂ ಅಧಿಕ ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿರುವುದು ಇದಕ್ಕೆ ನಿದರ್ಶನವಾಗಿದೆ.

- Advertisement -

ಹೌದು, ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯು ಸುಮಾರು 1.03ಕೋಟಿ ರೂ. ವಿದ್ಯುತ್‌ ಬಿಲ್‌ ಪಾವತಿ ಬಾಕಿ ಉಳಿಸಿಕೊಂಡಿದ್ದು, ಈಗಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ(ಹಳೇ ಜಿಲ್ಲಾಸ್ಪತ್ರೆ)ಯು 64.54ಲಕ್ಷ ರೂ. ವಿದ್ಯುತ್‌ ಬಿಲ್‌ ಪಾವತಿಸದೆ ಮೀನಾಮೇಷ ಎಣಿಸುತ್ತಿವೆ. ಇಡೀ ಜಿಲ್ಲೆಯಲ್ಲೆ ಅತೀ ದೊಡ್ಡ ಮೊತ್ತದ ಬಿಲ್‌ ಪಾವತಿ ಬಾಕಿ ಉಳಿಸಿಕೊಂಡಿರುವ ಸಂಸ್ಥೆಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸರಕಾರದ ಎಲ್ಲಾ ಇಲಾಖೆಗಳು ಪ್ರತೀ ತಿಂಗಳು ವಿದ್ಯುತ್‌ ಬಿಲ್‌ ಪಾವತಿ ಮಾಡುತ್ತಿವೆ. ಕೆಲ ಇಲಾಖೆಗಳು 3 ತಿಂಗಳಿಗೊಮ್ಮೆ, ಇನ್ನೂ ಕೆಲ ಇಲಾಖೆಗಳು ಅನುದಾನ ಬಂದಾಗ ಬೆಸ್ಕಾಂ ಬಿಲ್‌ ಪಾವತಿ ಮಾಡುತ್ತಿವೆ. ಹೀಗಿರುವಾಗ ಜಿಲ್ಲಾಸ್ಪತ್ರೆ ಮಾತ್ರ ಕೋಟ್ಯಾಂತರ ರೂಪಾಯಿ ವಿದ್ಯುತ್‌ ಬಿಲ್‌ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿದೆ.

ಬೇರೆ ಕೆಲಸಗಳಿಗೆ ಬಳಕೆ :

ಜಿಲ್ಲಾಸ್ಪತ್ರೆಗೆ ಬಂದ ಅನುದಾನವನ್ನು ಬೇರೆ ಕೆಲಸಗಳಿಗೆ ಬಳಸಿಕೊಂಡಿದ್ದು, ಅಲ್ಲಿನ ಅಧಿಕಾರಿಗಳು ವಿದ್ಯುತ್‌ ಬಿಲ್‌ ಪಾವತಿಸದಂತೆ ನಿರ್ಲಕ್ಷ್ಯ ತೋರುತ್ತಿದ್ದಾರೆ. ಇಲಾಖೆ ವತಿಯಿಂದ ಹಲವು ಬಾರಿ ನೋಟೀಸ್‌ ನೀಡಿದರೂ ಬಿಲ್‌ ಪಾವತಿ ಮಾಡುತ್ತಿಲ್ಲ ಎಂಬುದು ಬೆಸ್ಕಾಂ ಅಧಿಕಾರಿಗಳ ಆರೋಪವಾಗಿದೆ.

ಈ ಹಿಂದೆ ಗ್ರಾಮ ಪಂಚಾಯಿತಿಗಳು ಅತೀ ದೊಡ್ಡ ಮೊತ್ತದ ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಳ್ಳುತ್ತಿದ್ದವು. ಪ್ರಕಟಣೆ ಹಾಗೂ ಪ್ರತೀ ತಿಂಗಳು ಬಿಲ್‌ ಕಳಿಸಿ ಎಚ್ಚರಿಸಿರುವ ಪರಿಣಾಮ ಕೆಲ ತಿಂಗಳ ಹಿಂದೆ ಎಲ್ಲಾ ಗ್ರಾಮ ಪಂಚಾಯಿತಿಗಳು ಬಿಲ್‌ ಪಾವತಿ ಮಾಡುತ್ತಿವೆ. ಗ್ರಾಮ ಪಂಚಾಯಿತಿಗಳಿಂದ ಹೆಚ್ಚಿನ ಬಿಲ್‌ ಬಾಕಿ ಇಲ್ಲ. ಜಿಲ್ಲಾಸ್ಪತ್ರೆ ಮಾತ್ರ ಗರಿಷ್ಠ ಬಿಲ್‌ ಬಾಕಿ ಉಳಿಸಿಕೊಂಡಿದೆ.

ಇದನ್ನೂ ಓದಿ : ಈ ದಿನ ಸಂಪಾದಕೀಯ | ರೂಪಾಯಿ ಮೌಲ್ಯ ಕುಸಿತವೂ, ವಿಶ್ವಗುರುವಿನತ್ತ ಮೋದಿ ಭಾರತವೂ

ಬಿಲ್‌ ಪಾವತಿಸುವಂತೆ ನೋಟೀಸ್‌ :

ಸಾಮಾನ್ಯವಾಗಿ ಜಿಲ್ಲಾಸ್ಪತ್ರೆ ಮತ್ತು ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಗ್ರಾಮೀಣ ಭಾಗದ ಜನರೇ ಬರುತ್ತಾರೆ. ವಿದ್ಯುತ್‌ ಕಡಿತಗೊಳಿಸಿದರೆ ಸಾರ್ವಜನಿಕರಿಗೆ ತೊಡುಕಾಗುತ್ತದೆ. ಆದ್ದರಿಂದ, ಬಿಲ್‌ ಪಾವತಿ ಮಾಡುವಂತೆ ಅಧಿಕಾರಿಗಳಿಗೆ ಈಗಾಗಲೇ ಎಚ್ಚರಿಕೆ ನೀಡಿದ್ದೇವೆ. ಡಿಸೆಂಬರ್‌ ಅಂತ್ಯಕ್ಕೆ ವಿದ್ಯುತ್‌ ಪಾವತಿ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ, ಇನ್ನೂ ಪಾವತಿಯಾಗಿಲ್ಲ. ಪಾವತಿ ಮಾಡದಿದ್ದರೆ ಪತ್ರಿಕಾ ಪ್ರಕಟಣೆ ಹೊರಡಿಸಲಾಗುವುದು ಎನ್ನುತ್ತಾರೆ ಬೆಸ್ಕಾಂ ಉನ್ನತ ಅಧಿಕಾರಿ.

ಈ ಕುರಿತು ಈದಿನ ಡಾಟ್‌ ಕಾಮ್‌ ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಕರೆ ಮಾಡಲಾಗಿದ್ದು, ಜಿಲ್ಲಾ ಶಸ್ತ್ರಚಿಕಿತ್ಸಕರು ಕರೆ ಸ್ವೀಕರಿಸಲಿಲ್ಲ.

WhatsApp Image 2024 08 09 at 11.58.31 de404b09
+ posts

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ.

ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ವಿಜಯ್‌ ಕುಮಾರ್ ಗಜ್ಜರಹಳ್ಳಿ
ವಿಜಯ್‌ ಕುಮಾರ್ ಗಜ್ಜರಹಳ್ಳಿ
ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾಮಾಂತರ ಜಿಲ್ಲಾ ಸಂಯೋಜಕರು. ಪತ್ರಕರ್ತ, ಪರಿಸರ ಪ್ರೇಮಿ. ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಗಜ್ಜರಹಳ್ಳಿ ಗ್ರಾಮದವರು. 

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...