ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್‌ಗಳ ಕಿಮೋಥೆರಪಿ ಚಿಕಿತ್ಸೆ ಘಟಕ ಆರಂಭ: ಡಾ. ಶಿವಾನಂದ ಮಾಸ್ತಿಹೊಳಿ

Date:

ವಿಜಯಪುರ ನಗರದ ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗಾಗಿ ಕಿಮೋಥೆರಪಿ ಚಿಕಿತ್ಸೆ ಘಟಕ ಆರಭಿಸಲಾಗಿದೆ. 10 ಬೆಡ್‌ಗಳ ಸೌಲಭ್ಯ ಮಾಡಲಾಗಿದ್ದು, ಜಿಲ್ಲೆಯ ಜನತೆ ಸ್ಥಳೀಯವಾಗಿ ಇನ್ನುಮುಂದೆ ಕಿಮೋಥೆರಪಿ ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದೆ. ವೈದ್ಯರು, ಸಿಬ್ಬಂದಿ ಹಾಗೂ ಅಗತ್ಯ ಉಪಕರಣಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ತಿಳಿಸಿದ್ದಾರೆ.

- Advertisement -

ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ತಿಳಿಸಿದ ಅವರು, “ಕ್ಯಾನ್ಸರ್‌ಗೆ ಸಂಬಂಧಿಸಿದಂತೆ ಮೊದಲ ಬಾರಿಗೆ ತಪಾಸಣೆ ಮಾಡಿಕೊಂಡ ನಂತರದಲ್ಲಿ ಮೂರು ತಿಂಗಳು ಕಿಮೋಥೆರಪಿ ಪಡೆಯಬೇಕಾಗುತ್ತದೆ. ವಾರಕ್ಕೊಮ್ಮೆ ಈ ಚಿಕಿತ್ಸೆ, ಇಂಜೆಕ್ಷನ್ ತೆಗೆದುಕೊಳ್ಳುವುದು ಅಗತ್ಯವಾಗಿರುತ್ತದೆ. ಈಗ ಜಿಲ್ಲಾಸ್ಪತ್ರೆಯಲ್ಲಿ ಅಂತಹ ಕಿಮೋಥೆರಪಿ ನೀಡಲಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“10 ಬೆಡ್‌ಗಳ ಸೌಲಭ್ಯ ಮಾಡಲಾಗಿದ್ದು, ಆಕ್ಸಿಜನ್, ವೆಂಟಿಲೇಟರ್ ವ್ಯವಸ್ಥೆಯನ್ನೂ ಮಾಡಲಾಗಿದೆ. ಆಸ್ಪತ್ರೆ ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಿ ನಿಯೋಜಿಸಲಾಗಿದೆ. ನಮ್ಮಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸಕರಿದ್ದು, ಶಸ್ತ್ರ ಚಿಕಿತ್ಸೆ ಹಾಗೂ ಕಿಮೋಥೆರಪಿ ಮಾಡಲಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಕಿಮೋ ವೆಚ್ಚವು ಕ್ಯಾನ್ಸರ್ ಕಾಯಿಲೆ ಮೇಲೆ ಅವಲಂಬನೆಯಾಗಿರುತ್ತದೆ. ಕೆಲವೊಮ್ಮೆ ₹5.2ಲಕ್ಷ ಇಲ್ಲವೇ ₹20,000ದಲ್ಲಿ ಚಿಕಿತ್ಸೆ ಸಿಗುತ್ತದೆ. ಆದರೆ, ಇದೀಗ ಜಿಲ್ಲಾಸ್ಪತ್ರೆಯಲ್ಲಿ ಅದರ ಸೌಲಭ್ಯ ಸಿಗಲಿದೆ” ಎಂದು ಮಾಹಿತಿ ನೀಡಿದರು.

ರಾಜ್ಯದಲ್ಲಿ ಐಸಿಎಂಆರ್ -ಎನ್‌ಆರ್‌ಸಿಪಿ 2023ರ ವರದಿಯ ಪ್ರಕಾರ ಸುಮಾರು 70 ಸಾವಿರ ಹೊಸ ಕ್ಯಾನ್ಸರ್ ಪ್ರಕರಣಗಳನ್ನು ವರದಿಯಾಗಿವೆ. ಪ್ರಮುಖವಾಗಿ ಸ್ತನ(ಶೇ.18), ಗರ್ಭಕಂಠ(ಶೇ.14), ಬಾಯಿ(ಶೇ.12), ಶ್ವಾಸಕೋಶ(ಶೇ.8) ಮತ್ತು ಕೊಲೊರೆಕ್ಟಲ್(ಶೇ.6) ಕ್ಯಾನ್ಸರ್‌ಗಳು ಕಾಣಿಸಿಕೊಂಡಿವೆ.

ಇದನ್ನೂ ಓದಿದ್ದೀರಾ? ಚಾಮರಾಜನಗರ | ತಾಂತ್ರಿಕ ಕಾರಣಗಳಿಂದ 273 ಕುಟುಂಬ ಜಾತಿ ಗಣತಿ ನೋಂದಣಿಯಿಂದ ಹಿಂದುಳಿದಿದೆ : ವಡಗೆರೆ ದಾಸ್

“ಪ್ರತಿ ಒಂದು ಲಕ್ಷ ಜನಸಂಖ್ಯೆಯಲ್ಲಿ 12 ಜನರಿಗೆ ಬಾಯಿ ಕ್ಯಾನ್ಸರ್, ಮಹಿಳೆಯರಲ್ಲಿ 23 ಸ್ತನ ಕ್ಯಾನ್ಸರ್ ಪ್ರಕರಣಗಳು, 15 ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಪತ್ತೆಯಾಗುತ್ತಿವೆ. ಹೀಗಾಗಿ ವಿಜಯಪುರ ಜಿಲ್ಲಾ ಸೇರಿ 16 ಜಿಲ್ಲೆಗಳಲ್ಲಿ ಕಿಮೋಥೆರಪಿ ಘಟಕಗಳನ್ನು ಸರ್ಕಾರ ಆರಂಭಿಸಿದೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...