ರಾಜಧಾನಿಯಲ್ಲಿ ಹೇಯ ಕೃತ್ಯ : 10ರ ಹರೆಯದ ವಿದ್ಯಾರ್ಥಿನಿಯ ಅತ್ಯಾಚಾರಗೈದ ಪ್ರಾಂಶುಪಾಲ

Date:

ರಾಜ್ಯ ರಾಜಧಾನಿಯೇ ಬೆಚ್ಚಿ ಬೀಳಿಸುವ ಹೇಯ ಕೃತ್ಯವೊಂದು ವರದಿಯಾಗಿದೆ. ಹತ್ತು ವರ್ಷದ ವಿದ್ಯಾರ್ಥಿನಿಯನ್ನು ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರಗೈದಿರುವ ಆರೋಪ ಕೇಳಿಬಂದಿದೆ.

ವರ್ತೂರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದ್ದು, ಶಾಲಾ‌ ಸಂಸ್ಥಾಪಕ ಮತ್ತು ಪ್ರಾಂಶುಪಾಲನಾಗಿರುವ ವ್ಯಕ್ತಿಯೇ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಈ ದಿನ.ಕಾಮ್ ವರ್ತೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿದಾಗ, ‘ಘಟನೆಯ ಬಗ್ಗೆ ಮಾಹಿತಿ ಬಂದಿದೆ. ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮುಂದಿನ ಪ್ರಕ್ರಿಯೆ ನಡೆಸುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಿನ್ನೆ(ಆ.03) ಎಂದಿನಂತೆ 10 ವರ್ಷದ ವಿದ್ಯಾರ್ಥಿನಿ ಶಾಲೆಗೆ ತೆರಳಿದ್ದಳು. ಶಾಲೆಗೆ ಬಂದ ವಿದ್ಯಾರ್ಥಿನಿಯನ್ನು ಕಂಡ ಪ್ರಾಂಶುಪಾಲ ವಿದ್ಯಾರ್ಥಿನಿಯನ್ನು ಖಾಲಿಯಾಗಿದ್ದ ಕೊಠಡಿಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಮನೆಗೆ ಬಂದ ಬಳಿಕ ವಿದ್ಯಾರ್ಥಿನಿ ನೋವು ತಾಳದೆ ಒದ್ದಾಡುತ್ತಿರುವುದನ್ನು ಗಮನಿಸಿ, ಪೋಷಕರು ಮಗಳ ಬಳಿ ವಿಚಾರಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.

ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದ್ದು, ಈ ವಿಚಾರವಾಗಿ ಕೇಳಿದಾಗ ಬಾಲಕಿ ನಡೆದ ಘಟನೆ ವಿವರಿಸಿದ್ದಾಳೆ.

ಮೊದಲು ಪ್ರಾಂಶುಪಾಲರ ಕೊಠಡಿಗೆ ಕರೆದುಕೊಂಡು ಹೋದರು. ವಿಶ್ರಾಂತಿ ಪಡೆಯುವಂತೆ ಹೇಳಿ ಅತ್ಯಾಚಾರ ಎಸಗಿದರು. ನಂತರ ಕೇಕ್ ತಿನ್ನಿಸಿ ಕಳುಹಿಸಿದರು ಎಂದು ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಪ್ರಾಂಶುಪಾಲನ ಕೃತ್ಯವನ್ನು ವಿವರಿಸಿದ್ದಾಳೆ.

ಸದ್ಯ ಮಗುವಿಗೆ ರಕ್ತಸ್ರಾವ ಹೆಚ್ಚಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವರದಿಯಾಗಿದೆ.

ಅತ್ಯಾಚಾರಕ್ಕೊಳಗಾದ 10 ವರ್ಷದ ಬಾಲಕಿ ನರದೌರ್ಬಲ್ಯ(Mild Dyslexia oct) ಎಂಬ ಕಾಯಿಲೆಯಿಂದ ಬಳಲುತ್ತಿದ್ದಳು. ವರ್ತೂರಿನ ಗುಂಜೂರು ಸಮೀಪದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು ಎಂದು ವರದಿಯಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಬಸ್‌ಗಳಿಲ್ಲದೇ ಪರದಾಟ; ವಿದ್ಯಾರ್ಥಿಗಳ ಪ್ರತಿಭಟನೆ

ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ....

ಬೆಂಗಳೂರು | ಫೆ.26ರಿಂದ ಮೆಜೆಸ್ಟಿಕ್ – ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆ

ಬೆಳಗಿನ ಜನದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ಮತ್ತು ಗರುಡಾಚಾರ್‌ಪಾಳ್ಯ...

ವಿಪಕ್ಷ ನಾಯಕನ ಹುದ್ದೆಗೆ ಅಶೋಕ್ ನಾಲಾಯಕ್: ಪ್ರಮೋದ್ ಮುತಾಲಿಕ್

ವಿಧಾನಸಭೆ ವಿಪಕ್ಷ ನಾಯಕನ ಹುದ್ದೆಗೆ ಆರ್ ಅಶೋಕ್ ನಾಲಾಯಕ್. ಬೆಂಗಳೂರಿನ ಚಾಮರಾಜಪೇಟೆಯಲ್ಲಿ...

ಶಿವಮೊಗ್ಗ | ಫೆ.24ರಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ...