ಕಲಬುರಗಿ | ಬಡ್ತಿ ಪಡೆದಿದ್ದ ಜಿಲ್ಲೆಯ 100ಕ್ಕೂ ಹೆಚ್ಚು ಅಧಿಕಾರಿಗಳಿಗೆ ಹಿಂಬಡ್ತಿ

Date:

ಕಳೆದ ವರ್ಷ ಬಡ್ತಿ ಪಡೆದಿದ್ದ 100ಕ್ಕೂ ಅಧಿಕ ನೌಕರರು ಇದೀಗ, ಹಿಂಬಡ್ತಿ ಪಡೆದಿರುವ ಅಪರೂಪದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. 68 ಮಂದಿ ದ್ವಿತೀಯ ವಿಭಾಗದ ಸಹಾಯಕ (ಎಸ್‌ಡಿಎ)/ಗ್ರಾಮ ಆಡಳಿತಾಧಿಕಾರಿಗಳು, 33 ಮಂದಿ ಪೇದೆಗಳು ಸೇರಿದಂತೆ ಕಂದಾಯ ಇಲಾಖೆಯ 100ಕ್ಕೂ ಅಧಿಕ ನೌಕರರು 2023ರಲ್ಲಿ ಎಫ್‌ಡಿಎ ಹುದ್ದೆಗಳಿಗೆ ಬಡ್ತಿ ಪಡೆದಿದ್ದರು. ಈಗ ಆ ಎಲ್ಲ ನೌಕರರ ಬಡ್ತಿಯನ್ನು ಹಿಂಪಡೆಯಲಾಗಿದೆ.

ಅಧಿಕೃತ ಮೂಲಗಳ ಪ್ರಕಾರ, ಕಲಬುರಗಿ ಜಿಲ್ಲೆಯ ಕಂದಾಯ ಇಲಾಖೆಯ ವಿವಿಧ ಕಚೇರಿಗಳಲ್ಲಿ 68 ನೌಕರರು (33 ದ್ವಿತೀಯ ವಿಭಾಗ ಸಹಾಯಕರು ಮತ್ತು 35 ಗ್ರಾಮಾಭಿವೃದ್ಧಿ ಅಧಿಕಾರಿಗಳು) ಪ್ರಥಮ ವಿಭಾಗದ ಸಹಾಯಕರಾಗಿ (ಎಫ್‌ಡಿಎ) ಬಡ್ತಿ ಪಡೆದಿದ್ದರು. ಅವರೆಲ್ಲರಿಗೂ 2021ರ ಜುಲೈ 17ರಿಂದ ಪೂರ್ವಾನ್ವಯವಾಗುವಂತೆ ಎಫ್ ಡಿಎ ಹುದ್ದೆಯಲ್ಲಿ ವೇತನ ಹೆಚ್ಚಳ ಮತ್ತು ಬಡ್ತಿ ನೀಡಿ 2023ರ ಮೇ 18ರಂದು ಆದೇಶ ನೀಡಲಾಗಿತ್ತು ಎಂದು ‘ಟಿಎನ್‌ಐಎ’ ವರದಿ ಮಾಡಿದೆ.

ಎಸ್‌ಡಿಎ ಮತ್ತು ಗ್ರಾಮಾಭಿವೃದ್ಧಿ ಅಧಿಕಾರಿಗಳಿಗೆ ಬಡ್ತಿ ಮತ್ತು ಪೋಸ್ಟಿಂಗ್ ಮಾಡುವಾಗ ಎಷ್ಟು ಎಫ್‌ಡಿಎ ಹುದ್ದೆಗಳು ಖಾಲಿ ಇವೆ ಎಂಬ ಅಂಶವನ್ನು ಅಂದಿನ ಜಿಲ್ಲಾಧಿಕಾರಿ ನೇತೃತ್ವದ ಅಧಿಕಾರಿಗಳು ಪರಿಗಣಿಸಿಲ್ಲ ಎಂಬ ಅಂಶವೂ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಡ್ತಿ ಪಡೆಯುವ ನೌಕರರು ಯಾವುದೇ ಇಲಾಖಾ ವಿಚಾರಣೆ ಎದುರಿಸಿದ್ದಾರೆಯೇ ಎಂಬ ವಿವರಗಳನ್ನು ಪಡೆಯುವುದು ಹಾಗೂ ವಿಚಾರಣೆಯ ಅಂತಿಮ ವರದಿಯನ್ನು ನೀಡುವುದು ಅಗತ್ಯವಾಗಿತ್ತು. ಆದರೆ ಬಡ್ತಿ ನೀಡುವಾಗ ಈ ವಿಧಾನವನ್ನು ಅನುಸರಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಕಲಬುರಗಿಯಲ್ಲಿ ಎಫ್‌ಡಿಎ ಹುದ್ದೆಗಳು ಖಾಲಿ ಇಲ್ಲದಿದ್ದರೂ ಬಡ್ತಿ ನೀಡಲಾಗಿದೆ ಎಂದು ಬಡ್ತಿ ನೀಡುವ ಪ್ರಕ್ರಿಯೆ ನಿಲ್ಲಿಸುವಂತೆ ಕರ್ನಾಟಕ ರಾಜ್ಯ ಗ್ರಾಮಾಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು ಕಂದಾಯ ಇಲಾಖೆ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ, ಅಗತ್ಯ ಕ್ರಮ ಕೈಗೊಂಡು ಸರ್ಕಾರಕ್ಕೆ ಅನುಪಾಲನಾ ವರದಿ ಕಳುಹಿಸುವಂತೆ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗೆ ಕಂದಾಯ ಇಲಾಖೆ ಕಾರ್ಯದರ್ಶಿ ಸೂಚಿಸಿದ್ದಾರೆ.

ಪ್ರಕರಣದ ಬಗ್ಗೆ ವಿಚಾರಣೆ ನಡೆಸಿರುವ ಈಗಿನ ಜಿಲ್ಲಾಧಿಕಾರಿ ಫೌಜಿಯಾ ತರನಮ್ ಅವರು ರಾಜ್ಯ ಸರ್ಕಾರದ ನಿರ್ದೇಶನಗಳಂತೆ 2023ರಲ್ಲಿ ಹೊರಡಿಸಿದ್ದ ಬಡ್ತಿ ಆದೇಶವನ್ನು 2024ರ ಫೆಬ್ರವರಿ 14ರಂದು ಹಿಂಪಡೆದಿದ್ದಾರೆ. ಬಡ್ತಿ ಪಡೆದಿದ್ದ ನೌಕರರು ತಮ್ಮ ಮೂಲ ಹುದ್ದೆಗಳಿಗೆ ಹಿಂದಿರುಗಲು ಸೂಚನೆ ನೀಡಿದ್ದಾರೆ.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಡಿ’ ಗ್ರೂಪ್ ನೌಕರರ ಜೇಷ್ಠತಾ ಪಟ್ಟಿಯನ್ನು 2024ರ ಫೆಬ್ರವರಿ 16ರಂದು ಪ್ರಕಟಿಸಲಾಗಿದ್ದು, ಸಂಬಂಧಪಟ್ಟ ನೌಕರರು ತಮ್ಮ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳೊಳಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...

ಬೆಂಗಳೂರು | ಐಸಿಯುನಲ್ಲಿದ್ದ ರೋಗಿಗೆ ರಕ್ತ ಬರುವ ಹಾಗೆ ಥಳಿಸಿದ ಕೆ.ಸಿ.ಜನರಲ್ ಆಸ್ಪತ್ರೆ ಸಿಬ್ಬಂದಿ

ರಾಜ್ಯ ರಾಜಧಾನಿ ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯ ಐಸಿಯುನಲ್ಲಿದ್ದ ರೋಗಿಯೊಬ್ಬರಿಗೆ ಆಸ್ಪತ್ರೆ ಸಿಬ್ಬಂದಿ...