ನಾಯಿಗಳ ದಾಳಿಗೆ 11 ಕುರಿಗಳು ಬಲಿ ಹಲವು ಕುರಿಗಳಿಗೆ ಗಾಯಗಳು

Date:

ಚಿಂತಾಮಣಿ:ನಾಯಿಗಳು ದಾಳಿ ನಡೆಸಿ 11 ಕುರಿಗಳನ್ನು ಬಲಿ ತೆಗೆದುಕೊಂಡಿದ್ದಲ್ಲದೆ,ಎಂಟಕ್ಕಿಂತ ಹೆಚ್ಚು ಕುರಿಗಳನ್ನು ವಿಪರೀತ ಗಾಯಗೊಳಿಸಿರುವ ಘಟನೆ ಚಿಂತಾಮಣಿ ತಾಲ್ಲೂಕಿನ ಅಂಬಾಜಿದುರ್ಗ ಹೋಬಳಿಯ ಮಿಟ್ಟಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಗ್ರಹಾರಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

- Advertisement -

ಸದರಿ ಗ್ರಾಮದ ಚೌಡಪ್ಪ ಎಂಬುವರಿಗೆ ಸೇರಿದ ಜಾಗದಲ್ಲಿ ರೈತ ಸತ್ಯನಾರಾಯಣ ಬಿನ್ ಕನ್ನಯ್ಯ ಎಂಬುವರು ಸುಮಾರು 50ಕ್ಕಿಂತ ಹೆಚ್ಚು ಕುರಿಗಳು ಸಾಕುತ್ತಿದ್ದು ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಕುರಿಗಳ ಶೆಡ್ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು,11 ಕುರಿಗಳು ಸಾವನ್ನಪ್ಪಿವೆ ಹಾಗೂ ಎಂಟು ಕುರಿಗಳಿಗೆ ವಿಪರೀತ ಗಾಯಗಳಾಗಿದ್ದು,ಸ್ಥಳಕ್ಕೆ ಪಶು ವೈದ್ಯರಾದ ಡಾ!ಅಮರನಾಥ್ ರೆಡ್ಡಿ ಬೆಟ್ಟಿ ನೀಡಿ ಗಾಯಗೊಂಡಿರುವ ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸ್ಥಳಕ್ಕೆ ಕಂದಾಯ ಇಲಾಖೆಯ ರೆವಿನ್ಯೂ ಇನ್ಸ್ಪೆಕ್ಟರ್ ನರಸಿಂಹಮೂರ್ತಿ ಹಾಗೂ ಸಿಬ್ಬಂದಿ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕುರಿಗಳು ಸಾವನ್ನಪ್ಪಿರುವ ಬಗ್ಗೆ ವರದಿ ತಯಾರಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ.

ಇದನ್ನು ಓದಿದ್ದೀರಾ..? ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ- ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ರೈತ ಸತ್ಯನಾರಾಯಣ ಕುರಿಗಳನ್ನೇ ನಂಬಿಕೊಂಡು ಜೀವನ ನಡೆಸುತ್ತಿದ್ದು,ರಾತ್ರಿ ನಾಯಿಗಳ ದಾಳಿಗೆ 11 ಕುರಿಗಳು ಮೃತಪಟ್ಟಿದ್ದು ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ನಷ್ಟ ಉಂಟಾಗಿರಬಹುದು ಎಂದು ಅಂದಾಜಿಸಲಾಗಿದೆ ಕೂಡಲೇ ಸಂಬಂಧಪಟ್ಟ ಇಲಾಖೆಯವರು ರೈತನಿಗೆ ಪರಿಹಾರ ಒದಗಿಸಿ ಕೊಡಬೇಕೆಂದು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...